
ಮುಂಬೈ (ಫೆ.23): ಮಹಾರಾಷ್ಟ್ರದ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಶೇ.50 ರಿಯಾಯ್ತಿ ದರದಲ್ಲಿ ಟಿಕೆಟ್ ನೀಡುವ ಗ್ಯಾರಂಟಿ ಯೋಜನೆಯಿಂದಾಗಿ ಸಾರಿಗೆ ನಿಗಮಕ್ಕೆ ದಿನಕ್ಕೆ 3 ಕೋಟಿ ರು. ನಷ್ಟವಾಗುತ್ತಿದೆ ಎಂದು ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರನಾಯಕ್ ಹೇಳಿದ್ದಾರೆ.
ಧಾರಾಶಿವ್‌ನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಸಚಿವರು, ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ ಶೇ.50ರಷ್ಟು ರಿಯಾಯ್ತಿ ದರ ನೀಡಲಾಗಿದೆ. ಜೊತೆಗೆ ಹಿರಿಯ ನಾಗರಿಕರು ಸಹ ರಿಯಾಯ್ತಿ ದರದಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದ ನಿಗಮಕ್ಕೆ ನಿತ್ಯ 3 ಕೋಟಿ ರು. ನಷ್ಟವಾಗುತ್ತಿದೆ. ಇದು ಹೀಗೆಯೇ ಮುಂದುವರಿದರೆ, ಸಾರಿಗೆ ಸಂಸ್ಥೆ ನಡೆಸುವುದು ತುಂಬಾ ಕಷ್ಟ. ಆಗ ರಿಯಾಯ್ತಿ ಯೋಜನೆ ನಿಲ್ಲಿಸುವ ಪ್ರಸ್ತಾಪ ಮಾಡಬೇಕಾಗುತ್ತದೆ ಎಂದರು.
ಇದನ್ನೂ ಓದಿ: ಮರಾಠಿ ಪುಂಡಾಟಿಕೆ ಮತ್ತಷ್ಟು ತೀವ್ರ,, ಕರ್ನಾಟಕದ ವೋಲ್ವೋ ಬಸ್‌ಗೆ ಮಸಿ ಬಳಿದ ಪುಂಡರು!
ಸ್ಕೀಂ ನಿಲ್ಲಿಸಲ್ಲ- ಸಿಎಂ, ಡಿಸಿಎಂ:
ಈ ನಡುವೆ, ಸರನಾಯಕ್ ಹೇಳಿಕೆ ಸಂಚಲನಕ್ಕೆ ಕಾರಣ ಆಗುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಯಾವುದೇ ಕಾರಣಕ್ಕೂ ಗ್ಯಾರಂಟಿ ಸ್ಕೀಂ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ