Breaking News: ಕಾಶ್ಮೀರ ಕಣಿವೆ ಮತ್ತೆ ಉದ್ವಿಗ್ನ; ಮಾಜಿ ಸಿಎಂ ಮೆಹಬೂಬಾ ಮುಫ್ತಿ ಸೇರಿ ಹಲವು ನಾಯಕರು ಗೃಹಬಂಧನ!

Published : Dec 28, 2025, 04:50 PM IST
Mehbooba Mufti Placed Under House Arrest Over Reservation Policy Protest in JK

ಸಾರಾಂಶ

Mehbooba Mufti House Arrest: ಜಮ್ಮು ಮತ್ತು ಕಾಶ್ಮೀರದಲ್ಲಿನ ಹಾಲಿ ಮೀಸಲಾತಿ ನೀತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗುವುದಾಗಿ ಹೇಳಿದ ಬೆನ್ನಲ್ಲೇ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ.

ದೆಹಲಿ (ಡಿ.28): ಜಮ್ಮು ಮತ್ತು ಕಾಶ್ಮೀರದ ರಾಜಕೀಯ ವಲಯದಲ್ಲಿ ಮತ್ತೆ ಸಂಚಲನ ಸೃಷ್ಟಿಯಾಗಿದ್ದು, ಪಿಡಿಪಿ ಅಧ್ಯಕ್ಷೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ. ರಾಜ್ಯದ ಹಾಲಿ ಮೀಸಲಾತಿ ನೀತಿಯನ್ನು ವಿರೋಧಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಪ್ರತಿಭಟನೆಗೆ ಬೆಂಬಲ ನೀಡಿದ್ದಕ್ಕೆ ಗೃಹಬಂಧನ

ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿರುವ ಹಾಲಿ ಮೀಸಲಾತಿ ನೀತಿಯ ವಿರುದ್ಧ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ಆಯೋಜಿಸಿದ್ದರು. ಈ ಪ್ರತಿಭಟನೆಯಲ್ಲಿ ತಾವೂ ಭಾಗವಹಿಸುವುದಾಗಿ ಮೆಹಬೂಬಾ ಮುಫ್ತಿ ಘೋಷಿಸಿದ್ದರು. ಶಾಂತಿಗೆ ಧಕ್ಕೆ ಉಂಟಾಗುವ ಸಾಧ್ಯತೆಯನ್ನು ಮನಗಂಡು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಿ, ಹೊರಬರದಂತೆ ತಡೆದಿದ್ದಾರೆ.

ಗೃಹಬಂಧನದಲ್ಲಿ ಯಾರಾರು?

ಕೇವಲ ಮೆಹಬೂಬಾ ಮುಫ್ತಿ ಮಾತ್ರವಲ್ಲದೆ, ಅವರ ಪುತ್ರಿ ಇಲ್ತಿಜಾ ಮುಫ್ತಿ, ಶ್ರೀನಗರದ ಸಂಸದ ರುಹುಲ್ಲಾ ಮೆಹದಿ ಮತ್ತು ಪಿಡಿಪಿ ನಾಯಕ ವಹೀದ್ ಪಾರಾ ಅವರನ್ನೂ ಸಹ ಗೃಹಬಂಧನದಲ್ಲಿರಿಸಲಾಗಿದೆ. ಪ್ರಮುಖ ನಾಯಕರ ಸಂಚಾರಕ್ಕೆ ನಿರ್ಬಂಧ ಹೇರಿರುವುದು ಕಣಿವೆ ರಾಜ್ಯದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಸರ್ಕಾರದ ಈ ಕ್ರಮವನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ.

ಒಮರ್ ಅಬ್ದುಲ್ಲಾ ಸರ್ಕಾರಕ್ಕೆ ಸಂಕಷ್ಟ

ವಿದ್ಯಾರ್ಥಿಗಳ ನೇತೃತ್ವದಲ್ಲಿ ಇಂದು ಒಮರ್ ಅಬ್ದುಲ್ಲಾ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ಪ್ರತಿಭಟನೆ ಆಯೋಜಿಸಲಾಗಿತ್ತು. ಮೀಸಲಾತಿ ವಿಷಯದಲ್ಲಿ ವಿದ್ಯಾರ್ಥಿಗಳ ಆಕ್ರೋಶ ತೀವ್ರವಾಗುತ್ತಿದ್ದು, ರಾಜಕೀಯ ನಾಯಕರು ಅದಕ್ಕೆ ಸಾಥ್ ನೀಡಲು ಮುಂದಾಗಿದ್ದು ಸರ್ಕಾರಕ್ಕೆ ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಆರೋಪಿಸಲಾಗಿದೆ.

ಕಣಿವೆಯಲ್ಲಿ ಹೆಚ್ಚಿದ ಪೊಲೀಸ್ ಕಣ್ಗಾವಲು

ಪ್ರತಿಭಟನೆಯ ಕರೆ ಮತ್ತು ಪ್ರಮುಖ ನಾಯಕರ ಗೃಹಬಂಧನದ ಹಿನ್ನೆಲೆಯಲ್ಲಿ ಶ್ರೀನಗರ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನಾಕಾರರು ಬೀದಿಗೆ ಇಳಿಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಂಡ್ತಿ ತವರಿಗೆ ಹೋಗಿದ್ದೇ ತಪ್ಪಾಯ್ತು: ಅತ್ತೆ ಮನೆಗೆ ಜೆಸಿಬಿ ನುಗ್ಗಿಸಿದ ಅಳಿಯ
ಹಿಮಾಚಲ ಪ್ರವಾಸಿ ತಾಣದಲ್ಲಿ ಪ್ಯಾರಾಗ್ಲೈಡಿಂಗ್ ಪತನ, ಓರ್ವ ಸಾವು, ಮತ್ತೊರ್ವನಿಗೆ ಗಾಯ