
ಸಿಕರ್(ಏ.23): ಲಾಕ್‌ಡೌನ್ ಪರಿಣಾಮ ಇಲ್ಲಿನ ಶಾಲೆಯೊಂದರಲ್ಲಿ ಕ್ವಾರಂಟೈನ್‌ಗೆ ತುತ್ತಾಗಿದ್ದ ವಲಸೆ ಕಾರ್ಮಿಕರ ತಂಡವೊಂದು, ವಿರಾಮದ ಸಮಯವನ್ನು ಶಾಲೆಗೆ ಬಣ್ಣ ಬಳಿಯಲು, ಸ್ವಚ್ಛಗೊಳಿಸಲು ಬಳಸಿಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಸಿಕರ್‌ನ ಎರಡು ಸರ್ಕಾರಿ ಶಾಲೆಗಳಲ್ಲಿ 54 ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಈ ವೇಳೆ ಕಾರ್ಮಿಕರು ಅಕ್ಕಪಕ್ಕದ ಪ್ರದೇಶಗಳಿಂದ ಸುಣ್ಣ ಬಣ್ಣ ತರಿಸಿಕೊಂಡು ಶಾಲೆಯ ಗೋಡೆಗೆ ಬಳಿದು, ಹೊಸ ರೂಪ ನೀಡಿದ್ದಾರೆ.
ಕೊರೋನಾದ ನಿರ್ವಹಣೆ: ಮೋದಿ ವಿಶ್ವ ನಂ.1!
ಅಲ್ಲದೆ ಸಣ್ಣಪುಟ್ಟರಿಪೇರಿ ಮಾಡಿ ಎಲ್ಲರಿಂದ ಸೈ ಅನ್ನಿಸಿಕೊಂಡಿದ್ದಾರೆ. ಕಾರ್ಮಿಕರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ