Monsoon 6 ದಿನಕ್ಕೂ ಮೊದಲೇ ಅಂಡಮಾನ್ ನಿಕೋಬಾರ್‌ಗೆ ಮುಂಗಾರು ಪ್ರವೇಶ!

By Suvarna News  |  First Published May 16, 2022, 6:46 PM IST
  • ಭಾರತ ಹವಾಮಾನ ಇಲಾಖೆ ಮಹತ್ವದ ಸೂಚನೆ
  • ನಿಗದಿತ ಸಮಯಕ್ಕೂ ಮೊದಲೇ ಮುಂಗಾರು ಪ್ರವೇಶ
  • 4 ತಿಂಗಳ ಸತತ ಮಳೆ ಆರಂಭ, ಬಿಸಿಲಿನ ತಾಪಮಾನ ಇಳಿಕೆ
     

ನವದೆಹಲಿ(ಮೇ.16): ನೈಋತ್ಯ ಮಾನ್ಸೂನ್ 6 ದಿನಕ್ಕೂ ಮೊದಲೇ ಭಾರತ ಪ್ರವೇಶಿಸಿದೆ ಎಂದು ಭಾರತೀಯ ಹಮಾಮಾನ ಇಲಾಖೆ (IMD )ಹೇಳಿದೆ. ಇದರಿಂದ ಭಾರತದಲ್ಲಿ ಕೃಷಿ ಚಟುವಟಿಕೆ ಗರಿಗೆದರಿದೆ.  ನೈಋತ್ಯ ಮುಂಗಾರು ಸೋಮವಾರ(ಮೇ.16) ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರವೇಶಿಸಿದೆ. ಕೃಷಿ ಅವಲಂಬಿತ ಮುಂಗಾರು ಇದಾಗಿದ್ದು, ಆರ್ಥಿಕತೆ ಪುಟಿದೇಳಲು ಸಹಕಾರಿಯಾಗಿದೆ. 

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಳೆಯಾಗುತ್ತಿದೆ. ಇದರ ಹತ್ತಿರದ ಹಾಗೂ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಮುಂಗಾರು ಬಲಗೊಳ್ಳುತ್ತಿದೆ. ಇದರಿಂದ ಸತತ ಮಳೆಯಾಗಲಿದೆ ಎಂದು IMD ಎಚ್ಚರಿಸಿದೆ.  

Tap to resize

Latest Videos

ಎಲ್ಲೊ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ..., ಮಧುರ ನೆನಪು!

ನೈಋತ್ಯ ಮುಂಗಾರು ಬಲಗೊಳ್ಳುತ್ತಿರುವ ಕಾರಣ ಮುಂದಿನ ಎರಡರಿಂದ ಮೂರು ದಿನಗಳಲ್ಲಿ ದಕ್ಷಿಣ ಬಂಗಾಳ ಕೊಲ್ಲಿ, ಪೂರ್ವ-ಮಧ್ಯ ಬಂಗಾಳ ಕೊಲ್ಲಿ ಹಾಗೂ   ಅಂಡಮಾನ್ ಸಮುದ್ರ, ಅಂಡಮಾನ್ ದ್ವೀಪಗಳಲ್ಲಿ ಮಳೆಯಾಗಲಿದೆ. ಇದರಿಂದ ದೇಶದ ಇತರ ಭಾಗಗಳಲ್ಲಿ ಮುಂಗಾರು ಬಲಗೊಳ್ಳಲಿದೆ. ಇಷ್ಟೇ ಅಲ್ಲ ಸಮಯಕ್ಕೆ ಸರಿಯಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಗಾಗಲೇ ಕೇರಳದಲ್ಲಿ ಮುಂಗಾರು ಪ್ರವೇಶಿಸಿದೆ. ಇದೀಗ ತಮಿಳುನಾಡಿನಲ್ಲೂ ಮಳೆಯಾಗುತ್ತಿದೆ. ಇತ್ತ ದಕ್ಷಿಣ ಕರ್ನಾಟಕದಲ್ಲೂ ಮಳೆಯಾಗುತ್ತಿದೆ. ಮುಂದಿನ 4 ದಿನ ಭಾರಿ ಮಳೆಯಾಗು ಸಂಭವವಿದೆ. 

ಕೇರಳದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ: ರೆಡ್‌ ಅಲರ್ಚ್‌ ಪ್ರಕಟ
ದೇಶದ ಆರ್ಥಿಕತೆ, ರೈತಾಪಿ ವರ್ಗದ ಜೀವನಾಡಿಯಾಗಿರುವ ಮುಂಗಾರು ಮಾರುತಗಳ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದ್ದು, ಕೇರಳದ ಹಲವು ಭಾಗಗಳಲ್ಲಿ ಭಾನುವಾರ ಮುಂಗಾರುಪೂರ್ವ ಮಳೆ ಭರ್ಜರಿಯಾಗಿ ಸುರಿದಿದೆ. ಜೊತೆಗೆ ಕೇರಳ, ಕರ್ನಾಟಕ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅನ್ನದಾತರು, ಜನರಿಗೆ ಸಂತಸದ ಸುದ್ದಿ: ಸತತ 4ನೇ ವರ್ಷವೂ ಉತ್ತಮ ಮುಂಗಾರು: ಐಎಂಡಿ!

ಉತ್ತಮ ಮಳೆ, ಉಳುಮೆ ಎತ್ತುಗಳಿಗೆ ಭರ್ಜರಿ ಡಿಮ್ಯಾಂಡ್‌
ಕಳೆದ ಎರಡು ವರ್ಷ ಕೊರೋನಾದಿಂದ ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಉಳುಮೆ ಎತ್ತುಗಳ ಖರೀದಿಗೆ ಪರದಾಡಿದ್ದ ರೈತರು, ಈ ಸಲ ಮುಂಗಾರು ಪೂರ್ವದಲ್ಲಿ ಬೀಳುತ್ತಿರುವ ಉತ್ತಮ ಮಳೆಯಿಂದ ಸಂತಸಗೊಂಡು ಎತ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಇದರಿಂದ ಉಳುಮೆ ಎತ್ತುಗಳಿಗೆ ಭಾರೀ ಡಿಮ್ಯಾಂಡ್‌ ಬಂದಿದೆ.

 ಪ್ರತಿ ವರ್ಷದ ವಾಡಿಕೆಯಂತೆ ಜೂನ್‌ ತಿಂಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುತ್ತಿದ್ದ ಮುಂಗಾರು ಮಳೆ ಈ ಬಾರಿ ಮೇ ತಿಂಗಳ್ಯಾಂತಕ್ಕೇ ರಾಜ್ಯಕ್ಕೆ ಕಾಲಿಡಲಿದೆ. ಜತೆಗೆ ಈ ಬಾರಿ ಮುಂಗಾರು ರಾಜ್ಯದಲ್ಲಿ ಉತ್ತಮ ಮಳೆ ಸುರಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಪ್ರತಿ ವರ್ಷ ಜೂನ್‌ 1 ಅಥವಾ ಅದರ ಬಳಿಕ ಕೇರಳದ ಕರಾವಳಿಗೆ ಮುಂಗಾರು ಪ್ರವೇಶವಾಗುತ್ತಿತ್ತು. ಈ ಬಾರಿ ಮೇ 27 ರಂದೇ ಕೇರಳದ ಕರಾವಳಿಗೆ ಮಾನ್ಸೂನ್‌ ಮಾರುತ ಅಪ್ಪಳಿಸಲಿದೆ. ಪರಿಣಾಮ ಮುಂದಿನ 3-4 ದಿನದ ಒಳಗಾಗಿ ರಾಜ್ಯದ ಕರಾವಳಿ ಪ್ರದೇಶವಾದ ಮಂಗಳೂರನ್ನು ಮಾನ್ಸೂನ್‌ ಮಾರುತ ಪ್ರವೇಶಿಸಲಿದೆ ಎಂದು ಹಾವಾಮಾನ ಕೇಂದ್ರದ ಅಧಿಕಾರಿ ಸದಾನಂದ ಅಡಿಗ ತಿಳಿಸಿದ್ದಾರೆ. ರಾಜ್ಯದ ಕರಾವಳಿಗೆ ತಲುಪಿದ ಬಳಿಕ ಸುಮಾರು 3 ದಿನಗಳಲ್ಲಿ ದಕ್ಷಿಣ ಹಾಗೂ ಉತ್ತರ ಒಳನಾಡನ್ನು ಮಾನ್ಸೂನ್‌ ಆವರಿಸಲಿದೆ. ಇದರಿಂದ ರಾಜ್ಯದಲ್ಲಿ ವಾಡಿಕೆಗಿಂತ ಮೊದಲೇ ಈ ಬಾರಿಯ ಮಾನ್ಸೂನ್‌ ಮಳೆ ಸುರಿಯಲಿದೆ ಎಂದು ಹೇಳಿದರು.

click me!