
ನವದೆಹಲಿ (ಏ.5): ಆಪರೇಷನ್ ಸಿಂದೂರ ಬಳಿಕ ಇದೀಗ ಮಧ್ಯಪ್ರಾಚ್ಯ ಯುದ್ಧದ ವಿಚಾರದಲ್ಲೂ ಕಾಂಗ್ರೆಸ್ ನಾಯಕತ್ವ ಮತ್ತು ಹಿರಿಯ ನಾಯಕರ ನಡುವಿನ ಭಿನ್ನಾಭಿಪ್ರಾಯ ಬೀದಿಗೆ ಬಿದ್ದಿದೆ. ಇರಾನ್ ಸಂಘರ್ಷದ ಸಂದರ್ಭದಲ್ಲಿ ಮೋದಿ ಸರ್ಕಾರದ ರಾಜತಾಂತ್ರಿಕ ನಡೆ, ತೈಲ ನಿರ್ವಹಣೆಯನ್ನು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಠಿಣ ಪದಗಳಲ್ಲಿ ಟೀಕಿಸಿದರೆ, ಶಶಿತರೂರ್ ಸೇರಿ ನಾಲ್ಕೈದು ಹಿರಿಯ ಕಾಂಗ್ರೆಸ್ ಮುಖಂಡರು ಕೇಂದ್ರದ ಬೆನ್ನಿಗೆ ನಿಂತಿದ್ದಾರೆ.
ಮೋದಿ ಸರ್ಕಾರದಡಿ ಭಾರತದ ವಿದೇಶಾಂಗ ನೀತಿ ರಾಜಿಗೊಳಗಾಗಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಪೂರೈಕೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ರಾಹುಲ್ ಆರೋಪಿಸಿದ್ದು, ಸಂಸದ ಶಶಿತರೂರ್ ಮಾತ್ರ ಕೇಂದ್ರ ಸರ್ಕಾರ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೊಗಳಿದ್ದಾರೆ.
ಇನ್ನು ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಹೇಳಿದರೆ, ಮಾಜಿ ಸಚಿವ ಆನಂದ್ ಶರ್ಮಾ ಹಾಗೂ ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಕೂಡ ಮೋದಿ ಸರ್ಕಾರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರಾಚ್ಯ ಸಂಘರ್ಷ ವಿಚಾರದಲ್ಲಿ ಭಾರತದ ರಾಜತಾಂತ್ರಿಕ ನಡೆ ಪ್ರಬುದ್ಧ ಮತ್ತು ಕೌಶಲ್ಯ ಪೂರ್ಣವಾಗಿದೆ ಎಂದು ಶರ್ಮಾ ಹೇಳಿಕೊಂಡರೆ, ದೇಶದಲ್ಲಿ ಎಲ್‌ಪಿಜಿ ಪೂರೈಕೆ ಕೊರತೆ ಆಗಿಲ್ಲ. ಕೊರತೆ ಇದೆ ಎನ್ನುವಂಥ ವಾತಾವರಣ ಸೃಷ್ಟಿಸಲಾಗಿದೆ ಅಷ್ಟೆ ಎಂದು ಕಮಲ್‌ನಾಥ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ