ಸರ್ಕಾರಿ ಅಧಿಕಾರಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು 58 ವರ್ಷದ ಹಿಂದೆ ಹೊರಡಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಇದರಿಂದಾಗಿ ಸರ್ಕಾರಿ ಅಧಿಕಾರಿಗಳು ಕೂಡ ತಮಗೆ ಇಷ್ಟವಿದ್ದಲ್ಲಿ ಆರೆಸ್ಸೆಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದಾಗಿದೆ.
ನವದೆಹಲಿ (ಜು.22): ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ತೆಗೆದುಹಾಕುವ ಕೇಂದ್ರ ಸರ್ಕಾರದ ಆದೇಶವು ಪ್ರತಿಪಕ್ಷಗಳು ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದೆ. ಇದರ ನಡುವೆ ಆರೆಸ್ಸೆಸ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ. 58 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ನರೇಂದ್ರ ಮೋದಿ ಸರ್ಕಾರ ಹಿಂಪಡೆದಿದೆ. ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಚಾರ ಪ್ರಭಾರಿ ಸುನೀಲ್ ಅಂಬೇಕರ್ ಮಾತನಾಡಿ, ಸಂಘಟನೆಯು ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ ನಿರ್ಮಾಣ ಮತ್ತು ಸಮಾಜ ಸೇವೆಯಲ್ಲಿ ಸದಾ ತೊಡಗಿಸಿಕೊಂಡಿದೆ ಎಂದು ಹೇಳಿದ್ದಾರೆ. "ರಾಷ್ಟ್ರೀಯ ಭದ್ರತೆ, ಏಕತೆ-ಸಮಗ್ರತೆ ಮತ್ತು ನೈಸರ್ಗಿಕ ವಿಕೋಪದ ಸಮಯದಲ್ಲಿ ದೇಶದ ವಿವಿಧ ಪ್ರಕಾರಗಳ ನಾಯಕತ್ವದಲ್ಲಿ ಸಂಘದ ಪಾತ್ರವು ಶ್ಲಾಘನೀಯವಾಗಿದೆ" ಎಂದು ಅಂಬೇಡ್ಕರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನಿರ್ಧಾರವು ಭಾರತದ ಹಕ್ಕುಗಳು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸ್ಥಾಪಿಸಲಿದೆ ಎಂದು ಅವರು ಹೇಳಿದರು. ಆರ್‌ಎಸ್‌ಎಸ್ ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ ನಿರ್ಮಾಣ ಮತ್ತು ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರದ ಆದೇಶವು ಸಾರ್ವಜನಿಕವಾಗಿ ಪ್ರಕಟವಾದ ಒಂದು ದಿನದ ನಂತರ, ಹಲವಾರು ವಿರೋಧ ಪಕ್ಷದ ನಾಯಕರು ಈ ಕ್ರಮವನ್ನು ಟೀಕಿಸಿದ್ದಾರೆ.
‘ತನ್ನ ರಾಜಕೀಯ ಹಿತಾಸಕ್ತಿಗಳಿಂದಾಗಿ ಅಂದಿನ ಸರ್ಕಾರವು ಸರ್ಕಾರಿ ನೌಕರರನ್ನು ಸಂಘದಂತಹ ರಚನಾತ್ಮಕ ಸಂಘಟನೆಯ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಆಧಾರರಹಿತವಾಗಿ ನಿಷೇಧಿಸಿತ್ತು’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
1966ರ ನವೆಂಬರ್ 7ರಂದು ಸಂಸತ್ತಿನಲ್ಲಿ ಬೃಹತ್ ಗೋಹತ್ಯೆ-ವಿರೋಧಿ ಪ್ರತಿಭಟನೆ ನಡೆದ ಕಾರಣ ನಿಷೇಧವನ್ನು ವಿಧಿಸಲಾಗಿತ್ತು. ಆರೆಸ್ಸೆಸ್-ಜನಸಂಘವು ಲಕ್ಷಗಟ್ಟಲೆ ಬೆಂಬಲವನ್ನು ಈ ಸಮಯದಲ್ಲಿ ಪಡೆದಿತ್ತು. ಅನೇಕರು ಪೋಲೀಸ್ ಗುಂಡಿನ ದಾಳಿಯಲ್ಲಿ ಸಾವು ಕಂಡಿದ್ದರು. ಆರೆಸ್ಸೆಸ್ ಹಾಗೂ ಜನಸಂಘದ ಪ್ರಭಾವದಿಂದ ನಡುಗಿಹೋಗಿದ್ದ ಇಂದಿರಾಗಾಂಧಿ 1966ರ ನವೆಂಬರ್ 30 ರಂದು ಸರ್ಕಾರಿ ಸಿಬ್ಬಂದಿಗಳು ಆರೆಸ್ಸೆಸ್ ಸೇರುವುದಕ್ಕೆ ನಿಷೇಧ ವಿಧಿಸಿದ್ದರು.
ಭಗವಂತನಾಗುವ ಆಸೆ ಇರೋರಿಗೆ ಮುಂದೇನು ಅಂತ ಗೊತ್ತಿಲ್ಲ: ಭಾಗ್ವತ್
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ತೀರ್ಪಿನಿಂದ ಯಾವುದೇ ಪಾಠ ಕಲಿಯುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್ ಅವರು ಸಿಬ್ಬಂದಿ ಸಚಿವಾಲಯದ ಆದೇಶವನ್ನು "ಅತ್ಯಂತ ದುರದೃಷ್ಟಕರ ಕ್ರಮ" ಎಂದು ಕರೆದಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲಿನ ನಿಷೇಧವನ್ನು ತೆಗೆದುಹಾಕಿರುವ ನಿರ್ಧಾರಕ್ಕೆ ಸರ್ಕಾರವನ್ನು ಟೀಕಿಸಿದರು. “...ನಿಜವಾಗಿದ್ದರೆ, ಇದು ಭಾರತದ ಸಮಗ್ರತೆ ಮತ್ತು ಏಕತೆಗೆ ವಿರುದ್ಧವಾಗಿದೆ. ಸಂವಿಧಾನ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಅಂಗೀಕರಿಸಲು ನಿರಾಕರಿಸಿದ ಕಾರಣ ಆರ್‌ಎಸ್‌ಎಸ್ ಮೇಲೆ ನಿಷೇಧವಿದೆ' ಎಂದು ಹೇಳಿದ್ದಾರೆ. “ಪ್ರತಿಯೊಬ್ಬ ಆರ್‌ಎಸ್‌ಎಸ್ ಸದಸ್ಯರು ಹಿಂದುತ್ವವನ್ನು ರಾಷ್ಟ್ರದ ಮೇಲೆ ಹೇರುವ ಪ್ರತಿಜ್ಞೆ ಮಾಡುತ್ತಾರೆ. ಯಾವುದೇ ನಾಗರಿಕ ಸೇವಕ ಆರ್‌ಎಸ್‌ಎಸ್ ಸದಸ್ಯನಾಗಿದ್ದರೆ ರಾಷ್ಟ್ರಕ್ಕೆ ನಿಷ್ಠನಾಗಿರಲು ಸಾಧ್ಯವಿಲ್ಲ…” ಎಂದು ಒವೈಸಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಸೋಲಿನ ಹೊಣೆಯನ್ನ ಅಜಿತ್ ಹೆಗಲ ಮೇಲೆ ಹಾಕಿದ ಆರ್‌ಎಸ್‌ಎಸ್!