ಜೂನ್ 8ರಂದು ಪ್ರಧಾನಿ ಮೋದಿ ಪ್ರಮಾಣವಚನ ಸಾಧ್ಯತೆ

By Mahmad Rafik  |  First Published Jun 5, 2024, 12:59 PM IST

18ನೇ ಲೋಕಸಭಾ ಚುನಾವಣೆಯಲ್ಲಿ 240 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ (BJP) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.


ನವದೆಹಲಿ: ಜೂನ್ 8ರಂದು ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ (PM Narendra Modi) ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಜೂನ್  8ರ ಶನಿವಾರ ರಾತ್ರಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಹೊಸ ಸಂಪುಟದ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸುವ ಮೂಲಕ ನರೇಂದ್ರ ಮೋದಿ ಹ್ಯಾಟ್ರಿಕ್ ದಾಖಲೆ ಬರೆಯಲಿದ್ದಾರೆ. 18ನೇ ಲೋಕಸಭಾ ಚುನಾವಣೆಯಲ್ಲಿ 240 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ (BJP) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಜೂನ್ 8ರಿಂದ ಮೋದಿ 3.O ಆಡಳಿತ ಶುರುವಾಗಲಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಇಂದು ಸಂಜೆ 4 ಗಂಟೆಗೆ ಎನ್‌ಡಿಎ ಮೈತ್ರಿಕೂಟದ ನಾಯಕರು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಭಾಗಿಯಾಗುವಂತೆ ಎಲ್ಲಾ ಎನ್‌ಡಿಎ ನಾಯಕರಿಗೆ ಸ್ವತಃ ಕೇಂದ್ರ ಸಚಿವ ಅಮಿತ್ ಶಾ ಫೋನ್ ಕರೆ ಮಾಡಿ ಆಹ್ವಾನ ನೀಡಿದ್ದಾರಂತೆ. ಎನ್‌ಡಿಎ ಕೂಟದ ಭಾಗವಾಗಿರುವ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಸಹ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಭಾರತೀಯ ಚುನಾವಣಾ ಆಯೋಗದ (Election Commission Of India) ಪ್ರಕಾರ, ಬಿಜೆಪಿ ನೇತೃತ್ವದ ಎನ್‌ಡಿಎ (NDA) ಕೂಟಕ್ಕೆ 292, ಐಎನ್‌ಡಿಐಎ (INDIA) ಕೂಟಕ್ಕೆ 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

Tap to resize

Latest Videos

undefined

Video: ಫಲಿತಾಂಶದ ಅಂಕಿ ಅಂಶ ಕಂಡು ಲೈವ್‌ನಲ್ಲಿಯೇ ಗಳಗಳನೇ ಅತ್ತ ಪ್ರದೀಪ್ ಗುಪ್ತಾ

ಲೋಕಸಭಾ ಚುನಾವಣೆ ತೀರ್ಪು ಬಿಜೆಪಿಗೆ ನಿರಾಸೆ ತಂದರೂ 3ನೇ ಬಾರಿಗೆ ಸರ್ಕಾರ ರಚಿಸುತ್ತಿರುವ ಟಾನಿಕ್ ನೀಡಿದೆ. 10 ವರ್ಷದ ಆಡಳಿತದ ಬಳಿಕ ಮತ್ತೆ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಿದ್ದಾರೆ. ಇತ್ತ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ ದೇಶಾದ್ಯಂತ ಸಂಭ್ರಮಾಚರಣೆಯಲ್ಲಿದೆ. ಕಾಂಗ್ರೆಸ್ ಮರು ಜೀವ ಪಡೆದುಕೊಂಡಿದ್ದರೆ, ಇಂಡಿಯಾ ಒಕ್ಕೂಟ ಪ್ರಬಲ ಪ್ರತಿಸ್ಪರ್ಧೆ ನೀಡುವಲ್ಲಿ ಯಶಸ್ವಿಯಾಗಿದೆ.

ಇಂದೋರ್ ನಲ್ಲಿ ಬರೋಬ್ಬರಿ 2 ಲಕ್ಷ ನೋಟಾ, 1 ಮಿಲಿಯನ್‌ ಅಂತರದಲ್ಲಿ ಗೆದ್ದು ಬೀಗಿದ ಬಿಜೆಪಿ ಲಾಲ್ವಾನಿ ಇತಿಹಾಸ!

ಗೆಲುವಿನ ಬಳಿಕ ಪ್ರಧಾನಿ ಮೋದಿ ಹೇಳಿದ್ದೇನು?

ಗೆಲುವಿನ ಬಳಿಕ ಜನತೆಯನ್ನುದ್ದೇಶಿ ಮಾತನಾಡಿದ ಪ್ರಧಾನಿ ಮೋದಿ, ಮೂರನೇ ಅವಧಿಯಲ್ಲಿ ಸರ್ಕಾರ ಅತೀ ದೊಡ್ಡ ನಿರ್ಧಾರ ತೆಗೆದುಕೊಳ್ಳಲಿದೆ. ಇದು ಮೋದಿ ಗ್ಯಾರೆಂಟಿ ಎಂದು ಮಹತ್ವದ ಸೂಚನೆ ನೀಡಿದ್ದಾರೆ. ಇಂಡಿಯಾ ಒಕ್ಕೂಟ ಒಟ್ಟಿಗೆ ಸೇರಿ ಬಿಜೆಪಿ ಗೆದ್ದಷ್ಟು ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಮೋದಿ ಹೇಳಿದ್ದಾರೆ. ಈ ದೇಶದ ಜನತೆಯ ಪ್ರಯಾಸ, ಬೆವರಿನ ಶ್ರಮ ನನಗೆ ಪ್ರೇರಣೆ ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ. ನೀವು 10 ಗಂಟೆ ಕೆಲಸ ಮಾಡಿದ್ದರೆ ನಿಮಗಾಗಿ 18 ಗಂಟೆ ಕೆಲಸ ಮಾಡುತ್ತೇನೆ. ನಾವು ಭಾರತೀಯರು ಜೊತೆಯಾಗಿ ಸಾಗೋಣ, ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸೋಣ. ದೊಡ್ಡ ನಿರ್ಧಾರ ಈ ಮೂರನೇ ಅವಧಿಯಲ್ಲಿ ತೆಗೆದುಕೊಳ್ಳಲಿದ್ದೇವೆ. ಇದು ಮೋದಿ ಗ್ಯಾರೆಂಟಿ ಎಂದು ಪ್ರಧಾನಿ ಹೇಳಿದ್ದಾರೆ.

click me!