ರಾಜ್ಯದ ಮುಸ್ಲಿಂ ಬಾಹುಳ್ಯವಿರುವ ಪ್ರದೇಶವಾದ ಜಮ್ತಾರಾದಲ್ಲಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ರಜೆ ನೀಡಿದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ.
ಜಾರ್ಖಂಡ್: ರಾಜ್ಯದ ಮುಸ್ಲಿಂ ಬಾಹುಳ್ಯವಿರುವ ಪ್ರದೇಶವಾದ ಜಮ್ತಾರಾದಲ್ಲಿ ಶಾಲೆಗಳಿಗೆ ಭಾನುವಾರದ ಬದಲು ಶುಕ್ರವಾರ ರಜೆ ನೀಡಿದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ಜಮ್ತಾರಾದ ಎರಡು ವಾರ್ಡ್‌ಗಳ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಭಾನುವಾರದ ಬದಲು ಶುಕ್ರವಾರದಂದು ವಾರದ ರಜೆ ನೀಡಲಾಗಿದೆ. ಈ ವಾರ್ಡ್‌ಗಳಲ್ಲಿ ಬಹುಪಾಲು ಮುಸ್ಲಿಂ ಜನಸಂಖ್ಯೆ ಇದೆ. ಈ ನಿಟ್ಟಿನಲ್ಲಿ ತನಿಖೆಗೆ ಆದೇಶಿಸಲಾಗಿದೆ.
ಶಾಲೆಗಳಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಶುಕ್ರವಾರ ಉರ್ದು ಶಾಲೆಗಳನ್ನು ಮುಚ್ಚಲು ಅವಕಾಶ ಇರುವ ಅಧಿಸೂಚನೆಯ ನೆಪದಲ್ಲಿ ಈ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶಿಸಲಾಗಿದೆ.
ಸ್ಥಳೀಯ ಮೂಲಗಳ ಪ್ರಕಾರ, ಕರ್ಮತಾಂಡ್ (Karmatand) ಮತ್ತು ನಾರಾಯಣಪುರ (Narayanpur) ಸೇರಿದಂತೆ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಬಹುಪಾಲು ಹಳ್ಳಿಗಳಲ್ಲಿ ಕಾರ್ಯನಿರ್ವಹಿಸುವ ಪ್ರಾಥಮಿಕ ಶಾಲೆಗಳಲ್ಲಿ ಇದನ್ನು ಮಾಡಲಾಗುತ್ತಿದೆ. ಈ ಶಾಲೆಗಳಲ್ಲಿ ಬೇರೆ ಜಾತಿಯ ವಿದ್ಯಾರ್ಥಿಗಳೂ ಓದುತ್ತಾರೆ. ಆದರೆ, ಶೇ.70ರಷ್ಟು ವಿದ್ಯಾರ್ಥಿಗಳು ಮುಸ್ಲಿಂ ಕುಟುಂಬದಿಂದ ಬಂದವರು. ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಯನ್ನು ಮಾಡುತ್ತಾರೆ. ಈ ಕಾರಣಕ್ಕೆ ಶುಕ್ರವಾರದಂದು ಶಾಲೆಗಳನ್ನು ಮುಚ್ಚಲಾಗುತ್ತಿದೆ. ಈ ಶಾಲೆಗಳ ಸೂಚನಾ ಫಲಕದಲ್ಲೂ ವಾರದ ರಜೆ ಬದಲಾವಣೆ ಬಗ್ಗೆ ನಮೂದಿಸಲಾಗಿದೆ ಎಂದು ತಿಳಿದು ಬಂದಿದೆ.
ನೂಪುರ್ ಶರ್ಮಾಗೆ ಬೆಂಬಲ ಸೂಚಿಸಿದ ಹಿಂದೂ ಯುವಕನ ತಲೆ ಕತ್ತರಿಸಿದ ಮುಸ್ಲಿಂ ಯುವಕರು, ವಿಡಿಯೋ ವೈರಲ್!
ಶಿಕ್ಷಣ ಇಲಾಖೆಯಿಂದ ಬಂದಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 1,084 ಪ್ರಾಥಮಿಕ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 15 ಶಾಲೆಗಳು ಮಾತ್ರ ಉರ್ದು ಶಾಲೆಗಳ ಹೆಸರಿನಲ್ಲಿ ನೋಂದಣಿಯಾಗಿವೆ. ಆದರೆ, ಗ್ರಾಮ ಶಿಕ್ಷಣ ಸಮಿತಿ ಹಾಗೂ ಸ್ಥಳೀಯ ಜನರ ಒತ್ತಡದಿಂದಾಗಿ ಹತ್ತಾರು ಶಾಲೆಗಳನ್ನು ಉರ್ದು ಶಾಲೆಗಳೆಂದು ಅಧಿಸೂಚನೆ ಹೊರಡಿಸಲಾಗಿದೆ. ಆದರೆ ಈ ಬಗ್ಗೆ ಶಿಕ್ಷಕರನ್ನು ಕೇಳಿದರೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಸನಾತನ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವ್ಯಕ್ತಿ ಮೇಲೆ ಒತ್ತಡ, ಇಸ್ಲಾಂಗೆ ಮರಳಿ ಬಾ!
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡೆಪ್ಯುಟಿ ಕಮಿಷನರ್, ಫೈಜ್ ಅಹ್ಮದ್ (Faiz Ahmed), ಈ ಬಗ್ಗೆ ಸಂಪೂರ್ಣ ವಿಚಾರದ ಬಗ್ಗೆ ತನಿಖೆಗೆ ಆದೇಶಿಸಲಾಗುವುದು. ತನಿಖೆಯ ನಂತರವಷ್ಟೇ ವಿಷಯ ತಿಳಿದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಇಂಡಿಯಾ ಟುಡೇ ಜೊತೆ ಫೋನ್ ಮೂಲಕ ಮಾತನಾಡಿದ ರಾಜ್ಯ ಶಿಕ್ಷಣ ಕಾರ್ಯದರ್ಶಿ ರಾಜೇಶ್ ಶರ್ಮಾ (Rajesh Sharma) ಕೂಡ ಈ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಆದರೆ, ಶುಕ್ರವಾರದಂದು ಉರ್ದು ಶಾಲೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರದಿಂದ ಅಧಿಸೂಚನೆ ಇದೆ. ಕಳೆದ ವರ್ಷ ಈ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಉರ್ದು ಶಾಲೆಗಳೆಂದು ಗುರುತಿಸದೇ ಇರುವ ಈ ಭಾಗದ ಶಾಲೆಗಳಿಗೂ ಶುಕ್ರವಾರ ರಜೆ ನೀಡಲಾಗುತ್ತಿದೆ ಎಂಬುದು ಇಲ್ಲಿನ ಕೆಲ ಸ್ಥಳೀಯರ ಆರೋಪವಾಗಿದೆ.