ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಆರಂಭಿಸಿದ RSS ಮುಸ್ಲಿಂ ವಿಭಾಗ!

Published : Jan 22, 2021, 09:54 PM IST
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಆರಂಭಿಸಿದ RSS ಮುಸ್ಲಿಂ ವಿಭಾಗ!

ಸಾರಾಂಶ

ನಮ್ಮ ಆಚಾರ ವಿಚಾರಗಳು ಬೇರೆಯಾಗಿದೆ. ನಮ್ಮ ಧರ್ಮ ಬೇರೆಯಾಗಿದೆ. ಆದರೆ ನಮ್ಮ ಪೂರ್ವಜರು ಒಬ್ಬರೇ. ಇದು ರಾಮ ಮಂದಿ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಆರಂಭಿಸಿದ ಆರ್‌ಎಸ್ಎಸ್ ಮುಸ್ಲಿಂ ವಿಭಾಗದ ಮಾತು.

ಜಬಲ್‌ಪುರ್(ಜ.22); ರಾಷ್ಟ್ರೀಯ ಸ್ವಂಯ ಸೇವಕ ಸಂಘಟನೆ(RSS)ಗೆ ಸೇರಿದ ಮುಸ್ಲಿಂ ವಿಭಾಗ ಇದೀಗ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಆರಂಭಿಸಿದೆ. ಮದ್ಯಪ್ರದೇಶದ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ RSS ಮುಸ್ಲಿಂ ವಿಭಾಗ ರಾಮ ಮಂದಿರಕ್ಕಾಗಿ ದೇಣಿಗೆ ಸಂಗ್ರಹಿಸಲಿದೆ. ಇದಕ್ಕಾಗಿ ಹಲವು ತಂಡಗಳನ್ನು ರಚಿಸಲಾಗಿತ್ತು. ಮುಸ್ಲಿಂ ಮನೆ ಮನೆಗೆ ತೆರಳಿ ದೇಣಿಗೆ ಸಂಗ್ರಹ ಮಾಡಲಿದೆ.

ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ ಗೌತಮ್ ಗಂಭೀರ್!.

ನಾವೆಲ್ಲ ಒಂದೇ ಕುಟುಂಬದವರು. ನಾವು ಅರಬ್‌ನಿಂದ ಬಂದಿರಬಹುದು, ಅಥವಾ ರೋಮ್‌ನಿಂದ ಭಾರತಕ್ಕೆ ಬಂದವರಾಗಿರಬಹುದು. ಆದರೆ ನಮ್ಮ ಪೂರ್ವಜರೆಲ್ಲಾ ಒಂದೆ. ನಾವು ಭಾರತೀಯರು ಎಂದು RSS ಮುಸ್ಲಿಂ ವಿಭಾಗದ ನ್ಯಾಶನಲ್ ಕಾರ್ಡಿನೇಟರ್ ಎಸ್‌ಕೆ ಮುದ್ದೀನ್ ಹೇಳಿದ್ದಾರೆ. ಮುಸ್ಲಿಂ ಸಮುದಾಯದ ಹಲವರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ಸಿದ್ದರಿದ್ದಾರೆ ಎಂದಿದ್ದಾರೆ.

ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಜನವರಿ 14 ರಂದು ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ದೇಣಿಗೆ ಸಂಗ್ರಹ ಕಾರ್ಯಕ್ರಮ ಆರಂಭಿಸಿದೆ. ಫೆಬ್ರವರಿ ಕೊನೆಯ  ವಾರದ ವರೆಗೆ ನಡೆಯಿಲಿರುವ ಈ ದೇಣಿಗೆ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಗೂ ಕಾರ್ಯಕರ್ತರು ತೆರಳಿ ಹಣ ಸಂಗ್ರಹ ಮಾಡಲಿದ್ದಾರೆ. ಆರಂಭಿಕ 3 ದಿನದಲ್ಲಿ 100 ಕೋಟಿ ರೂಪಾಯಿ ದೇಣಿಗೆ ಹರಿದುಬಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ