ದಕ್ಷಿಣದಲ್ಲಿ ನಮ್ಮ ಕೆಲಸದ ಬಗ್ಗೆ ತಪ್ಪುಕಲ್ಪನೆ: ಸಚಿವೆ ನಿರ್ಮಲಾ ಸೀತಾರಾಮನ್‌

Published : Feb 03, 2024, 04:43 AM IST
ದಕ್ಷಿಣದಲ್ಲಿ ನಮ್ಮ ಕೆಲಸದ ಬಗ್ಗೆ ತಪ್ಪುಕಲ್ಪನೆ: ಸಚಿವೆ ನಿರ್ಮಲಾ ಸೀತಾರಾಮನ್‌

ಸಾರಾಂಶ

ದಕ್ಷಿಣ ಭಾರತದಲ್ಲಿ ಮೊದಲಿನಿಂದಲೂ ಶಿಕ್ಷಣ, ಕೌಶಲ್ಯ ಮತ್ತು ಅವಕಾಶಗಳು ಸಾಕಷ್ಟು ಹೆಚ್ಚಿವೆ. ವಿದೇಶಗಳಿಗೆ ವಲಸೆ ಹೋಗುವವರ ಪ್ರಮಾಣವೂ ದಕ್ಷಿಣದಲ್ಲೇ ಹೆಚ್ಚಿದೆ. ದಕ್ಷಿಣದಲ್ಲಿ ಸಾರ್ವಜನಿಕ ಹೂಡಿಕೆಗಿಂತ ಖಾಸಗಿ ಹೂಡಿಕೆ ಪ್ರಮಾಣ ಹೆಚ್ಚಿದೆ, ಈ ವಾಸ್ತವ ಸಂಗತಿಯನ್ನು ನಾವು ಅರ್ಥ ಮಾಡಿಕೊಳ್ಳಲೇಬೇಕು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 

ನವದೆಹಲಿ(ಫೆ.03): ಜನರಲ್ಲಿ ದಕ್ಷಿಣ ಭಾರತದ ಕುರಿತು ಸತ್ಯಕ್ಕಿಂತ ತಪ್ಪುಕಲ್ಪನೆಗಳೇ ಹೆಚ್ಚಿವೆ. ಈಗಾಗಲೇ ದಕ್ಷಿಣ ಭಾರತದಲ್ಲಿ ಅಭಿವೃದ್ಧಿ ಆಧರಿತ ವ್ಯವಸ್ಥೆ ಜಾರಿಯಲ್ಲಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಮುಖ ಪಾತ್ರ ವಹಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಉತ್ತರ ಮತ್ತು ದಕ್ಷಿಣದ ನಡುವೆ ತಾರತಮ್ಯ ಮಾಡುತ್ತಿದೆ. ಹೀಗಾಗಿ ದಕ್ಷಿಣ ಪ್ರತ್ಯೇಕ ದೇಶವಾಗಬೇಕು ಎಂಬ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ಬೆನ್ನಲ್ಲೇ ಸಚಿವೆ ನಿರ್ಮಲಾ ಇಂಥದ್ದೊಂದು ಪ್ರತಿಕ್ರಿಯೆ ನೀಡಿದ್ದಾರೆ.

1962ರಿಂದಲೂ ಬಾಕಿ ಇರುವ ತೆರಿಗೆ ಕೇಸ್‌ಗಳು ರದ್ದು

ಖಾಸಗಿ ಸುದ್ದಿವಾಹಿನಿಯೊಂದರ ಜೊತೆಗೆ ಮಾತನಾಡಿದ ನಿರ್ಮಲಾ, ‘ದಕ್ಷಿಣ ಭಾರತದಲ್ಲಿ ಮೊದಲಿನಿಂದಲೂ ಶಿಕ್ಷಣ, ಕೌಶಲ್ಯ ಮತ್ತು ಅವಕಾಶಗಳು ಸಾಕಷ್ಟು ಹೆಚ್ಚಿವೆ. ವಿದೇಶಗಳಿಗೆ ವಲಸೆ ಹೋಗುವವರ ಪ್ರಮಾಣವೂ ದಕ್ಷಿಣದಲ್ಲೇ ಹೆಚ್ಚಿದೆ. ದಕ್ಷಿಣದಲ್ಲಿ ಸಾರ್ವಜನಿಕ ಹೂಡಿಕೆಗಿಂತ ಖಾಸಗಿ ಹೂಡಿಕೆ ಪ್ರಮಾಣ ಹೆಚ್ಚಿದೆ, ಈ ವಾಸ್ತವ ಸಂಗತಿಯನ್ನು ನಾವು ಅರ್ಥ ಮಾಡಿಕೊಳ್ಳಲೇಬೇಕು’ ಎಂದು ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡುತ್ತಿರುವುದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!