ಸ್ವಾತಂತ್ರ್ಯ ದಿನಾಚರಣೆಗೆ ಕೋವಿಡ್ ಸ್ಫೋಟ ಆತಂಕ, ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ

By Suvarna NewsFirst Published Aug 12, 2022, 5:06 PM IST
Highlights

ಅಜಾದಿಕಾ ಅಮೃತ ಮಹೋತ್ಸವ ಆಚರಣೆಗೆ ಭಾರತ ಸಕಲ ರೀತಿಯಲ್ಲೂ ಸಜ್ಜಾಗಿದೆ. ಹರ್ ಘರ್ ತಿರಂಗ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಆದರೆ ಇದರ ನಡುವೆ ಕೋವಿಡ್ ಆತಂಕವೂ ಹೆಚ್ಚಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಇದೀಗ ಸ್ವಾತಂತ್ರ್ಯ ದಿನಾಚರಣೆಗೆ ಮಾರ್ಗಸೂಚಿ ಪ್ರಕಟಿಸಿದೆ.

ನವದೆಹಲಿ(ಆ.12):  ಭಾರತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ದೇಶದೆಲ್ಲೆಡೆ ಪಸರಿಸಿದೆ. ಹಲವು ಕಾರ್ಯಕ್ರಮಗಳು ಚಾಲ್ತಿಯಲ್ಲಿದೆ. ಆಗಸ್ಟ್ 15ಕ್ಕೆ ಅದ್ಧೂರಿಯಾಗಿ ಹಾಗೂ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಭಾರತ ಸಜ್ಜಾಗಿದೆ. ಅಜಾದಿ ಕಾ ಅಮೃತ ಮಹೋತ್ಸವ ಸಂಭ್ರಮ ಕಾರಣ ಕೇಂದ್ರ ಸರ್ಕಾರ ಕೂಡ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದೆ. ಆದರೆ ಕೋವಿಡ್ ಆತಂಕವೂ ಹೆಚ್ಚಾಗಿದೆ. ಹೀಗಾಗಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರ ಸರ್ಕಾರ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದೆ. ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಜನಸಂದಣಿ ಹೆಚ್ಚಿರುವ ಪ್ರದೇಶಗಳಿಂದ ದೂರವಿರಲು ಸೂಚಿಸಿದೆ. ಸ್ವಾತಂತ್ಯ ದಿನಾಚರಣೆಗೆ ಸಾಮಾಜಿಕ ಅಂತರ ಪಾಲಿಸಲು ಸೂಚಿಸಲಾಗಿದೆ. ಇಷ್ಟೇ ಅಲ್ಲ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ವೈರಸ್‌ ಹರಡಲು ನೆರವು ನೀಡಬಾರದು. ವೈರಸ್ ನಿಯಂತ್ರಿಸಲು ಕೋವಿಡ್ ಮಾರ್ಗಸೂಚಿ ಪಾಲನೆ ಅತೀ ಅಗತ್ಯ. ಈ ಹಿಂದಿನ ಕೋವಿಡ್ ಅಲೆಗಳಲ್ಲಿ ಭಾರತೀಯರು ಪಾಲಿಸಿದ ಕಟ್ಟು ನಿಟ್ಟಿನ ಮಾರ್ಗಸೂಚಿಗಳಿಂದ ವೈರಸ್ ನಿಯಂತ್ರಿಸಲು ಸಾಧ್ಯವಾಗಿದೆ. ಹೀಗಾಗಿ ಮುಂಜಾಗ್ರತೆ ವಹಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ಹೇಳಿದೆ.

ಕಳೆದೆರಡು ವರ್ಷ ಕೋವಿಡ್ ಪ್ರಕರಣ ಕಾರಣ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಈ ಬಾರಿ ಅಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮವಾಗಿರುವುದರಿಂದ ಸ್ವತಃ ಕೇಂದ್ರ ಸರ್ಕಾರವೇ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದೆ. ಇತ್ತ ರಾಜ್ಯ ಸರ್ಕಾರಗಳು ಕೂಡ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಜ್ಜಾಗಿದೆ. ಕೋವಿಡ್ ಏರಿಕೆ ಇದೀಗ ಎಲ್ಲರಿಗೂ ತಲೆನೋವಾಗಿ ಪರಿಣಮಿಸಿದೆ.

ಭಾರತದಲ್ಲಿ ಅತೀ ವೇಗವಾಗಿ ಹರಡುವ, ಅಪಯಕಾರಿ ಹೊಸ ಒಮಿಕ್ರಾನ್ ಉಪತಳಿ ಪತ್ತೆ, ಹೈ ಅಲರ್ಟ್!

ದೆಹಲಿಯಲ್ಲಿ ಹೊಸ ಓಮಿಕ್ರಾನ್ ವೈರಸ್ ಪತ್ತೆಯಾಗಿರುವ ಕಾರಣ, ಆತಂಕ ಇನ್ನಷ್ಟು ಹೆಚ್ಚಾಗಿದೆ. ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಕೋವಿಡ್ ಏರಿಕೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ. ಇದರ ಜೊತೆಗೆ ಸಾವಿನ ಪ್ರಕರಣಗಳು ಏರಿಕೆಯಾಗಿದೆ.  ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಒಟ್ಟು 16,561 ಹೊಸ ಕೋವಿಡ್‌ ಪ್ರಕರಣ ದಾಖಲಾಗಿವೆ. ಇದೇ ವೇಳೆ 49 ಸೋಂಕಿತರು ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.25 ಲಕ್ಷಕ್ಕೆ ಇಳಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರವು ಶೇ.4.94ರಷ್ಟಿದೆ. ಒಟ್ಟು 207.29 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಿಸಲಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು 4.42 ಕೋಟಿ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಈವರೆಗೆ 5.26 ಲಕ್ಷ ಸಾವು ದಾಖಲಾಗಿವೆ. 4.35 ಕೋಟಿ ಜನರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ.

ಸರ್ವಾಧಿಕಾರಿ ಕಿಮ್ ಜಾಂಗ್ ಆರೋಗ್ಯ ಗಂಭೀರ, ಮಾಹಿತಿ ಬಹಿರಂಗ ಪಡಿಸಿದ ಸೋದರಿ!

ಬೆಂಗಳೂರಿನಲ್ಲಿ ಗರಿಷ್ಠ 1,225, ಮೈಸೂರು 88, ಬಳ್ಳಾರಿ 58, ಧಾರವಾಡ 42, ಬೆಳಗಾವಿ 29, ಚಾಮರಾಜನಗರ 27, ಮಂಡ್ಯ 24, ಶಿವಮೊಗ್ಗ ಜಿಲ್ಲೆಯಲ್ಲಿ 22 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ 40.26 ಲಕ್ಷ ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 39.75 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,134 ಮಂದಿ ಮರಣವನ್ನಪ್ಪಿದ್ದಾರೆ.

click me!