ರಷ್ಯಾದ ಮಾಸ್ಕೋದಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

Published : Oct 14, 2022, 01:38 PM IST
ರಷ್ಯಾದ ಮಾಸ್ಕೋದಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ಸಾರಾಂಶ

ರಷ್ಯಾದ ರಾಜಧಾನಿ ಮಾಸ್ಕೋದಿಂದ ದೆಹಲಿಗೆ ಹೊರಟಿದ್ದ ವಿಮಾನವೊಂದರಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದಿದ್ದು, ಇದರಿಂದ ಭಾರಿ ಆತಂಕ ಸೃಷ್ಟಿಯಾಗಿತ್ತು. ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ.

ನವದೆಹಲಿ: ರಷ್ಯಾದ ರಾಜಧಾನಿ ಮಾಸ್ಕೋದಿಂದ ದೆಹಲಿಗೆ ಹೊರಟಿದ್ದ ವಿಮಾನವೊಂದರಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದಿದ್ದು, ಇದರಿಂದ ಭಾರಿ ಆತಂಕ ಸೃಷ್ಟಿಯಾಗಿತ್ತು. ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕೂಡಲೇ ದೆಹಲಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.

ರಷ್ಯಾದಿಂದ (Russia)ಹೊರಟಿದ್ದ ಎಸ್ಯು 232 ಸಂಖ್ಯೆಯ ವಿಮಾನದಲ್ಲಿ ಬಾಂಬ್ ಇರುವುದಾಗಿ ದೆಹಲಿ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಹೀಗಾಗಿ ಮಧ್ಯರಾತ್ರಿ 3.20ರ ಸುಮಾರಿಗೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ದೆಹಲಿ ಪೊಲೀಸರು (Delhi police) ಕೂಡಲೇ ವಿಮಾನದಲ್ಲಿದ್ದ ಪ್ರಯಾಣಿಕರನ್ನೆಲ್ಲಾ ಕೆಳಗೆ ಇಳಿಸಿದ್ದಾರೆ. 

ಏರೊಫ್ಲಾಟ್ ಎಸ್‌ಯು 232 (Aeroflot SU 232) ಹೆಸರಿನ ಈ ವಿಮಾನದಲ್ಲಿ 386 ಪ್ರಯಾಣಿಕರು ಹಾಗೂ 16 ಸಿಬ್ಬಂದಿ ಇದ್ದರು. ಈ ವಿಮಾನವೂ ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬರುತ್ತಿತ್ತು. ಈ ಬಾಂಬ್ ಬೆದರಿಕೆ ಬಗ್ಗೆ ನಮ್ಮ ತನಿಖೆ (investigation) ನಡೆಯುತ್ತಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಅವರ ಲಗೇಜುಗಳನ್ನು ತಪಾಸಣೆ ನಡೆಸಲಾಗಿದೆ. ಪ್ರಸ್ತುತ ಈ ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ತನಿಖಾ ತಂಡದ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. 

ಮೇಲೆ ಪ್ಲೇನು ಕೆಳಗೆ ಟ್ರೈನು... ಹುಬ್ಳಿ ಮಂದಿ ಕೈಗೆ ಸಿಗಲ್ಲ ಇನ್ನು

ಗುರುವಾರ ರಾತ್ರಿ 11.15ರ ಸುಮಾರಿಗೆ ಈ ಬಾಂಬ್ ಬೆದರಿಕೆ ಕರೆ ಬಂದಿದೆ. ಇದಾಗಿ ಮಧ್ಯರಾತ್ರಿ 3.20 ರ ಸುಮಾರಿಗೆ ವಿಮಾನವೂ ದೆಹಲಿ ವಿಮಾನ ನಿಲ್ದಾಣದ ರನ್‌ವೇ 29 ರಲ್ಲಿ ಲ್ಯಾಂಡ್ ಆಗಿದೆ. ಕೂಡಲೇ ಭದ್ರತಾ ಸಿಬ್ಬಂದಿ ವಿಮಾನದಲ್ಲಿದ್ದ ಪ್ರಯಾಣಿಕರನ್ನೆಲ್ಲಾ ಬೇಗ ಬೇಗ ಕೆಳಗಿಳಿಸಿದ್ದಾರೆ. ನಂತರ ವಿಮಾನದಲ್ಲಿ ತಪಾಸಣೆ ನಡೆಸಿದ್ದಾರೆ. ಆದರೆ ವಿಮಾನದಲ್ಲಿ ಅನುಮಾನಾಸ್ಪದವಾದ ಯಾವುದೇ ವಸ್ತು ಕಂಡು ಬಂದಿಲ್ಲ ಹೀಗಾಗಿ ವಿಮಾನ ಸುರಕ್ಷಿತ ಎಂದು ಘೋಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ

.ಆಕಾಶದಲ್ಲಿ ಹಾರುತ್ತಿರುವಾಗ ಕಳಚಿ ಬಿತ್ತು ವಿಮಾನದ ಲ್ಯಾಂಡಿಂಗ್ ಟೈರ್

ಇದಕ್ಕೂ ಮುನ್ನ ಸೆಪ್ಟೆಂಬರ್ 10 ರಂದು ಲಂಡನ್‌ಗೆ ತೆರಳುವ ಏರ್ ಇಂಡಿಯಾ ವಿಮಾನದಲ್ಲಿಯೂ  ಬಾಂಬ್ ಇರುವುದಾಗಿ ಬೆದರಿಕೆ ಕರೆ ಬಂದಿತ್ತು. ಆದರೆ ನಂತರ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ ಇದೊಂದು ಹುಸಿಬಾಂಬ್ ಕರೆ ಎಂಬುದು ತಿಳಿದು ಬಂತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!