
ನವದೆಹಲಿ(ಸೆ. 24) ಅಮೆರಿಕ ಪ್ರವಾಸಲ್ಲಿರುವ ಪ್ರಧಾನಿ ಮೋದಿ ಅವರನ್ನು ಟ್ವೀಟ್ ಮೂಲಕ ಅಣುಕಿಸುವ ಕೆಲಸ ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಎಸ್ ಅಧ್ಯಕ್ಷ ಜೋ ಬಿಡೆನ್, ಕ್ವಾಡ್ ಸದಸ್ಯರು ಮತ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಸಭೆಗಳಲ್ಲಿ ಭಾಗವಹಿಸಲು ಸಜ್ಜಾಗಿರುವ ಸಮಯದಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೇಲಿ ಮಾಡುವಂತಹ ಟ್ವಿಟ್ ಮಾಡಿದ್ದಾರೆ. ಮಿಸ್ಟರ್ 56 ಚೀನಾಕ್ಕೆ ಹೆದರಿದ್ದಾರೆ ಎಂದು ಟ್ವಿಟ್ ಮಾಡಿದ್ದು ದೊಡ್ಡ ಚರ್ಚೆಗೆ ಕಾರಣವಾಗಿದೆ.
ಹಲವಾರು ಮಾಧ್ಯಮಗಳ ಸುದ್ದಿಗಳ ವಿಡಿಯೋ ಹಂಚಿಕೊಂಡಿರುವ ರಾಹುಲ್.. ಭಾರತ ಮತ್ತು ಚೀನಾ ಗಡಿ ಸಮಸ್ಯೆ.. ಯುದ್ಧೋಪಕರಣ ಹೀಗೆ ಹಲವು ವಿಚಾರಗಳನ್ನು ಹಂಚಿದ್ದಾರೆ.
ತಲೆ ಬುಡವಿಲ್ಲದ ಕಮೆಂಟ್ ರಾಹುಲ್ ಮಾಡಿದ್ದಾರೆ ಎಂದು ಬಿಜೆಪಿ ಠಕ್ಕರ್ ಕೊಟ್ಟಿದೆ. ಭಾರತ ಚೀನಾ ನಡುವಿನ ಗಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿ ಸರಿಯಾದ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ ಎನ್ನುವುದು ರಾಹುಲ್ ಆರೋಪ. ಅತ್ತ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಪ್ರಮುಖ ನಾಯಕರ ಜತೆ ಮಾತುಕತೆ ಮಾಡಿದ್ದಾರೆ.
ಅಫ್ಘಾನಿಸ್ತಾನದ ಬೆಳವಣಿಗೆ ನಡುವೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿ ಸಹಜವಾಗಿಯೇ ಅಂತಾರಾಷ್ಟ್ರೀಯ ಮಟ್ಟದ ಸುದ್ದಿಗೆ ಕಾರಣವಾಗಿದೆ. ಪಾಕ್ ಮತ್ತು ಚೀನಾ ವಿರುದ್ಧ ಮೋದಿ ಯಾವ ರಣತಂತ್ರ ರೂಪಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ