ಮಹಾ ಅಕ್ರಮ ಕಟ್ಟಡ ಕುಸಿತ : ಬರ್ತ್‌ಡೇ ಖುಷಿಯಲ್ಲಿದ್ದ ಮಗು ಸೇರಿ 17 ಸಾವು

Kannadaprabha News   | Kannada Prabha
Published : Aug 29, 2025, 03:35 AM IST
Mahrashtra Building Collapse

ಸಾರಾಂಶ

ಮಹಾರಾಷ್ಟ್ರದ ವಿರಾರ್‌ನಲ್ಲಿ ಬುಧವಾರ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಒಂದು ವರ್ಷದ ಮಗು ಸೇರಿದಂತೆ 17 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಪಾಲ್ಘರ್‌: ಮಹಾರಾಷ್ಟ್ರದ ವಿರಾರ್‌ನಲ್ಲಿ ಬುಧವಾರ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಒಂದು ವರ್ಷದ ಮಗು ಸೇರಿದಂತೆ 17 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಇಲ್ಲಿನ ವಿಜಯ್‌ ನಗರದಲ್ಲಿ 50 ಫ್ಲ್ಯಾಟ್‌ಗಳನ್ನು ಹೊಂದಿರುವ ರಮಾಬಾಯಿ ಅಪಾರ್ಟ್ಮೆಂಟ್‌ನಲ್ಲಿ ದುರಂತ ನಡೆದಿದೆ. ನಾಲ್ಕನೇ ಮಹಡಿಯಲ್ಲಿ ಒಂದು ವರ್ಷದ ಮಗುವಿನ ಹುಟ್ಟುಹಬ್ಬ ನಡೆಯುತ್ತಿತ್ತು. ಆಗ ಇದ್ದಕ್ಕಿದ್ದಂತೆ 12 ಫ್ಲ್ಯಾಟ್‌ಗಳು ಕುಸಿದಿದ್ದು ನಿವಾಸಿಗಳು, ಅತಿಥಿಗಳು ಅವಶೇಷಗಳಡಿ ಸಿಲುಕಿಕೊಂಡರು.

ವಿಚಾರ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ , ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು, 20 ಗಂಟೆಗೂ ಹೆಚ್ಚಿನ ಕಾಲದಿಂದ ಕಾರ್ಯಚರಣೆ ನಡೆಯುತ್ತಿದೆ.

ಅನಧಿಕೃತವಾಗಿ ಕಟ್ಟಡ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದ್ದು, ಪೊಲೀಸರು ಬಿಲ್ಡರ್‌ ನಿತಲ್ ಗೋಪಿನಾತ್‌ ಸಾನೆ ಬಂಧಿಸಿದ್ದು, ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್