ಜನವರಿ 26ರಿಂದ 24/7 ಪಬ್‌, ಬಾರ್‌, ಮಾಲ್‌ ಓಪನ್‌!

Published : Jan 18, 2020, 11:02 AM ISTUpdated : Jan 18, 2020, 11:10 AM IST
ಜನವರಿ 26ರಿಂದ 24/7 ಪಬ್‌, ಬಾರ್‌, ಮಾಲ್‌ ಓಪನ್‌!

ಸಾರಾಂಶ

ಇನ್ನು 24/7 ಪಬ್‌, ಬಾರ್‌, ಮಾಲ್‌ ಓಪನ್‌!| ನಗರದ ಜೀವನವನ್ನು ಮತ್ತಷ್ಟುಹೊಳೆಯುವಂತೆ ಮಾಡುವುದು ಇದರ ಹಿಂದಿನ ಉದ್ದೇಶ ಎಂಬ ಸ್ಪಷ್ಟನೆ

ಮುಂಬೈ[ಜ.18]: ‘ನಿದ್ರೆಯಿಲ್ಲದ ನಗರ’ ಎಂದೇ ಖ್ಯಾತಿಗೊಳಗಾಗಿರುವ ಮುಂಬೈನಲ್ಲಿ ಇನ್ನು ಈ ಹೆಸರಿಗೆ ತಕ್ಕಂತೆ ಚಟುವಟಿಕೆಗಳು ನಡೆಯಲಿವೆ. ನಗರದ ಮಾಲ್‌ಗಳು, ಶಾಪಿಂಗ್‌ ಕಾಂಪ್ಲೆಕ್ಸ್‌ಗಳು, ಬಾರ್‌ ಮತ್ತು ರೆಸ್ಟೋರೆಂಟ್‌ಗಳನ್ನು ದಿನದ 24 ತಾಸೂ ತೆರೆಯಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.

ಬೆಂಗಳೂರಿನಲ್ಲಿ ಅನಧಿಕೃತ ಪಬ್, ಬಾರ್ ಗಳೇ ಹೆಚ್ಚು !

ಇತ್ತೀಚೆಗೆ ಶಿವಸೇನೆ ಮುಖಂಡ ಹಾಗೂ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಅಧ್ಯಕ್ಷತೆಯಲ್ಲಿ ನಡೆದ ಮುಂಬೈ ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನಗರದ ಜೀವನವನ್ನು ಮತ್ತಷ್ಟು ಹೊಳೆಯುವಂತೆ ಮಾಡುವುದು ಇದರ ಹಿಂದಿನ ಉದ್ದೇಶ ಎಂದು ಹೇಳಲಾಗಿದೆ. ಆದರೆ ಈ ನಿರ್ಧಾರಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಜನವಸತಿ ಪ್ರದೇಶಗಳನ್ನು ಈ ನಿರ್ಧಾರದಿಂದ ಹೊರಗಿಡಬೇಕು ಎಂದು ಆಗ್ರಹಿಸಿದೆ. 

ದೇವರ ಹೆಸರಿನ ಬಾರ್‌, ವೈನ್‌ಶಾಪ್‌ ನಾಮಫಲಕ ತೆರವಿಗೆ ಕ್ರಮ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!