
ನವದೆಹಲಿ: ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಬೆಂಗಳೂರಲ್ಲಿ 46 ಬಾವಿ ಹಾಗೂ ಕೆರೆಗಳ ಪುನರುಜ್ಜೀವನ ಮಾಡಿದ ಪರಿಸರ ಪ್ರೇಮಿ ಎಂಜಿನಿಯರ್ ಕಪಿಲ್ ಶರ್ಮಾ ಎಂಬುವರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ‘ಶರ್ಮಾ ತಮ್ಮ ತಂಡದೊಂದಿಗೆ ಅಭಿಯಾನ ನಡೆಸಿ, ಈಗಾಗಲೇ 40 ಬಾವಿ ಮತ್ತು 6 ಕೆರೆ ಪುನರುಜ್ಜೀವನಗೊಳಿಸಿದ್ದಾರೆ. ಜತೆಗೆ ಮರ ನೆಡುವ ಅಭಿಯಾನದಲ್ಲೂ ಸಕ್ರಿಯರಾಗಿದ್ದಾರೆ. ಇದರಲ್ಲಿ ಅವರು ಉದ್ದಿಮೆಗಳು ಮತ್ತು ಸ್ಥಳೀಯ ನಿವಾಸಿಗಳನ್ನೂ ಸೇರಿಸಿಕೊಂಡಿರುವುದು ಗಮನಾರ್ಹ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಕರ್ನಾಟಕದ ಕಾಫಿ ಹಾಗೂ ಬಿಎಸ್‌ಎಫ್ ಸೇರಿರುವ ಕರ್ನಾಟಕದ ಪ್ರಸಿದ್ಧ ಮುಧೋಳ ನಾಯಿಗಳನ್ನೂ ಅವರು ಶ್ಲಾಘಿಸಿದ್ದಾರೆ.
ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ಸ್ವಚ್ಛತೆ ಮತ್ತು ಅದಕ್ಕಾಗಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ‘ಕೆರೆಗಳ ನಾಡೆಂದೇ ಕರೆಯಲಾಗುವ ಬೆಂಗಳೂರಿನಲ್ಲಿ ಕಪಿಲ್ ಶರ್ಮಾ ಎಂಬ ಎಂಜಿನಿಯರ್ ಒಬ್ಬರು ತಮ್ಮ ತಂಡದೊಂದಿಗೆ ಕೂಡಿಕೊಂಡು ಅಭಿಯಾನವೊಂದನ್ನು ಆಯೋಜಿಸಿದ್ದು, ಈಗಾಗಲೇ 40 ಬಾವಿ ಮತ್ತು 6 ಕೆರೆಗಳನ್ನು ಪುನರುಜ್ಜೀವನಗೊಳಿಸಿದ್ದಾರೆ. ಜತೆಗೆ ಅವರು ಮರ ನೆಡುವ ಅಭಿಯಾನದಲ್ಲೂ ಸಕ್ರಿಯರಾಗಿದ್ದಾರೆ. ಇದರಲ್ಲಿ ಅವರು ಉದ್ದಿಮೆಗಳು ಮತ್ತು ಸ್ಥಳೀಯ ನಿವಾಸಿಗಳನ್ನೂ ಸೇರಿಸಿಕೊಂಡಿರುವುದು ಗಮನಾರ್ಹ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಛತ್ತೀಸಗಢದ ಅಂಬಿಕಾಪುರದಲ್ಲಿ ಕಸ ಕೊಡುವವರಿಗೆ ಹೊಟ್ಟೆ ತುಂಬ ಊಟ ಕೊಡುವ ಕೆಫೆ ಆರಂಭಿಸಿದ ಮಹಾನಗರ ಪಾಲಿಕೆಯ ಕೆಲಸವನ್ನೂ ಶ್ಲಾಘಿಸಿದ್ದಾರೆ.
2007ರಿಂದ ‘ಸೇಟ್ರೀಸ್’ ಎಂಬ ಎನ್‌ಜಿಒ ನಡೆಸುತ್ತಿರುವ ಶರ್ಮಾ, ತಮ್ಮ ಸಂಸ್ಥೆ ಮೂಲಕ ನಗರ ಪ್ರದೇಶಗಳಲ್ಲಿ ಸಸಿ ನೆಡುವ ಹಾಗೂ ಕೆರೆಗಳಿಗೆ ಮರುಹುಟ್ಟು ನೀಡುವ ಕೆಲಸದಲ್ಲಿ ತೊಡಗಿದ್ದಾರೆ. ಇವರು ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರ ಹಾಗೂ ಹೈದ್ರಾಬಾದ್‌ನಲ್ಲೂ ಈ ಕೆಲಸ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ