
ನವದೆಹಲಿ(ಫೆ.03): ಗಣರಾಜ್ಯೋತ್ಸವ ದಿನದಂದು ರೈತರ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ದಾಳಿಯನ್ನು ಕೇಂದ್ರ ಗೃಹ ಸಚಿವಾಲಯ ಸಂಸತ್ತಿನಲ್ಲಿ ಸಮರ್ಥಿಸಿಕೊಂಡಿದೆ.
ಸಂಸತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ಜಿ. ಕೃಷ್ಣನ್ ರೆಡ್ಡಿ, ರೈತರ ಗಲಭೆಯನ್ನು ನಿಯಂತ್ರಿಸದೇ ಪೊಲೀಸರಿಗೆ ಬೇರೆ ಆಯ್ಕೆ ಇರಲಿಲ್ಲ. ರೈತರ ಪ್ರತಿಭಟನೆಯನ್ನು ಚದುರಿಸಲು ಅಶ್ರುವಾಯು, ಜಲಫಿರಂಗಿ ಹಾಗೂ ಸಣ್ಣ ಪ್ರಮಾಣದ ಬಲ ಪ್ರಯೋಗವನ್ನು ಮಾಡಲಾಯಿತು. ಪ್ರತಿಭಟನೆಯ ವೇಳೆ ಯಾವುದೇ ರೀತಿಯ ಸಾಮಾಜಿಕ ಅಂತರ ಪಾಲನೆ ಆಗಿಲ್ಲ. ಕೊರೋನಾ ನಿಯಂತ್ರಣದ ಹೊರತಾಗಿಯೂ ಮಾಸ್ಕ್ ಧರಿಸದೇ ಭಾರೀ ಸಂಖ್ಯೆಯ ಜನಜಂಗುಳಿ ಸೇರಿತ್ತು ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ ನೂತನ ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಮೂರು ತಿಂಗಳಿನಿಂದ ಹೋರಾಟ ನಡೆಸುತ್ತಿರುವ ರೈತರ ವಿರುದ್ಧ ದೆಹಲಿ ಪೊಲಿಸರು ರೈತರ ವಿರುದ್ಧ 39 ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ