Modi Government 11 Years: ಮೋದಿ ಸರ್ಕಾರ 11 ವರ್ಷ ಪೂರ್ಣ : 'ಅಘೋಷಿತ ತುರ್ತು ಪರಿಸ್ಥಿತಿ' ಎಂದ ಖರ್ಗೆ

Kannadaprabha News   | Kannada Prabha
Published : May 27, 2025, 06:58 AM ISTUpdated : May 27, 2025, 12:12 PM IST
Prime Minister Narendra Modi (Photo/ANI)

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 11 ವರ್ಷಗಳು ಪೂರ್ಣ. ಮಲ್ಲಿಕಾರ್ಜುನ ಖರ್ಗೆ ಅವರಿಂದ ಅಘೋಷಿತ ತುರ್ತು ಪರಿಸ್ಥಿತಿಯ ಆರೋಪ. ಮೋದಿಯವರ 'ಅಚ್ಚೇ ದಿನ್' ದುಃಸ್ವಪ್ನವಾಗಿದೆ ಎಂದು ಖರ್ಗೆ ಟೀಕೆ.

ನವದೆಹಲಿ (ಮೇ.27): ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ರ ಸೋಮವಾರಕ್ಕೆ 11 ವರ್ಷ ಪೂರ್ಣಗೊಂಡಿದೆ. 2014ರ ಮೇ 26ರಂದು ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಸತತ 11 ವರ್ಷ ದೇಶವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯು 543 ಕ್ಷೇತ್ರಗಳಲ್ಲಿ 282 ಸೀಟುಗಳ ಬಹುಮತವನ್ನು ಬಾಚಿಕೊಂಡು ಯುಪಿಎ ಅಧಿಕಾರ ಅಂತ್ಯಗೊಳಿಸಿತ್ತು. ಬಳಿಕ 2019ರಲ್ಲೂ 303 ಸೀಟು ಗೆದ್ದು ಅಧಿಕಾರಕ್ಕೆ ಬಂದಿತ್ತು. 2024ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಮೈತ್ರಿಕೂಟ 293 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಮರಳಿತ್ತು.

ಇದನ್ನೂ ಓದಿ: 'ಬಾಳಾ ಸಾಹೇಬ್ ಠಾಕ್ರೆ ಇಂದು ಇಲ್ಲಿದ್ದಿದ್ರೆ ಪ್ರಧಾನಿ ಮೋದಿಯನ್ನು ಅಪ್ಪಿಕೊಳ್ಳುತ್ತಿದ್ದರು' ಆಪರೇಷನ್ ಸಿಂದೂರ್ ಪ್ರಶ್ನಿಸಿದ ಉದ್ಧವ್ ಶಿವಸೇನೆ ವಿರುದ್ಧ ಶಾ ಕಿಡಿ!

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ 11 ವರ್ಷ ಪೂರೈಸಿರುವುದು ಅಘೋಷಿತ ತುರ್ತು ಸ್ಥಿತಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ‘ಪ್ರಧಾನಿ ಮೋದಿ ಅವರ ಅಚ್ಚೇದಿನ್‌ ಒಂದು ದುಃಸ್ವಪ್ನವಾಗಿ ಪರಿವರ್ತನೆಗೊಂಡಿದೆ ಎಂದು ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು