ಹಿಂದೂ ಹೆಸರಿನಲ್ಲಿ ಬಳೆ ಮಾರುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಥಳಿತ!

Published : Aug 24, 2021, 10:20 AM IST
ಹಿಂದೂ ಹೆಸರಿನಲ್ಲಿ ಬಳೆ ಮಾರುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಥಳಿತ!

ಸಾರಾಂಶ

* ಬಳೆ ಮಾರುತ್ತಿದ್ದ 25 ವರ್ಷದ ವ್ಯಕ್ತಿಯನ್ನು ಥಳಿಸಿದ ಅಪರಿಚಿತ ಗುಂಪು * 10 ಸಾವಿರ ರು. ಕದ್ದೊಯ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ * ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು

 

ಇಂದೋರ್‌(ಆ.24): ಬಳೆ ಮಾರುತ್ತಿದ್ದ 25 ವರ್ಷದ ವ್ಯಕ್ತಿಯನ್ನು ಅಪರಿಚಿತ ಗುಂಪೊಂದು ಸಾರ್ವಜನಿಕವಾಗಿ ಥಳಿಸಿ, 10 ಸಾವಿರ ರು. ಕದ್ದೊಯ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇಂದೋರ್‌ನ ಬಾನ್‌ಗಂಗಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

‘ಬಳೆ ಮಾರುತ್ತಿದ್ದ ಮುಸ್ಲಿಂ ವ್ಯಕ್ತಿ ತನ್ನ ವ್ಯಾಪಾರಕ್ಕಾಗಿ ಹಿಂದೂ ಹೆಸರು ಇಟ್ಟುಕೊಂಡಿದ್ದ, ಆತನ ಬಳಿ ಬೇರೆ ಬೇರೆ ಹೆಸರಿನಲ್ಲಿ 2 ಆಧಾರ್‌ ಕಾರ್ಡ್‌ ಲಭ್ಯವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಜನರು ಕೊಮು ದ್ವೇಷ ಹರಡುವ ಪೋಸ್ಟ್‌ಗಳನ್ನು ಹಂಚಬಾರದು ಎಂದು ಸೂಚಿಸಿದ್ದಾರೆ.

‘ಬಳೆ ಮಾರುತ್ತಿದ್ದಾಗ ಬಂದ ಗುಂಪೊಂದು ನನ್ನ ಹೆಸರನ್ನು ಕೇಳಿ ಥಳಿಸಲು ಆರಂಭಿಸಿದರು. ಬಳೆಗಳು ಸೇರಿದಂತೆ ಇತರ ವಸ್ತುಗಳನ್ನು ನಾಶ ಮಾಡಿದ್ದಾರೆ ಮತ್ತು ನನ್ನ ಬಳಿ ಇದ್ದ 10 ಸಾವಿರ ರು. ಕದ್ದುಕೊಂಡು ಹೋಗಿದ್ದಾರೆ’ ಎಂದು ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!