
ಲಕ್ನೋ (ಅ. 04): ಮಂಗ ತನ್ನ ಕೈಯಲ್ಲಿ ಹಿಡಿದುಕೊಂಡಿದ್ದನ್ನು ಅಷ್ಟುಸುಲಭವಾಗಿ ಬಿಡುವುದಿಲ್ಲ. ಆದರೆ, ಮಂಗನ ಕೈತಪ್ಪಿ ಬಿದ್ದ ಕಲ್ಲು ತಗುಲಿ ನಾಲ್ಕು ತಿಂಗಳ ಮಗುವೊಂದು ಸಾವನ್ನಪ್ಪಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಮುಜಫರಾಬಾದ್‌ನಲ್ಲಿ ಶನಿವಾರ ನಡೆದಿದೆ.
ಮಗು ಪೋಷಕರ ಜೊತೆ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಮನೆಯ ಮೇಲೆ ಮಂಗ ಬಂದಿದ್ದು ಯಾರ ಗಮನಕ್ಕೂ ಬಂದಿರಲಿಲ್ಲ. ಟೆರೆಸ್ ಮೇಲೆ ಹಾರುತ್ತಿದ್ದ ಮಂಗ ಅಲ್ಲಿದ್ದ ಕಲ್ಲೊಂದನ್ನು ಕೆಳಕ್ಕೆ ಬೀಳಿಸುತ್ತಿತ್ತು. ಆದರೆ, ಆ ಕಲ್ಲು ನೇರವಾಗಿ ಮಗುವಿನ ಮೇಲೆಯೇ ಬಿದ್ದಿದ್ದರಿಂದ ಮಗು ತೀವ್ರ ಗಾಯಗೊಂಡಿತ್ತು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ