ಮಹಾರಾಷ್ಟ್ರದಲ್ಲಿ ಇನ್ನೂ 6 ತಿಂಗಳು ಮಾಸ್ಕ್‌ ಕಡ್ಡಾಯ: ಠಾಕ್ರೆ!

Published : Dec 21, 2020, 11:34 AM ISTUpdated : Dec 21, 2020, 12:02 PM IST
ಮಹಾರಾಷ್ಟ್ರದಲ್ಲಿ ಇನ್ನೂ 6 ತಿಂಗಳು ಮಾಸ್ಕ್‌ ಕಡ್ಡಾಯ: ಠಾಕ್ರೆ!

ಸಾರಾಂಶ

ಕೊರೋನಾ ವೈರಸ್‌ ಹರಡದಂತೆ ತಡೆಯಲು ಮಹಾರಾಷ್ಟ್ರ ಸರ್ಕಾರದ ಕ್ರಮ| ರಾಜ್ಯಾದ್ಯಂತ ಜನರು ಇನ್ನೂ ಆರು ತಿಂಗಳು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿದ ಸರ್ಕಾರ

ಮುಂಬೈ(ಡಿ.21): ಕೊರೋನಾ ವೈರಸ್‌ ಹರಡದಂತೆ ತಡೆಯಲು ಮಹಾರಾಷ್ಟ್ರ ಸರ್ಕಾರ ರಾಜ್ಯಾದ್ಯಂತ ಜನರು ಇನ್ನೂ ಆರು ತಿಂಗಳು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ನಡೆಸಿದ ಸಂವಾದದಲ್ಲಿ ಇದನ್ನು ಪ್ರಕಟಿಸಿದ್ದಾರೆ.

‘ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಆದರೂ ತಜ್ಞರು ರಾತ್ರಿ ಕಫä್ರ್ಯ ಅಥವಾ ಇನ್ನೊಂದು ಲಾಕ್‌ಡೌನ್‌ ಜಾರಿಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಾನು ಅದರ ಪರವಾಗಿಲ್ಲ. ಹೊಸ ವರ್ಷಾಚರಣೆ ವೇಳೆ ಎಲ್ಲರೂ ಎಚ್ಚರದಿಂದಿರಿ. ಮಾಸ್ಕ್‌ ಧರಿಸುವುದನ್ನು ರಾಜ್ಯದಲ್ಲಿ ಇನ್ನೂ ಆರು ತಿಂಗಳು ಕಡ್ಡಾಯಗೊಳಿಸಲಾಗಿದೆ’ ಎಂದು ಠಾಕ್ರೆ ಹೇಳಿದ್ದಾರೆ.

ಸುರಕ್ಷತಾ ಕ್ರಮಗಳನ್ನು ಪಾಲಿಸದವರು ತಮ್ಮ ಜೊತೆ ಬೇರೆಯವರನ್ನೂ ಅಪಾಯಕ್ಕೆ ತಳ್ಳುತ್ತಾರೆ. ಯುರೋಪ್‌ನ ಹಲವಾರು ದೇಶಗಳಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿದ್ದು, ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಅದನ್ನು ನೋಡಿಯಾದರೂ ನಾವು ಎಚ್ಚೆತ್ತುಕೊಳ್ಳಬೇಕು. ರಾಜ್ಯದಲ್ಲಿ ಜನಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆಯಾದರೂ ಶಾಲೆಗಳನ್ನು ಪುನಾರಂಭಿಸುವುದೇ ಸಮಸ್ಯೆಯಾಗಿದೆ ಎಂದೂ ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವಾಕ್ ಹೋಗಿದ್ದ 79 ವರ್ಷದ ಅಜ್ಜಿ ನಾಪತ್ತೆ: ನೆಕ್ಲೇಸ್‌ಗೆ ಮೊಮ್ಮಗ ಅಳವಡಿಸಿದ ಜಿಪಿಎಸ್‌ನಿಂದ ಪತ್ತೆ