
ನವದೆಹಲಿ(ಮೇ.11): ಚೀನಾ, ಯುರೋಪ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲೂ ಕೋವಿಡ್ ಏರಿಕೆ ಕಾಣುತ್ತಿದೆ. ಇದರ ಬೆನ್ನಲ್ಲೇ 2ನೇ ಜಾಗತಿಕ ಕೋವಿಡ್ ಶೃಂಗಸಭೆ ಭಾರಿ ಮಹತ್ವ ಪಡೆದುಕೊಂಡಿದೆ. ಮೇ.12 ರಂದು ನಡೆಯಲಿರುವ 2ನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
ಮೋದಿ ಭಾಗವಹಿಸುವಿಕೆಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ(MEA) ಖಚಿತಪಡಿಸಿದೆ. ಈ ಮಹತ್ವದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಹ್ವಾನ ನೀಡಿದ್ದಾರೆ. ಈ ಆಹ್ವಾನವನ್ನು ಮೋದಿ ಸ್ವೀಕರಿಸಿದ್ದಾರೆ ಎಂದು MEA ಹೇಳಿದೆ.
ಪೋಖ್ರಾನ್ ಪರೀಕ್ಷೆ ವೀಡಿಯೊ ಮೂಲಕ ಅಟಲ್ ಬಿಹಾರಿ ವಾಜಪೇಯಿ ಸ್ಮರಿಸಿದ ಪ್ರಧಾನಿ ಮೋದಿ
ಕೋವಿಡ್ ಜಾಗತಿಕ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಾಂಕ್ರಾಮಿಕ ರೋಗಗಳನ್ನುತಡೆಗಟ್ಟುವುದು, ತಯಾರಿ ಹಾಗೂ ಆದ್ಯತೆ ಕುರಿತು ಮೋದಿ ಭಾಷಣ ಮಾಡಲಿದ್ದಾರೆ.
ವಿಶ್ವಕ್ಕೆ ಮಾರಕವಾಗಿ ಕಾಡುತ್ತಿರುವ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಅಂತ್ಯಹಾಡಲು ಪ್ರತಿ ದೇಶಗಳು ಮಾಡಬಬೇಕಾದ ಕಾರ್ಯಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಕೋವಿಡ್ ಹರಡುವಿಕೆ, ರೂಪಾಂತರಿ ತಳಿಗಳ ಆತಂಕ ಸೇರಿದಂತೆ ವಿಶ್ವದಲ್ಲಿ ಕೊರೋನಾ ಆತಂಕವನ್ನು ಅಂತ್ಯಗೊಳಿಸಲು ಈ ಶೃಂಗಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
2021ರ ಸೆಪ್ಟೆಂಬರ್ ತಿಂಗಳಲ್ಲಿ ಮೊದಲ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆ ಆಯೋಜಿಸಲಾಗಿತ್ತು. ಅಮೆರಿಕದಲ್ಲಿ ಆಯೋಜನೆಗೊಂಡ ಈ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರದ ಜನರ ಆರೋಗ್ಯ, ಅಭಿವೃದ್ಧಿ, ಆರ್ಥಿಕತೆ ಸೇರಿದಂತೆ ಪ್ರತಿಯೊಂದಕ್ಕೂ ಕೋವಿಡ್ ಅಡಚಣೆಯಾಗಿದೆ. ಕೋವಿಡ್ ಇನ್ನೂ ಅಂತ್ಯಗೊಂಡಿಲ್ಲ. ಹೀಗಾಗಿ ಮುನ್ನೆಚ್ಚರಿಕೆ ಅತೀ ಅಗತ್ಯ ಎಂದು ಮೋದಿ ಹೇಳಿದ್ದರು.
ಮೋದಿಯಿಂದ ಡೆನ್ಮಾರ್ಕ್ ಯುವರಾಣಿ ಮೇರಿಗೆ ಗಾಜಿನ ಹಕ್ಕಿ, ಯುವರಾಜನಿಗೆ ಡೋಕ್ರಾ ದೋಣಿ, ಏನಿದರ ಮಿಸ್ಟರಿ?
ರಾಜ್ಯದಲ್ಲಿ 129 ಜನರಿಗೆ ಸೋಂಕು, 128 ಚೇತರಿಕೆ
ರಾಜ್ಯದಲ್ಲಿ ಮಂಗಳವಾರ 129 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದೆ. 128 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.13,542 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಶೇ.0.95 ಪಾಸಿಟಿವಿಟಿ ದರ ದಾಖಲಾಗಿದೆ. ಕಳೆದ ಮೂರು ದಿನಗಳಿಂದ ಶೇ.1ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ವರದಿ ಆಗಿರುವುದರಿಂದ ವಾರದ ಪಾಸಿಟಿವಿಟಿ ದರ ಶೇ.1.15ಕ್ಕೆ ಕುಸಿದಿದೆ.
ಬೆಂಗಳೂರು ನಗರದಲ್ಲಿ 121, ಮೈಸೂರು, ದಕ್ಷಿಣ ಕನ್ನಡದಲ್ಲಿ ತಲಾ ಇಬ್ಬರು, ಬಾಗಲಕೋಟೆ, ಚಿತ್ರದುರ್ಗ, ಹಾಸನ ಮತ್ತು ಉತ್ತರ ಕನ್ನಡದಲ್ಲಿ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ 39.48 ಲಕ್ಷ ಮಂದಿಯಲ್ಲಿ ಕೋವಿಡ್ ಸೋಂಕು ತಗುಲಿದ್ದು,39.06 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 1,926 ಮಂದಿಯಲ್ಲಿ ಸಕ್ರಿಯ ಪ್ರಕರಣಗಳಿವೆ. 40,063 ಮಂದಿ ಮರಣವನ್ನಪ್ಪಿದ್ದಾರೆ. ನಗರದಲ್ಲಿ ಸೋಮವಾರ 88 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.50ಕ್ಕೆ ಇಳಿಕೆಯಾಗಿದೆ. 122 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್ ಸಾವು ದಾಖಲಾಗಿಲ್ಲ. ನಗರದಲ್ಲಿ ಒಟ್ಟು 1,805 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ ತೀವ್ರ ನಿಗಾ ವಿಭಾಗದಲ್ಲಿ ಇಬ್ಬರು ಮತ್ತು ಸಾಮಾನ್ಯ ವಾರ್ಡ್‌ನಲ್ಲಿ ಐದು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆ ಆರೈಕೆಯಲ್ಲಿದ್ದಾರೆ.
ಲಸಿಕೆ ಅಭಿಯಾನ:
ರಾಜ್ಯದಲ್ಲಿ ಮಂಗಳವಾರ 54,652 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. 6,666 ಮಂದಿ ಮೊದಲ ಡೋಸ್, 37,421 ಮಂದಿ ಎರಡನೇ ಡೋಸ್ ಮತ್ತು 11,601 ಮಂದಿ ಮುನ್ನೆಚ್ಚರಿಕೆ ಡೋಸ್ ಪಡೆದಿದ್ದಾರೆ. ಈವರೆಗೆ ಒಟ್ಟು 10.69 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ