
ಭೋಪಾಲ್ (ಫೆ.13) ಹೆಣ್ಣುಮಕ್ಕಳ ಸುರಕ್ಷತೆ ಪ್ರಶ್ನೆ ಮತ್ತೆ ಗಂಭೀರ ಚರ್ಚೆಯಾಗುತ್ತಿದೆ.ಇದೀಗ 11ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ನಾಲ್ಕು ಕಾರು ಬಳಸಿ ಅತ್ಯಾ**ಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯನ್ನು ಪ್ರೀತಿಸುವ ನಾಟಕವಾಡಿದ ಆಸೌಫ್ ಆಲಿ ಖಾನ್ ಆಕೆಯನ್ನು ಕಾರಿನಲ್ಲಿ ಪ್ರವಾಸಕ್ಕೆಂದು ಕರೆತಂದು ಅತ್ಯಾ**ಚಾರ ಎಸಗಿದ್ದಾನೆ. ಅಸೌಫ್ ಅಲಿ ಖಾನ್‌ಗೆ ಕಾವಲಾಗಿ ನಿಂತಿದ್ದ ಗೆಳೆಯ ಮಜ್ ಖಾನ್ ಅಪ್ರಾಪ್ತ ಬಾಲಕಿಯ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಬಳಿಕ ವಿಡಿಯೋ ಹರಿಬಿಡುವುದಾಗಿ ಬೆದರಿ ನಿರಂತರವಾಗಿ ಅತ್ಯಾ**ಚಾರ ಮಾಡಿದ್ದಾರೆ. ಇಷ್ಟೇ ಅಲ್ಲ 40 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ.
11ನೇ ತರಗತಿ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಅಸೌಫ್ ಅಲಿ ಖಾನ್ ಪ್ರೀತಿಯ ನಾಟಕವಾಡಿದ್ದಾನೆ. ಅಪ್ರಾಪ್ತ ಬಾಲಕಿ ಕಿರಾತಕನ ಪ್ರೀತಿಯಲ್ಲಿ ಬಿದ್ದಿದ್ದಾಳೆ. ಬಳಿಕ ಪ್ರವಾಸಕ್ಕೆಂದು ಕಾರಿನಲ್ಲಿ ಕರೆತಂದು ಅತ್ಯಾ**ಚಾರ ಎಸಗಿದ್ದಾನೆ. ಈ ಘಟನೆಯಿಂದ ಬಾಲಕಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಆದರೆ ಅಸೌಫ್ ಅಲಿ ಖಾನ್ ಅತ್ಯಾ**ಚಾರ ಎಸಗುತ್ತಿದ್ದ ವೇಳೆ ಕಾರಿನ ಹೊರಗಡೆ ಕಾವಲಾಗಿ ನಿಂತಿದ್ದ ಮಜ್ ಖಾನ್ ಆಕೆಯ ವಿಡಿಯೋ ರೆಕಾರ್ಡ್ ಮಾಡಿ ಮರು ದಿನದಿಂದಲೇ ಬೆದರಿಕೆ ಶುರುಮಾಡಿದ್ದಾನೆ.
ಮಜ್ ಖಾನ್ ತನ್ನ ಐಫೋನ್ ಮೂಲಕ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಬಳಿಕ ಬಾಲಕಿ ಭೇಟಿಯಾಗಿ ವಿಡಿಯೋ ತೋರಿಸಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾ ಮೂಲಕ ಹರಿಬಿಡುವುದಾಗಿ ಬೆದರಿಸಿದ್ದಾನೆ. ಬೆದರಿಕೆಗೆ ಅಂಜಿದ ಬಾಲಿಕಿಯನ್ನು ಮಜ್ ಖಾನ್ ಹಾಗೂ ಆತನ ಸ್ನೇಹಿತರು ಮೂರು ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಬಳಸಿಕೊಂಡಿದ್ದಾರೆ. ಒಂದೊಂದು ಕಾರಿನಲ್ಲಿ ಒಬ್ಬರ ಹಿಂದೆ ಒಬ್ಬರಂತೆ ಬಳಸಿಕೊಂಡಿದ್ದಾರೆ.
ಬಳಿಕ ಪ್ರತಿ ದಿನ ಬಾಲಕಿಯನ್ನು ಬಳಸಿಕೊಳ್ಳಲು ಪ್ಲಾನ್ ಮಾಡಿದ್ದಾಳೆ. ಆದರೆ ಬಾಲಕಿ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳಲು ಆರಂಭಿಸುತ್ತಿದ್ದಂತೆ ಕೆರಳಿದ ಆರೋಪಿಗಳು 40,000 ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಮಾನಸಿಕವಾಗಿ ಕುಗ್ಗಿ ಹೋದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಸತ್ಯ ಬಯಲಾಗಿದೆ. ಹೀಗಾಗಿ ಪ್ರಕರಣ ದಾಖಲಾಗಿದೆ. ಈ ಪೈಕಿ ಮಜ್ ಖಾನ್ ಅರೆಸ್ಟ್ ಮಾಡಿ ವಿಚಾರಿಸಿದಾಗ ಅಸೌಫ್ ಆಲಿ ಕೃತ್ಯ ಬೆಳಕಿಗೆ ಬಂದಿದೆ. ಹೀಗಾಗಿ ಅಸೌಫ್ ಅಲಿ ಖಾನ್ ಕೂಡ ಬಂಧಿಸಲಾಗಿದೆ. ಇತ್ತ ಪೊಲೀಸ್ ಠಾಣೆಯ ಪೊಲೀಸ್ ಪೇದೆಯ ಜೊತೆ ಆರೋಪಿಗಳು ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಈ ಪೊಲೀಸ್ ಪೇದೆಯ ಕೆಲ ಮಾಹಿತಿಗಳನ್ನು ಲೀಕ್ ಮಾಡುತ್ತಿರುವುದಾಗಿ ಪತ್ತೆಯಾಗಿದೆ. ಇಷ್ಟೇ ಅಲ್ಲ ಪೇದೆಯ ನೆರವಿನಿಂದ ಆರೋಪಿಗಳು ಮತ್ತಷ್ಟು ಕೃತ್ಯ ಎಸಗಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ