ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಆರ್ಥಿಕ ಸಹಾಯ ಮಾಡಿದ ಮಾಜಿ ಪ್ರಧಾನಿ ದೇವೇಗೌಡ್ರಿಗೆ ಹಾಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು, (ಏ.11): ಮಾಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಹಣ ಸಹಾಯ ಮಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠಿ ಎಚ್.ದೇವೇಗೌಡರ ಕಾರ್ಯವನ್ನು ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ ಮಾರಿ ಕೊರೋನಾ ವಿರುದ್ಧದ ಸಮರಕ್ಕೆ ಒಟ್ಟು 3 ಲಕ್ಷ ರೂ. ತಮ್ಮ ಪೆನ್ಶನ್ ಹಣದಿಂದ ನೀಡಿ ಆರ್ಥಿಕವಾಗಿ ಕೈಜೋಡಿಸಿದ್ದಾರೆ.
ಕೊರೋನಾ ಹೋರಾಟಕ್ಕೆ 3 ಸರ್ಕಾರಗಳಿಗೆ ಆರ್ಥಿಕ ಸಹಾಯ ಮಾಡಿದ ದೇವೇಗೌಡ್ರು
ಇದೀಗ ಇದಕ್ಕೆ ಪ್ರಧಾನಿ ನರೇಂದ್ರ ಮೋಧಿ ಅವರು ಪ್ರತಿಕ್ರಿಯಿಸಿದ್ದು, ದೊಡ್ಡಗೌಡ್ರ ನಡೆಯನ್ನು ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೇ ದೇವೇಗೌಡ ನಡೆ ಸ್ಫೂರ್ತಿದಾಯಕವಾದದ್ದು ಎಂದು ಟ್ವೀಟ್ ಮಾಡಿದ್ದಾರೆ.
Very inspiring gesture by our former Prime Minister Ji. https://t.co/WZkJJS3SYm
— Narendra Modi (@narendramodi)ತಮ್ಮ ಪೆನ್ಶನ್ ಹಣದಿಂದ ದೇವೇಗೌಡ ಅವರು PM ಪರಿಹಾರ ನಿಧಿಗೆ 1 ಲಕ್ಷ ರೂಪಾಯಿ ನೀಡಿದ್ದಾರೆ. ಇದರ ಜೊತೆಗೆ ಕರ್ನಾಟಕ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ತಲಾ 1 ಲಕ್ಷ ರೂ. ಸೇರಿದಂತೆ ಒಟ್ಟು 3 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ತಿಳಿಸಿದ್ದರು.