ಪ್ರತಿ ಜಿಲ್ಲೆಯಲ್ಲಿ 75 ಕೆರೆ ನಿರ್ಮಾಣಕ್ಕೆ ಪ್ರಧಾನಿ ಮೋದಿ ಕರೆ

Published : Apr 22, 2022, 12:19 PM IST
ಪ್ರತಿ ಜಿಲ್ಲೆಯಲ್ಲಿ 75 ಕೆರೆ ನಿರ್ಮಾಣಕ್ಕೆ ಪ್ರಧಾನಿ ಮೋದಿ ಕರೆ

ಸಾರಾಂಶ

ಸ್ವಾತಂತ್ರ್ಯ ಸಿಕ್ಕು 75 ವರ್ಷ ಆದ ಹಿನ್ನೆಲೆ ಪ್ರತಿ ಜಿಲ್ಲೆಯಲ್ಲಿ 75 ಕೆರೆ ನಿರ್ಮಾಣಕ್ಕೆ ಪ್ರಧಾನಿ ಕರೆ

ಅಹಮದಾಬಾದ್‌: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ (ಅಮೃತ ಮಹೋತ್ಸವ) ವಾದ ಹಿನ್ನೆಲೆಯಲ್ಲಿ ಜನತೆ ಪ್ರತಿ ಜಿಲ್ಲೆಯಲ್ಲಿ 75 ಅಮೃತ ಸರೋವರ (ಕೆರೆ) ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಪ್ರಧಾನಿ ಮೋದಿ (Prime Minister Modi) ಭಾನುವಾರ ಕರೆ ಕೊಟ್ಟಿದ್ದಾರೆ. ಗುಜರಾತಿನ ಜುನಾಗಢದಲ್ಲಿ ಮಾ ಉಮಿಯಾ ಧಾಮದ ಮಹಾ ಪಾಠೋತ್ಸವ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫೆರನ್ಸ್‌ ಮೂಲಕ ಮಾತನಾಡಿದ ಮೋದಿ, ‘ಈಗಾಗಲೇ ಅಸ್ತಿತ್ವದಲ್ಲಿರುವ ಜಲಮೂಲಗಳನ್ನು ಅಗೆಯುವ, ಆಳಗೊಳಿಸುವ ಮತ್ತು ನವೀಕರಿಸುವ ಮೂಲಕ ಪ್ರತಿ ಜಿಲ್ಲೆಯಲ್ಲಿ 75 ‘ಅಮೃತ ಸರೋವರಗಳನ್ನು ರಚಿಸಲು ಜನರು ಮುಂದಾಗಬೇಕು. ಜಲ ಸಂರಕ್ಷಣೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

‘ಪ್ರತಿಯೊಬ್ಬರು ಸೇವಾ ಮನೋಭಾವದಿಂದ ತೊಡಗಿಸಿಕೊಂಡಾಗ ಪ್ರತಿ ಜಿಲ್ಲೆಯಲ್ಲಿ 75 ಸರೋವರದ ನಿರ್ಮಾಣ ಮಾಡುವುದು ಕಠಿಣವೇನಲ್ಲ. ಜನರು ಭೀಕರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಈಗಲಾದರೂ ಎಚ್ಚೆತ್ತು ಜನರು ಜಲ ಸಂರಕ್ಷಣಾ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು. ಪ್ರತಿವರ್ಷವು ಮಳೆಗಾಲ ಆರಂಭವಾಗುವ ಪೂರ್ವದಲ್ಲಿ ಕೆರೆಗಳನ್ನು ಆಳಗೊಳಿಸಿ, ನೀರಿನ ನಾಲೆಗಳನ್ನು ಸ್ವಚ್ಛಗೊಳಸುವ ಮೂಲಕ ಜಲ ಸಂರಕ್ಷಣೆ ಮಾಡಬಹುದು’ ಎಂದು ಹೇಳಿದರು.

PM Modi ನರೇಂದ್ರ ಮೋದಿ ಹತ್ಯೆಗೆ ಸಂಚು!

ಇದೇ ವೇಳೆ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಲು ಒತ್ತುನೀಡಿದ ಮೋದಿ,‘ರೈತರು ಸಾವಯವ ಕೃಷಿ ಮಾಡಲು ಮುಂದಾಗಬೇಕು. ಭೂ ಮಾತೆಯನ್ನು ರಾಸಾಯನಿಕದ ವಿಷದಿಂದ ಕಾಪಾಡಬೇಕು. ಇಲ್ಲದಿದ್ದರೆ ಮುಂದೊಂದು ದಿನ ಕೃಷಿ ಉತ್ಪನ್ನಗಳನ್ನು ಪಡೆಯುವುದೂ ಸಾಧ್ಯವಾಗುವುದಿಲ್ಲ’ ಎಂದು ಮೋದಿ ಎಚ್ಚರಿಸಿದರು. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮತ್ತು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು 2019 ರಲ್ಲಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಪ್ರಧಾನಿ ಮೋದಿಯವರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಏಪ್ರಿಲ್ 24 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಅಶೋಕ್ ಕೌಲ್ ( BJP's general secretary (organisation) Ashok Koul)  ಖಚಿತಪಡಿಸಿದ್ದಾರೆ.

Ugadi 2022: ಹೊಸ ವರ್ಷದಲ್ಲಿ ಪ್ರಧಾನಿ ಮೋದಿಯವರ ಜಾತಕ ಏನ್ ಹೇಳುತ್ತೆ..?

2019 ರಲ್ಲಿ ಆರ್ಟಿಕಲ್ 370 ರದ್ದತಿ (abrogation of Article 370) ಮತ್ತು ಹಿಂದಿನ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಇದು ಕಣಿವೆಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಎನಿಸಿಕೊಳ್ಳಲಿದೆ. ಪ್ರಧಾನ ಮಂತ್ರಿ ಮತ್ತು ಕಾಶ್ಮೀರಿ ಪಂಡಿತ್ (Kashmiri Pandit community ) ಸಮುದಾಯದ ಪ್ರತಿನಿಧಿಗಳ ನಡುವೆ ಸಭೆ ನಡೆಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೌಲ್ ದೃಢಪಡಿಸಿದರು, ಇದರಿಂದಾಗಿ ಕಾಶ್ಮೀರಿ ಪಂಡಿತರು ತಮ್ಮ ಕಳವಳವನ್ನು ಪ್ರಧಾನಿಯೊಂದಿಗೆ ನೇರವಾಗಿ ವ್ಯಕ್ತಪಡಿಸುವ ಅವಕಾಶ ನೀಡಲಾಗುತ್ತದೆ. ಇಂದು ಮುಂಜಾನೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರವನ್ನು 'ಭಯೋತ್ಪಾದನೆಯ ರಾಜಧಾನಿ"'ಯಿಂದ "ಪ್ರವಾಸೋದ್ಯಮ ರಾಜಧಾನಿ" ಯಾಗಿ ಪರಿವರ್ತಿಸಿದೆ ಎಂದು ಹೇಳಿದ್ದರು.

ಭಯೋತ್ಪಾದನೆಯನ್ನು ತೊಡೆದುಹಾಕಲು ಮತ್ತು ಜಮ್ಮು ಮತ್ತು ಕಾಶ್ಮೀರದ ಎರಡೂ ಪ್ರದೇಶಗಳ ಸಮಾನ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವುದು ಬಿಜೆಪಿ ಪ್ರತಿಜ್ಞೆಯಾಗಿದೆ. ಇದು ನಮ್ಮ ಕನಸು ಮತ್ತು ಬದ್ಧತೆಯಾಗಿದೆ ಮತ್ತು ನಾವು ಇದನ್ನು ಸಾಧಿಸುವವರೆಗೆ ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತೇವೆ" ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ಚುಗ್ ಮಾಧ್ಯಮಗಳಿಗೆ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅರಾವಳಿ ಉಳಿಸಿ: ಜನವರಿ 7 ರಿಂದ ಯುವ ಕಾಂಗ್ರೆಸ್‌ನಿಂದ 1,000 ಕಿ.ಮೀ ಬೃಹತ್ ಪಾದಾಯಾತ್ರೆ!
ಲಕ್ನೋ: ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹೂಕುಂಡಗಳ ಲೂಟಿ; ವಿಡಿಯೋ ವೈರಲ್