
ಡಾರ್ಜಲಿಂಗ್(ಮಾ.25) ಲೋಕಸಭಾ ಚುನಾವಣೆ ಗೆಲ್ಲಲು ಪೈಪೋಟಿ ಹೆಚ್ಚಾಗುತ್ತಿದೆ. ಪಕ್ಷಗಳು ಅಳೆದು ತೂಗಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡುತ್ತಿದೆ.ಹೀಗೆ ಬಿಜೆಪಿ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ ಶಾಸಕನ ವಿಡಿಯೋ ಭಾರಿ ವೈರಲ್ ಆಗಿದೆ. ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜು ಬಿಸ್ತಾಗೆ ಟಿಕೆಟ್ ಘೋಷಣೆ ಮಾಡಿದೆ. ಈ ಸುದ್ದಿ ಘೋಷಣೆಯಾಗತ್ತಿದ್ದಂತೆ ಡಾರ್ಜಲಿಂಗ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನೀರಜ್ ಜಿಂಬಾ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ಭಾರಿ ವೈರಲ್ ಆಗಿದೆ.
ಡಾರ್ಜಲಿಂಗ್ ಕ್ಷೇತ್ರದ ಬಿಜೆಪಿ ಟಿಕೆಟ್ ಬಾರಿ ಕುತೂಹಲ ಕೆರಳಿಸಿತ್ತು. ರಾಜು ಬಿಸ್ತಾಗೆ ಟಿಕೆಟ್ ನಿರಾಕರಿಸಲಾಗುತ್ತದೆ ಅನ್ನೋ ಮಾಹಿತಿಗಳು ಬಿಜೆಪಿ ವಲಯದಲ್ಲಿ ಹರಿದಾಡಿತ್ತು. ಈ ವೇಳೆ ರಾಜು ಬಿಸ್ತಾ ಆಪ್ತರಾಗಿರುವ ಶಾಸಕ ನೀರಜ್ ಜಿಂಬಾ ಆಕ್ರೋಶ ಹೊರಹಾಕಿದ್ದರು. 2019ರ ವರೆಗೆ ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್‌ನ ವಕ್ತಾರರಾಗಿದ್ದ ನೀರಜ್ ಜಿಂಬಾ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು ಆಕ್ರೋಶ ಹೊರಹಾಕಿದ್ದರು.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 6ನೇ ಪಟ್ಟಿ ಪ್ರಕಟ, ಯಾರಿಗೆಲ್ಲ ಟಿಕೆಟ್?
ಡಾರ್ಜಲಿಂಗ್ ಕ್ಷೇತ್ರದಿಂದ ರಾಜು ಬಿಸ್ತಾಗೆ ಟಿಕೆಟ್ ನಿರಾಕರಿಸಿದರೆ, ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ ಸಹಾಯದೊಂದಿಗೆ ಪಕ್ಷೇತ್ರ ಅಭ್ಯರ್ಥಿಯನ್ನು ನಿಲ್ಲಿಸುವುದಾಗಿ ಎಚ್ಚರಿಸಿದ್ದರು. ರಾಜು ಬಿಸ್ತಾ ಲೋಕಸಭೆಗೆ ಅರ್ಹ ನಾಯಕ. ಅವರಿಗೆ ಟಿಕೆಟ್ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದರು. ನೀರಜ್ ಜಿಂಬಾ ಪತ್ರಕ್ಕೆ ಬಿಜೆಪಿ ಹೈಕಮಾಂಡ್‌ನಿಂದ ಹೆಚ್ಚಿನ ಸ್ಪಂದನೆ ಸಿಕ್ಕಿರಲಿಲ್ಲ. ಹೀಗಾಗಿ ಟಿಕೆಟ್ ಕುತೂಹಲ ಹಾಗೆ ಮುಂದುವರಿದಿತ್ತು.
ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಡಾರ್ಜಲಿಂಗ್ ಕ್ಷೇತ್ರಕ್ಕೆ ರಾಜು ಬಿಸ್ತಾಗೆ ಟಿಕೆಟ್ ಘೋಷಣೆ ಮಾಡಿತ್ತು. ಬಿಜೆಪಿ ಪಟ್ಟಿಯನ್ನು ಸುದ್ದಿ ವಾಹನಿಯಲ್ಲಿ ವೀಕ್ಷಿಸುತ್ತಿದ್ದ ಬಿಜೆಪಿ ಶಾಸಕ ನೀರಜ್ ಜಿಂಬಾ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.
ಕಂಗನಾ ರಣಾವತ್, ರಾಮಾಯಾಣ ನಟ ಅರುಣ್ ಗೋವಿಲ್‌ಗೆ ಟಿಕೆಟ್ ಘೋಷಿಸಿದ ಬಿಜೆಪಿ!
ಭಾನುವಾರ ಬಿಜೆಪಿ ಲೋಕಸಭಾ ಚುನಾವಣೆಯ 5ನೇ ಪಟ್ಟಿ ಬಿಡುಗಡೆ ಮಾಡಿದೆ. 111 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್‌ಗೂ ಟಿಕೆಟ್ ನೀಡಲಾಗಿತ್ತು. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾಗೆ ಬಿಜೆಪಿ ಟಿಕೆಟ್ ನೀಡಿದೆ. ಇನ್ನು ಉತ್ತರ ಪ್ರದೇಶದ ಮೀರತ್ ಕ್ಷೇತ್ರದಿಂದ ರಾಮಾಯಣ ಸೀರಿಯಲ್ ನಟ ಅರುಣ್ ಗೋವಿಲ್‌ಗೆ ಟಿಕೆಟ್ ನೀಡಲಾಗಿದೆ. ಇದೇ ಪಟ್ಟಿಯಲ್ಲಿ ಕರ್ನಾಟಕದ 4 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಕ್ಷೇತ್ರದಿಂದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಿಸಲಾಗಿದೆ. ಈ ಕ್ಷೇತ್ರದಿಂದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ