ಟ್ರಂಪ್‌ ಪ್ರಮಾಣವಚನಕ್ಕೆ ಮೋದಿ ಕರೆಯಿರಿ ಎಂದು ಕೇಳಲು ಮಂತ್ರಿ ಅಮೆರಿಕಕ್ಕೆ ಹೋಗಿದ್ದರು: ರಾಹುಲ್‌ ಗಾಂಧಿ

Published : Feb 04, 2025, 06:30 AM IST
ಟ್ರಂಪ್‌ ಪ್ರಮಾಣವಚನಕ್ಕೆ ಮೋದಿ ಕರೆಯಿರಿ ಎಂದು ಕೇಳಲು ಮಂತ್ರಿ ಅಮೆರಿಕಕ್ಕೆ ಹೋಗಿದ್ದರು: ರಾಹುಲ್‌ ಗಾಂಧಿ

ಸಾರಾಂಶ

ರಾಹುಲ್‌ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ತಮ್ಮ ಆರೋಪಕ್ಕೆ ರಾಹುಲ್‌ ಸಾಕ್ಷ್ಯ ನೀಡಬೇಕೆಂದು ಲೋಕಸಭೆಯಲ್ಲಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಕೂಡ ಇಂಥ ಆರೋಪಕ್ಕೆ ಸಾಕ್ಷ್ಯ ನೀಡುವಂತೆ ರಾಹುಲ್‌ಗೆ ಸೂಚಿಸಿದ್ದಾರೆ.  

ನವದೆಹಲಿ(ಫೆ.04): ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಫಿಕ್ಸ್‌ ಮಾಡಲೆಂದೇ ವಿದೇಶಾಂಗ ಸಚಿವ ಜೈಶಂಕರ್‌ ಕಳೆದ ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ತೆರಳಿದ್ದರು ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ರಾಹುಲ್‌ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ತಮ್ಮ ಆರೋಪಕ್ಕೆ ರಾಹುಲ್‌ ಸಾಕ್ಷ್ಯ ನೀಡಬೇಕೆಂದು ಲೋಕಸಭೆಯಲ್ಲಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಕೂಡ ಇಂಥ ಆರೋಪಕ್ಕೆ ಸಾಕ್ಷ್ಯ ನೀಡುವಂತೆ ರಾಹುಲ್‌ಗೆ ಸೂಚಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಿಗೂ ನಕ್ಸಲ್‌ ಪ್ಯಾಕೇಜ್‌ ನೀಡಬೇಕಾದೀತು: ಲೆಹರ್‌ಸಿಂಗ್

ಈ ನಡುವೆ ತಮ್ಮ ಮೇಲಿನ ಆರೋಪವನ್ನು ಸಚಿವ ಜೈಶಂಕರ್‌ ಸ್ಪಷ್ಟವಾಗಿ ಅಲ್ಲಗಳೆದಿದ್ದು, ರಾಜಕೀಯ ಉದ್ದೇಶದಿಂದ ರಾಹುಲ್‌ ಈ ಸುಳ್ಳು ಹೇಳಿಕೆ ನೀಡಿದ್ದರೂ ಅದು ವಿದೇಶದಲ್ಲಿ ಭಾರತದ ಘನತೆಗೆ ಧಕ್ಕೆ ತರುತ್ತದೆ ಎಂದು ಎಚ್ಚರಿಸಿದ್ದಾರೆ.

ಭಾಗವತ್‌ರದ್ದು ದೇಶದ್ರೋಹದ ಹೇಳಿಕೆ, ಇದು ಭಾರತೀಯರಿಗೆ ಮಾಡಿದ ಅವಮಾನ: ರಾಹುಲ್ ಗಾಂಧಿ

ರಾಗಾ ಆರೋಪ:

ಸೋಮವಾರ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ರಾಹುಲ್ ಗಾಂಧಿ ಯಾರ ಹೆಸರನ್ನೂ ನೇರವಾಗಿ ಹೇಳದೇ, ‘ನಮ್ಮ ಪ್ರಧಾನಿಗಳಿಗೆ ಅಮೆರಿಕ ಅಧ್ಯಕ್ಷರ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಆಹ್ವಾನ ಪಡೆಯುವ ಉದ್ದೇಶದಿಂದ ನಾವಂತೂ ನಮ್ಮ ವಿದೇಶಾಂಗ ಸಚಿವರನ್ನು ಅಮೆರಿಕಕ್ಕೆ ಕಳುಹಿಸುತ್ತಿರಲಿಲ್ಲ’ ಎಂದು ಬಿಜೆಪಿಗೆ ಟಾಂಗ್‌ ನೀಡಿದ್ದರು.

ತಿರುಗೇಟು:

ಇದಕ್ಕೆ ತಿರುಗೇಟು ನೀಡಿರುವ ಸಚಿವ ಜೈಶಂಕರ್‌, ‘ಕಳೆದ ಡಿಸೆಂಬರ್‌ನಲ್ಲಿ ನಾನು ಅಮೆರಿಕಕ್ಕೆ ಭೇಟಿ ನೀಡಿದ್ದು ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲಿವಾನ್‌ ಜೊತೆ ಚರ್ಚಿಸಲು. ಜೊತೆಗೆ ಅಮೆರಿಕದಲ್ಲಿನ ಭಾರತೀಯ ರಾಯಭಾರಿಯನ್ನು ಭೇಟಿ ಮಾಡುವ ಉದ್ದೇಶದಿಂದ. ಆದರೆ ಯಾವುದೇ ಹಂತದಲ್ಲೂ ಭಾರತದ ಪ್ರಧಾನಿಯ ಅಮೆರಿಕದ ಭೇಟಿಯ ಕುರಿತು ಚರ್ಚೆ ನಡೆಸಿಲ್ಲ. ಅಮೆರಿಕ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರದಂಥ ಸಮಾರಂಭದಲ್ಲಿ ಭಾರತದ ಪ್ರಧಾನಿ ಭಾಗಿಯಾಗುವುದಿಲ್ಲ ಎನ್ನುವುದು ಸಾಮಾನ್ಯ ಜ್ಞಾನ. ಇಂಥ ಕಾರ್ಯಕ್ರಮದಲ್ಲಿ ದೇಶವನ್ನು ವಿಶೇಷ ಪ್ರತಿನಿಧಿಗಳು ಪ್ರತಿನಿಧಿಸುತ್ತಾರೆ. ರಾಹುಲ್‌ರ ಇಂಥ ಸುಳ್ಳಿನ ಹಿಂದೆ ರಾಜಕೀಯ ಉದ್ದೇಶವಿದ್ದರೂ ಅದು ವಿದೇಶಗಳಲ್ಲಿ ಭಾರತದ ಘನತೆಗೆ ಧಕ್ಕೆ ತರುತ್ತದೆ’ ಎಂದು ಚಾಟಿ ಬೀಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ