
ನವದೆಹಲಿ(ಏ.06): ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಲ್ಲಿ 5 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ ಭಾರತದಲ್ಲಿ ದಾಖಲಾಗಿದೆ. ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮತ್ತೆ ಭಾರತದಲ್ಲಿ ಕೋವಿಡ್ ಆತಂಕ ಹೆಚ್ಚಾಗುತ್ತಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಆದರೆ ಕೈಮೀರದಂತೆ ಎಚ್ಚರ ವಹಿಸಲು ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಇದೀಗ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಕೇಂದ್ರ ಆರೋಗ್ಯ ಸಚಿವ ಮಾನ್ಸುಕ್ ಮಾಂಡವಿಯಾ ತುರ್ತು ಸಭೆ ಕರೆದಿದ್ದಾರೆ. ಏಪ್ರಿಲ್ 7 ರಂದು ಎಲ್ಲಾ ರಾಜ್ಯಹಾಗೂ ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಸಚಿವರ ಜೊತೆ ತುರ್ತು ಸಭೆ ನಡೆಸಲಿದ್ದಾರೆ. ಕೋವಿಡ್ ಪರಿಸ್ಥಿತಿ ಎದುರಿಸಲು ಹಾಗೂ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಿದ್ದಾರೆ.
ವರ್ಚುವಲ್ ವಿಡಿಯೋ ಕಾನ್ಫೆರೆನ್ಸ್ ಮೂಲಕ ನಾಳೆ ಸಭೆ ನಡೆಯಲಿದೆ. ಆರೋಗ್ಯ ಸಚಿವರು, ನೀತಿ ಆಯೋಗ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಲ ರಾಜ್ಯಗಳು ಹಾಗೂ ನಗರಗಳಲ್ಲಿ ಕೋವಿಡ್ ಗಣನೀಯ ಏರಿಕೆ ಕಾಣುತ್ತಿದೆ. ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಯಾವುದೇ ಆತಂಕವಿಲ್ಲ ಎಂದು ತಜ್ಞ ವೈದ್ಯರು ಹೇಳಿದ್ದಾರೆ. ಮೈಲ್ಡ್ ಸಿಂಪ್ಟಸ್ ಕಾಣಿಸಿಕೊಳ್ಳುತ್ತಿದೆ. ಆಸ್ಪತ್ರೆ ದಾಖಲಾಗುವ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಯಾರೂ ಆತಂಕಪಡಬೇಕಿಲ್ಲ ಎಂದಿದ್ದಾರೆ.
ಕೋವಿಡ್ ಹೆಚ್ಚಳ ನಡುವೆ ಡೆಡ್ಲಿ ಮಾಬರ್ಗ್ ವೈರಸ್ ಪತ್ತೆ, ತಾಂಝಾನಿಯಾಗೆ ಪ್ರಯಾಣಕ್ಕೆ ನಿರ್ಬಂಧ!
ಈ ಸಭೆಯಲ್ಲಿ ಆಯಾ ರಾಜ್ಯಗಳಲ್ಲಿನ ಕೋವಿಡ್ ಪ್ರಕರಣ ಸಂಖ್ಯೆ, ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಆಸ್ಪತ್ರೆ ಕೇಂದ್ರಗಳಲ್ಲಿನ ಔಷಧಿಗಳು, ಕೋವಿಡ್ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. ಈ ಸಭೆಯಲ್ಲಿ ಕೆಲ ಮಾರ್ಗಸೂಚಿಗಳ ಕುರಿತು ಚರ್ಚೆಯಾಗಲಿದೆ.
195 ದಿನಗಳ ಬಳಿಕ ಭಾರತದಲ್ಲಿ 5,335 ಕೋವಿಡ್ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 23 ರಂದು 5,383 ಪ್ರಕರಣ ದಾಖಲಾಗಿತ್ತು. ಬಳಿಕ ಪ್ರತಿ ದಿನ ಇಳಿಕೆಯತ್ತ ಸಾಗಿತ್ತು. ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ ಇಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ.
ಕೋವಿಡ್ ಸೋಂಕಿಗೂ, ಹಾರ್ಟ್‌ಅಟ್ಯಾಕ್‌ಗೂ ಸಂಬಂಧವಿದ್ಯಾ? ಕೇಂದ್ರ ಆರೋಗ್ಯ ಸಚಿವರು ಹೇಳಿದ್ದೇನು?
ಬುಧವಾರ(ಏ.05) ಒಂದೇ ದಿನ 4,435 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿತ್ತು. ಈ ಸಂಖ್ಯೆ ಏಪ್ರಿಲ್ 6ಕ್ಕೆ 5,335ಕ್ಕೆ ಏರಿಕೆಯಾಗಿದೆ. ಈ ಮೂಲಕ ಪ್ರತತಿ ದಿನ ಹೊಸ ಕೋವಿಡ್ ಪ್ರಕರಣ ಸಂಖ್ಯೆ ಭಾರಿ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಏಪ್ರಿಲ್ 5 ರಂದು ದಾಖಲಾದ ಕೋವಿಡ್ ಪ್ರಕರಣ ಸಂಖ್ಯೆ ಕಳೆದ 163 ದಿನ(5 ತಿಂಗಳು)ಗಳಲ್ಲೇ ದಾಖಲಾದ ಗರಿಷ್ಠ ಸಂಖ್ಯೆಯಾಗಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ 4,777 ಕೋವಿಡ್ ಸಂಖ್ಯೆ ದಾಖಲಾಗಿದ್ದವು. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 23,091ಕ್ಕೆ ಏರಿಕೆಯಾಗಿದ್ದು ಮಹಾರಾಷ್ಟ್ರದಲ್ಲಿ 4, ಕೇರಳದಲ್ಲಿ 4, ಹಾಗೂ ಕರ್ನಾಟಕ, ಪಾಂಡಿಚೇರಿ, ರಾಜಸ್ಥಾನ, ಹರಾರಯಣ, ಗುಜರಾತ್, ಛತ್ತೀಸ್‌ಗಢ ಮತ್ತು ದೆಹಲಿಗಳಲ್ಲಿ ತಲಾ 1 ಸೇರಿ ಒಟ್ಟು 15 ಜನ ಸೋಂಕಿತರು ಸಾವನ್ನಪ್ಪಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ