ಮುಸ್ಲಿಂ ನಾಯಕರ ಜೊತೆ ಭಾಗ್ವತ್‌ ಚರ್ಚೆ - ಸಂವಾದಕ್ಕೆ ಜಂಟಿ ನಿರ್ಧಾರ

Kannadaprabha News   | Kannada Prabha
Published : Jul 25, 2025, 07:54 AM IST
RSS mohan bhagwat

ಸಾರಾಂಶ

ದೇಶದಲ್ಲಿ ಕೋಮು ಸೌಹಾರ್ದತೆ ಸ್ಥಾಪಿಸುವ ಉದ್ದೇಶದೊಂದಿಗೆ, ಹಿಂದೂಗಳು ಮತ್ತು ಮುಸಲ್ಮಾನರ ನಡುವೆ ಮಾತುಕತೆ ಏರ್ಪಡಿಸಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತು ಇಸ್ಲಾಂನ ಕೆಲ ಪ್ರಮುಖ ಧರ್ಮಗುರುಗಳು ನಿರ್ಧರಿಸಿದ್ದಾರೆ

ನವದೆಹಲಿ: ದೇಶದಲ್ಲಿ ಕೋಮು ಸೌಹಾರ್ದತೆ ಸ್ಥಾಪಿಸುವ ಉದ್ದೇಶದೊಂದಿಗೆ, ಹಿಂದೂಗಳು ಮತ್ತು ಮುಸಲ್ಮಾನರ ನಡುವೆ ಮಾತುಕತೆ ಏರ್ಪಡಿಸಬೇಕು ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತು ಇಸ್ಲಾಂನ ಕೆಲ ಪ್ರಮುಖ ಧರ್ಮಗುರುಗಳು ನಿರ್ಧರಿಸಿದ್ದಾರೆ ಎಂದು ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಉಮರ್ ಅಹ್ಮದ್ ಇಲಿಯಾಸಿ ತಿಳಿಸಿದ್ದಾರೆ.

ದೆಹಲಿಯ ಹರ್ಯಾಣ ಭವನದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗವತ್‌ ಜತೆ ಸಂಘದ ಹಿರಿಯ ನಾಯಕರು, ಇಮಾಮ್‌ಗಳು, ಮುಫ್ತಿಗಳು ಮತ್ತು ಮದರಸಾಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಈ ಸಭೆಯನ್ನು ಸಂಘ ‘ಸಕಾರಾತ್ಮಕ’ ಸಭೆ ಎಂದು ಕರೆದಿದ್ದು, ‘ಇದು ಸಮಾಜದ ಎಲ್ಲಾ ವರ್ಗಗಳೊಂದಿಗೆ ಸಂವಾದ ನಡೆಸುವ ಪ್ರಕ್ರಿಯೆಯಾಗಿದೆ. ದೇಶದ ಹಿತಾಸಕ್ತಿಗಾಗಿ ಎಲ್ಲರೂ ಒಟ್ಟಾಗಿ ಹೇಗೆ ಕೆಲಸ ಮಾಡಬಹುದು ಎಂಬುದು ಇದರ ಮುಖ್ಯ ಉದ್ದೇಶವಾಗಿತ್ತು’ ಎಂದು ಆರ್‌ಎಸ್‌ಎಸ್‌ನ ಮಾಧ್ಯಮ ವಿಭಾಗದ ಮುಖ್ಯಸ್ಥ ಸುನಿಲ್‌ ಅಂಬೇಕರ್‌ ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸಲಹೆಗೆ ಕಿವಿಗೊಡಿ: ಪ್ರಧಾನಿ ಮೋದಿಗೆ ವಿಪಕ್ಷ ಆಗ್ರಹ

ಮಣಿಪುರ ಗಲಭೆಯನ್ನು ತಿಳಿಗೊಳಿಸಲು ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನು ಪ್ರಧಾನಿ ಮೋದಿ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯದರ್ಶಿ ಜೈರಾಂ ರಮೇಶ್‌ ಟ್ವೀಟ್‌ ಮಾಡಿ ‘ಸ್ವತಃ ಮೋದಿಯ ಆತ್ಮಸಾಕ್ಷಿ ಹಾಗೂ ಮಣಿಪುರದ ಜನತೆಯ ಒತ್ತಾಸೆಯಿದ್ದರೂ ಮಣಿಪುರಕ್ಕೆ ಹೋಗದ ಪ್ರಧಾನಿ ಭಾಗವತ್‌ ಹೇಳಿದ ಮೇಲೆ ಹೋಗುವರೇ’ ಎಂದು ಪ್ರಶ್ನಿಸಿದ್ದಾರೆ.

ಅಹಂ ಇರಬಾರದು: ಬಿಜೆಪಿಗೆ ಆರೆಸ್ಸೆಸ್‌ನ ಮೋಹನ್ ಭಾಗವತ್ ಚಾಟಿ

ಹಿರಿಯ ನಾಯಕ ಕಪಿಲ್‌ ಸಿಬಲ್‌ ‘ಮೋದಿಯ ಡಿಎನ್‌ಎನಲ್ಲಿ ಪ್ರತಿಪಕ್ಷಗಳ ನಾಯಕರ ಮಾತುಗಳನ್ನು ಕೇಳುವ ವ್ಯವಧಾನವಿಲ್ಲ. ಕನಿಷ್ಠ ಆರ್‌ಎಸ್‌ಎಸ್‌ ಮುಖ್ಯಸ್ಥರ ಸಲಹೆಯನ್ನಾದರೂ ಕೇಳಲಿ’ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕ ಗೌರವ್‌ ಗೊಗೊಯ್‌ ಮಾತನಾಡಿ ಪ್ರಧಾನಿ ಮೋದಿ ಆರ್‌ಎಸ್‌ಎಸ್‌ ಮುಖ್ಯಸ್ಥರ ಮಾತನ್ನು ನಿರ್ಲಕ್ಷಿಸಿದರೂ ಅವರನ್ನು ಪ್ರಶ್ನಿಸಲು ಮತದಾರರು ಇಂಡಿಯಾ ಕೂಟದ ಸದಸ್ಯರನ್ನು ಆರಿಸಿರುವುದಾಗಿ ಎಚ್ಚರಿಸಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ