ಮೇ.31ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶ: ಈ ವರ್ಷ ಹಿಂದಿಗಿಂತ ಅಧಿಕ ಮಳೆ, ಐಎಂಡಿ

By Kannadaprabha News  |  First Published May 16, 2024, 6:50 AM IST

ಈ ವರ್ಷ ನೈಋತ್ಯ ಮುಂಗಾರು ಮೇ 31ರ ವೇಳೆಗೆ ಕೇರಳ ಪ್ರವೇಶಿಸುವ ಸಂಭವವಿದೆ. ಈ ದಿನಾಂಕದಲ್ಲಿ 4 ದಿನ ಹಿಂದು-ಮುಂದು ಆಗಬಹುದು. ಈ ಬಾರಿ ಮುಂಗಾರು ಮುಂಚಿತವಾಗೇನು ಪ್ರವೇಶ ಮಾಡುತ್ತಿಲ್ಲ. ಸಾಮಾನ್ಯವಾಗಿ ಜೂ.1ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸುವ ವಾಡಿಕೆ ಹೊಂದಿದ್ದು, ಅದೇ ಸಮಯವೇ ಈ ವರ್ಷವೂ ಪಾಲನೆಯಾಗಬಹುದು ಎಂದು ಹೇಳಿದ ಭಾರತೀಯ ಹವಾಮಾನ ಇಲಾಖೆ 


ನವದೆಹಲಿ(ಮೇ.16):  ದೇಶದ ಕೃಷಿ ಚಟುವಟಿಕೆ ಮತ್ತು ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ.31ರ ವೇಳೆಗೆ ದೇಶದ ದಕ್ಷಿಣದ ತುತ್ತತುದಿಯ ರಾಜ್ಯವಾದ ಕೇರಳದ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ, ‘ಈ ವರ್ಷ ನೈಋತ್ಯ ಮುಂಗಾರು ಮೇ 31ರ ವೇಳೆಗೆ ಕೇರಳ ಪ್ರವೇಶಿಸುವ ಸಂಭವವಿದೆ. ಈ ದಿನಾಂಕದಲ್ಲಿ 4 ದಿನ ಹಿಂದು-ಮುಂದು ಆಗಬಹುದು. ಈ ಬಾರಿ ಮುಂಗಾರು ಮುಂಚಿತವಾಗೇನು ಪ್ರವೇಶ ಮಾಡುತ್ತಿಲ್ಲ. ಸಾಮಾನ್ಯವಾಗಿ ಜೂ.1ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸುವ ವಾಡಿಕೆ ಹೊಂದಿದ್ದು, ಅದೇ ಸಮಯವೇ ಈ ವರ್ಷವೂ ಪಾಲನೆಯಾಗಬಹುದು’ ಎಂದು ಹೇಳಿದೆ.

Tap to resize

Latest Videos

ಕರ್ನಾಟಕದ 8 ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ: ಉಡುಪಿಯಲ್ಲಿ ಸಿಡಿಲು ಬಡಿದು ಯುವಕ ಸಾವು

ಜೂನ್‌- ಸೆಪ್ಟೆಂಬರ್‌ ಅವಧಿಯಲ್ಲಿ ದೇಶದಲ್ಲಿ ಮಳೆ ಸುರಿಸುವ ಮುಂಗಾರು ಮಾರುತಗಳ ಈ ಬಾರಿ ದೀರ್ಘಕಾಲೀನ ಸರಾಸರಿಗಿಂತ ಹೆಚ್ಚಿ ಮಳೆ ಸುರಿಸಬಹುದು ಎಂದು ಕಳೆದ ತಿಂಗಳು ಹವಾಮಾನ ಇಲಾಖೆ ಶುಭ ಸುದ್ದಿ ನೀಡಿತ್ತು.

ನೈಋತ್ಯ ಮಾನ್ಸೂನ್ ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ಇದು ದೇಶದ ವಾರ್ಷಿಕ ಮಳೆಯ ಬಹುಪಾಲನ್ನು ಒದಗಿಸುತ್ತದೆ. ಈ ಅವಧಿಯಲ್ಲಿ ಖಾರೀಫ್ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಜೂನ್ ಮತ್ತು ಜುಲೈ ತಿಂಗಳ ಅವಧಿಯ ನೈಋತ್ಯ ಮಾನ್ಸೂನ್ ಅತಿ ಮಹತ್ವದ್ದು ಅಂತಲೇ ಪರಿಗಣಿಸಲಾಗುತ್ತದೆ. ನೈಋತ್ಯದಿಂದ ಬೀಸುವ ಮಾನ್ಸೂನ್ ಸಾಮಾನ್ಯವಾಗಿ ಜೂನ್‌ನಲ್ಲಿ ಆರಂಭವಾಗಿ ಸೆಪ್ಟೆಂಬರ್ ತಿಂಗಳಿನಲ್ಲಿ ಕೊನೆಗೊಳ್ಳುತ್ತದೆ.

ಕಳೆದ ವರ್ಷ ಎಷ್ಟು ಮಳೆ ಬಂದಿತ್ತು

2023ರಲ್ಲಿ ಜೂ.8ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶ ಮಾಡಿದ್ದವು. ಅಂದರೆ ಸಾಮಾನ್ಯ ಪ್ರವೇಶದ ದಿನಕ್ಕಿಂತ 7 ದಿನ ವಿಳಂಬವಾಗಿ ಆಗಮನವಾಗಿತ್ತು. ಕಳೆದ ವರ್ಷ ದೇಶದಲ್ಲಿ ದೀರ್ಘಕಾಲೀನ ಸರಾಸರಿಯ ಶೇ.93ರಷ್ಟು ಮಳೆ ಸುರಿದಿತ್ತು.

click me!