
ನವದೆಹಲಿ (ಫೆ.7): ಬಿಜೆಪಿ ಸುಳ್ಳನ್ನು ಹೇಗೆ ಸತ್ಯ ಮಾಡೋದು ಎಂಬುದನ್ನು ಬಿಂಬಿಸಲು ಹೊರಟಿದೆ. ಬಿಜೆಪಿಯವರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬಿಜೆಪಿಯಿಂದ ಮನರೇಗಾ ಬಗ್ಗೆ ಜಾಹೀರಾತು ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯವರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ. ಬಿಜೆಪಿಯವರು ಮಹಾತ್ಮ ಗಾಂಧಿ ವಿರೋಧಿಗಳು, ಗಾಂಧಿಯನ್ನು ಕೊಂದಿರೋರು. ದೈಹಿಕವಾಗಿ ಕೊಂದು, ಈಗ ಮಾನಸಿಕವಾಗಿ ಗಾಂಧೀಜಿಯ ಸಿದ್ಧಾಂತಗಳನ್ನು ಕೊಲ್ಲಲು ಮೊದಲ ಹೆಜ್ಜೆ ಇಟ್ಟಿದ್ದಾರೆ ಎಂದರು.
ಮನರೇಗಾ 20 ವರ್ಷಗಳ ಕಾಲ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ನೀಡಿದೆ. ಮನಮೋಹನ್ ಸಿಂಗ್ ಕಾಲದಲ್ಲಿ ಜಾರಿಗೆ ತರಲಾದ ಯೋಜನೆಯನ್ನು ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಬಡವರಿಗೆ ಸಾಂವಿಧಾನಿಕವಾಗಿ ನೀಡಿದ್ದ ಹಕ್ಕನ್ನು ಕಿತ್ತುಕೊಂಡಿದೆ ಎಂದು ಅವರು ಆರೋಪಿಸಿದರು.
ಹಸಿಸುಳ್ಳು ಹೇಳುವ ಬಿಜೆಪಿ, ಇದಕ್ಕಾಗಿ ಆರ್‌ಎಸ್‌ಎಸ್‌ನಿಂದ ತರಬೇತಿ ಪಡೆದುಕೊಂಡು ಬಂದಿದೆ. ಈಗ ಸುಳ್ಳನ್ನು ಸತ್ಯ ಮಾಡಲು ಬಿಜೆಪಿ ಮುಂದಾಗಿದೆ. ಬಿಜೆಪಿ ಅತ್ಯಂತ ಶ್ರೀಮಂತ ಪಾರ್ಟಿ. ಹೀಗಾಗಿ, ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಸುಳ್ಳನ್ನು ಸತ್ಯ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ