ನಮ್ಮ ಅನೇಕ ಯೋಜನೆ ಯಶಸ್ಸಿಗೆ ಜನರೇ ಕಾರಣ: ದಶಕಗಳ ಸಾಧನೆ ಜನರ ಮುಂದಿಟ್ಟ ಪ್ರಧಾನಿ ಮೋದಿ

By Kannadaprabha News  |  First Published Mar 17, 2024, 7:51 AM IST

ದೇಶದ ಜನತೆಯ ಸಹಯೋಗವೇ ತಾವು 10 ವರ್ಷಗಳ ಕಾಲ ಪ್ರಧಾನಿಯಾಗಿ ಅಧಿಕಾರ ಪೂರ್ಣಗೊಳಿಸುವುದಕ್ಕೆ ಪ್ರಮುಖ ಕಾರಣ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆಯ ವಿಶ್ವಾಸ ಮತ್ತು 140 ಕೋಟಿ ಜನರ ಬೆಂಬಲ ತಮಗೆ ಸ್ಪೂರ್ತಿ ನೀಡುವುದರ ಜೊತೆಗೆ ಪ್ರೋತ್ಸಾಹವನ್ನೂ ನೀಡುತ್ತದೆ ಎಂದು ಹೇಳಿದ್ದಾರೆ.


ನವದೆಹಲಿ: ದೇಶದ ಜನತೆಯ ಸಹಯೋಗವೇ ತಾವು 10 ವರ್ಷಗಳ ಕಾಲ ಪ್ರಧಾನಿಯಾಗಿ ಅಧಿಕಾರ ಪೂರ್ಣಗೊಳಿಸುವುದಕ್ಕೆ ಪ್ರಮುಖ ಕಾರಣ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಜನತೆಯ ವಿಶ್ವಾಸ ಮತ್ತು 140 ಕೋಟಿ ಜನರ ಬೆಂಬಲ ತಮಗೆ ಸ್ಪೂರ್ತಿ ನೀಡುವುದರ ಜೊತೆಗೆ ಪ್ರೋತ್ಸಾಹವನ್ನೂ ನೀಡುತ್ತದೆ ಎಂದು ಹೇಳಿದ್ದಾರೆ. ನಿನ್ನೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮೊದಲು ‘ಮೇರಾ ಭಾರತ್‌ ಮೇರಾ ಪರಿವಾರ್‌’ ಎಂಬ ವಿಡಿಯೋ ಬಿಡುಗಡೆ ಮಾಡಿ  ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು., ಕಳೆದ 10 ವರ್ಷಗಳಲ್ಲಿ ಸರ್ಕಾರದ ಸಾಧನೆಗಳನ್ನು ಬಣ್ಣಿಸುವ ಕುರಿತಾದ  ಈ ವೀಡಿಯೋದಲ್ಲಿ ದೇಶದ ವಿವಿಧ ಭಾಗಗಳ, ವಿವಿಧ ವಲಯದ ಜನತೆ ಸರ್ಕಾರದ ಯೋಜನೆಗಳಿಂದ ಲಾಭ ಪಡೆದ ಜನರ ಅನುಭವ ಮತ್ತು ಅವರು ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿಯ ಅಧಿಕಾರ ಬಯಸುವ ಕುರಿತ ಅಭಿಮತವನ್ನು ಜನರ ಮುಂದಿಟ್ಟಿದ್ದಾರೆ.

ಜೊತೆಗೆ, ಜನರ ಜೀವನದಲ್ಲಿ ಕಂಡುಬಂದ ಬದಲಾವಣೆಯೇ ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಬಡವರು, ರೈತರು, ಯುವಸಮೂಹ ಮತ್ತು ಮಹಿಳೆಯರ ಜೀವನ ಗುಣಮಟ್ಟ ಸುಧಾರಿಸುವಲ್ಲಿ ಸರ್ಕಾರದ ದೃಢನಿಶ್ಚಯ ಇದನ್ನು ಸಾಧ್ಯವಾಗಿಸಿದೆ ಎಂದು ಹೇಳಿದರು.

Tap to resize

Latest Videos

ಬಡವರಿಗೆ ಗುಣಮಟ್ಟದ ಮನೆ, ವಿದ್ಯುತ್‌, ಕುಡಿಯುವ ನೀರು, ಅಡುಗೆ ಅನಿಲ, ಉಚಿತ ವೈದ್ಯಕೀಯ ಚಿಕಿತ್ಸೆಯ ಲಭ್ಯತೆ, ರೈತರಿಗೆ ಹಣಕಾಸಿನ ನೆರವು, ವಿವಿಧ ಯೋಜನೆಗಳ ಮೂಲಕ ಮಹಿಳೆಯರಿಗೆ ಹಣಕಾಸಿನ ನೆರವಿನ ಯೋಜನೆಗಳ ಯಶಸ್ಸು ಜನತೆ ಸರ್ಕಾರದ ಮೇಲೆ ಇಟ್ಟ ವಿಶ್ವಾಸದಿಂದಲೇ ಸಾಧ್ಯವಾಯಿತು. ನಮ್ಮ ದೇಶದ ಸಂಪ್ರದಾಯ ಮತ್ತು ಆಧುನಿಕತೆ ಎರಡನ್ನೂ ಒಂದರ ಜೊತೆಗೆ ಇನ್ನೊಂದನ್ನು ಇಟ್ಟುಕೊಂಡು ಮುಂದೆ ಸಾಗುತ್ತದೆ. ಕಳೆದೊಂದು ದಶಕದಲ್ಲಿ ದೇಶವು ಹೊಸ ಯುಗದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹಿಂದೆಂದೂ ಕಂಡುಕೇಳರಿಯದ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ ಪ್ರಧಾನಿ ಮೋದಿ, ಇದೇ ಅವಧಿಯಲ್ಲಿ ದೇಶದ ರಾಷ್ಟ್ರೀಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಕೆಲಸವೂ ಆಗಿದೆ ಎಂದರು.

Watch Video ನಾನು ಮೋದಿ ಪರಿವಾರ ಹಾಡು ಲಾಂಚ್, 2019ರ ಇದೇ ದಿನ ಚೌಕಿದಾರ್ ಕ್ಯಾಂಪೇನ್!

2024ರ ಲೋಕಸಭಾ ಚುನಾವಣೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಕರ್ನಾಟಕದಲ್ಲಿ ಎಪ್ರಿಲ್ 26 ಹಾಗೂ ಮೇ7 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​‌ನಲ್ಲಿ ಮೊದಲ ಹಂತದಲ್ಲಿ ಮತದಾನವಾಗಲಿದೆ. 2ನೇ ಹಂತದ ಚುನಾವಣೆ ಮೇ 7 ರಂದು ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌ ಕ್ಷೇತ್ರಗಳಲ್ಲಿ ನಡೆಯಲಿದೆ.

ಚುನಾವಣೆ ಘೋಷಣೆ ಬೆನ್ನಲ್ಲೇ Phir Ek Baar Modi Sarkar ಎಂದು ಟ್ವೀಟ್‌ ಮಾಡಿದ ಪ್ರಧಾನಿ ಮೋದಿ!

click me!