ವಿಶ್ವದ ಅತೀದೊಡ್ಡ ದೇಗುಲ ನಿರ್ಮಾಣಕ್ಕೆ ಭೂಮಿ ನೀಡಿದ ಮುಸ್ಲಿಂ ಕುಟುಂಬ

Suvarna News   | Asianet News
Published : Mar 22, 2022, 10:49 AM ISTUpdated : Mar 22, 2022, 10:50 AM IST
ವಿಶ್ವದ ಅತೀದೊಡ್ಡ ದೇಗುಲ ನಿರ್ಮಾಣಕ್ಕೆ ಭೂಮಿ ನೀಡಿದ ಮುಸ್ಲಿಂ ಕುಟುಂಬ

ಸಾರಾಂಶ

  ದೇಗುಲ ನಿರ್ಮಾಣಕ್ಕೆ ಭೂಮಿ ನೀಡಿದ ಮುಸ್ಲಿಂ ಕುಟುಂಬ 2.5 ಕೋಟಿ ಮೌಲ್ಯದ ಭೂಮಿ ದಾನ ಇಶ್ತಿಯಾಕ್ ಅಹ್ಮದ್ ಖಾನ್ ಕುಟುಂಬದಿಂದ ಭೂಮಿ

ಪಾಟ್ನಾ: ದೇಶದಲ್ಲಿ ಇತ್ತೀಚೆಗೆ ಹಿಂದೂ ಮುಸ್ಲಿಂ ಸಮುದಾಯದ ನಡುವೆ ಸೌಹಾರ್ದತೆಗಿಂತ ಸಂಘರ್ಷವೇ ಹೆಚ್ಚಾಗುತ್ತಿದೆ. ಈ ನಡುವೆ ಬಿಹಾರದ ಮುಸ್ಲಿಂ ಕುಟುಂಬವೊಂದು ( Muslim family)ಹಿಂದೂ ದೇಗುಲ ನಿರ್ಮಾಣಕ್ಕೆ ಭೂಮಿ ದಾನ ಮಾಡಿದೆ. ಬಿಹಾರದ (Bihar) ಪೂರ್ವ ಚಂಪಾರಣ್ (East Champaran) ಜಿಲ್ಲೆಯ ಕೈತ್ವಾಲಿಯಾ (Kaithwalia) ಪ್ರದೇಶದಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ-ವಿರಾಟ್ ರಾಮಾಯಣ ಮಂದಿರ (Virat Ramayan Mandir) ನಿರ್ಮಾಣಕ್ಕೆ ರೂ.2.5 ಕೋಟಿ ಮೌಲ್ಯದ ಭೂಮಿಯನ್ನು ಮುಸ್ಲಿಂ ಕುಟುಂಬವೊಂದು ದಾನ ಮಾಡಿದೆ.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಯೋಜನೆಯನ್ನು ಕೈಗೆತ್ತಿಕೊಂಡಿರುವ ಪಾಟ್ನಾ (Patna) ಮೂಲದ ಮಹಾವೀರ ಮಂದಿರ ಟ್ರಸ್ಟ್‌ನ (Mahavir Mandir Trust) ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ಅವರು, ಗುವಾಹಟಿ (Guwahati) ಮೂಲದ ಪೂರ್ವ ಚಂಪಾರಣ್‌ನ ಉದ್ಯಮಿ ಇಶ್ತಿಯಾಕ್ ಅಹ್ಮದ್ ಖಾನ್ (Ishtiyaq Ahmad Khan) ಈ ದೇಗುಲ ನಿರ್ಮಾಣಕ್ಕೆ ಭೂಮಿಯನ್ನು ದಾನ ಮಾಡಿದ್ದಾರೆ ಎಂದು ಹೇಳಿದರು. 

ದೇಗುಲದಲ್ಲಿ ನಡೆಯಿತು ವಿಚಿತ್ರ : ಚಿನ್ನದ ಸರ ಕಳೆದುಕೊಂಡಾಕೆಗೆ ಸಿಕ್ತು ಚಿನ್ನದ ಬಳೆ

ಅವರು ಇತ್ತೀಚೆಗೆ ಕೇಶರಿಯಾ ಉಪವಿಭಾಗದ (ಪೂರ್ವ ಚನ್ಂಪಾರಣ್) ರಿಜಿಸ್ಟ್ರಾರ್ ಕಚೇರಿಯಲ್ಲಿ ದೇವಾಲಯದ ನಿರ್ಮಾಣಕ್ಕಾಗಿ ತಮ್ಮ ಕುಟುಂಬಕ್ಕೆ ಸೇರಿದ ಭೂಮಿಯನ್ನು ದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿಯೂ ಆಗಿದ್ದ ಕಿಶೋರ್ ಕುನಾಲ್ (Acharya Kishore Kunal) ಸುದ್ದಿಗಾರರಿಗೆ ತಿಳಿಸಿದರು.

ಖಾನ್ ಮತ್ತು ಅವರ ಕುಟುಂಬದವರ ಈ ದೇಣಿಗೆಯು ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದು ಆಚಾರ್ಯ ಹೇಳಿದರು. ಮುಸ್ಲಿಮರ ಸಹಾಯವಿಲ್ಲದಿದ್ದರೆ ಈ ಕನಸಿನ ಯೋಜನೆ ಸಾಕಾರಗೊಳ್ಳುವುದು ಕಷ್ಟಸಾಧ್ಯ ಎಂದರು. ಮಹಾವೀರ ಮಂದಿರ ಟ್ರಸ್ಟ್ ಈ ದೇವಸ್ಥಾನ ನಿರ್ಮಾಣಕ್ಕಾಗಿ ಇದುವರೆಗೆ 125 ಎಕರೆ ಭೂಮಿಯನ್ನು ಪಡೆದುಕೊಂಡಿದೆ. ಟ್ರಸ್ಟ್ ಶೀಘ್ರದಲ್ಲೇ ಈ ಪ್ರದೇಶದಲ್ಲಿ ಇನ್ನೂ 25 ಎಕರೆ ಭೂಮಿಯನ್ನು ಪಡೆಯಲಿದೆ. 

ಬಾಂಗ್ಲಾದೇಶದ ಢಾಕಾದಲ್ಲಿ ದುಷ್ಕರ್ಮಿಗಳಿಂದ ಇಸ್ಕಾನ್‌ ದೇಗುಲ ಧ್ವಂಸ

ವಿರಾಟ್ ರಾಮಾಯಣ ಮಂದಿರವು 215 ಅಡಿ ಎತ್ತರವಿರುವ ಕಾಂಬೋಡಿಯಾದ (Cambodia) 12 ನೇ ಶತಮಾನದ ವಿಶ್ವಪ್ರಸಿದ್ಧ ಅಂಕೋರ್ ವಾಟ್ (Angkor Wat) ಸಂಕೀರ್ಣಕ್ಕಿಂತ ಎತ್ತರವಾಗಿದೆ. ಪೂರ್ವ ಚಂಪಾರಣ್‌ನಲ್ಲಿರುವ ಸಂಕೀರ್ಣವು ಎತ್ತರದ ಗೋಪುರಗಳೊಂದಿಗೆ 18 ದೇವಾಲಯಗಳನ್ನು ಒಳಗೊಂಡಿರುತ್ತದೆ ಮತ್ತು ಅದರ ಶಿವ ದೇವಾಲಯವು ವಿಶ್ವದ ಅತಿದೊಡ್ಡ ಶಿವಲಿಂಗವನ್ನು ಹೊಂದಿರುತ್ತದೆ. ಇದರ ಒಟ್ಟು ನಿರ್ಮಾಣ ವೆಚ್ಚ ಸುಮಾರು  500 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ನವದೆಹಲಿಯಲ್ಲಿ ನೂತನ ಸಂಸತ್ ಭವನ ನಿರ್ಮಾಣದಲ್ಲಿ ತೊಡಗಿರುವ ತಜ್ಞರಿಂದ ಟ್ರಸ್ಟ್ ಶೀಘ್ರದಲ್ಲೇ ಸಲಹೆ ಪಡೆಯಲಿದೆ ಎಂದು ತಿಳಿದು ಬಂದಿದೆ.

ಕೆಲದಿನಗಳ ಹಿಂದೆ ಬಾಂಗ್ಲಾದೇಶದ ಢಾಕಾದಲ್ಲಿರುವ ಇಸ್ಕಾನ್ ರಾಧಾಕಾಂತ ದೇವಾಲಯವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು. 'ಶಬ್-ಎ-ಬರಾತ್' ರಾತ್ರಿ, ಢಾಕಾದಲ್ಲಿರುವ (dhaka) ವಾರಿ ರಾಧಾಕಾಂತ ಇಸ್ಕಾನ್ ದೇವಾಲಯದ (Wari Radhakanta ISKCON temple) ಮೇಲೆ ತೀವ್ರಗಾಮಿಗಳು ಮತ್ತೆ ದಾಳಿ ಮಾಡಿದ್ದಾರೆ. ಈ ದೇವಾಲಯವನ್ನು ರಕ್ಷಿಸುವಲ್ಲಿ ಎಲ್ಲಾ ಹಿಂದೂಗಳು ತಮ್ಮ ಪಾತ್ರವನ್ನು ವಹಿಸಬೇಕೆಂದು ನಾವು ವಿನಂತಿಸುತ್ತಿದ್ದೇವೆ ಎಂದು ಬಾಂಗ್ಲಾದೇಶದ ಹಿಂದೂಗಳ ಧ್ವನಿ ಎಂಬ ಟ್ವೀಟ್ ಖಾತೆ ಟ್ವಿಟ್‌ ಮಾಡಿ ವಿಚಾರ ತಿಳಿಸಿತ್ತು. ದೇಗುಲವನ್ನು ಧ್ವಂಸಗೊಳಿಸುತ್ತಿರುವ ದೃಶ್ಯಗಳನ್ನು ಈ ಬಾಂಗ್ಲಾದೇಶ ಹಿಂದೂ ಧ್ವನಿ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಪೋಸ್ಟ್ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!