ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ದೆಹಲಿ(ಜ.29); ಆತಂಕದ ಸುದ್ದಿಯೊಂದು ದೆಹಲಿಯಿಂದ ಬಂದಿದೆ. ಕೇಂದ್ರ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಸ್ಫೋಟ ತೀವ್ರತೆದೆ 4 ರಿಂದ 5 ಕಾರುಗಳು ಡ್ಯಾಮೇಜ್ ಆಗಿದೆ. ಸ್ಫೋಟವನ್ನು ದೆಹಲಿ ಪೊಲೀಸರು ಖಚಿತಪಡಿಸಿದ್ದಾರೆ. ಅದೃಷ್ಠವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಅಂತಾರಾಷ್ಟ್ರೀಯ ಕ್ರಿಕೆಟ್ ಅಂಪೈರ್ ಬಲಿ!.
ಬಾಂಬ್ ಸ್ಫೋಟಕ್ಕೆ IED ಬಳಸಿರುವ ಶಂಕೆ ವ್ಯಕ್ತವಾಗಿದೆ. ಡಿವೈಡರ್ ಬಳಿ ಹೂಕುಂಡದಲ್ಲಿ ಸ್ಫೋಟ ಇಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ. ಕಾರು ಪಾರ್ಕಿಂಗ್ ಬಳಿ ಸ್ಫೋಟ ಸಂಭವಿಸಿದೆ. ರಾಯಭಾರಿ ಕಚೇರಿ ಸಿಬ್ಬಂದಿಗಳೆಲ್ಲಾ ಸುರಕ್ಷಿತ. ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಜಿಂದಾಲ್ ಹೌಸ್ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಇದು ಇಸ್ರೇಲ್ ರಾಯಭಾರಿ ಕಚೇರಿಯಿಂದ ಕೇವ 40 ಮೀಟರ್ ದೂರದಲ್ಲಿದೆ. ಇಸ್ರೇಲ್ ರಾಯಭಾರಿ ಕಚೇರಿ ಕಟ್ಟಡದ ಸಮೀಪದಲ್ಲೇ ಸ್ಫೋಟ ಸಂಭವಿಸಿದೆ ಎಂದು ದೆಹಲಿ ಪೊಲೀಸರು ಖಚಿತ ಪಡಿಸಿದೆ.
ಸ್ಫೋಟ ಸಂಭವಿಸಿದ ಸ್ಥಳದಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ನಿವಾಸ 2 ಕಿ.ಮೀ ದೂರದಲ್ಲಿದೆ. ಸ್ಫೋಟ ಸ್ಥಳವನ್ನು ಪೊಲೀಸರು ಸುತ್ತುವರೆದಿದ್ದಾರೆ. ಅಗ್ನಿಶಾಮಕ ದಳ ಸೇರಿದಂತೆ ಭದ್ರತಾ ಪಡಗಳು ಸ್ಥಳದಲ್ಲಿದೆ. ಇನ್ನು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸುತ್ತಿದೆ.