
ಪುದುಚೇರಿ(ಮೇ.08): ಎಐಎನ್‌ಆರ್‌ಸಿ ಸ್ಥಾಪಕ ಎನ್. ರಂಗಸಾಮಿ ಅವರು ಶುಕ್ರವಾರ ಪುದುಚೇರಿಯ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಬಿಜೆಪಿಯ ಮೈತ್ರಿಯೊಂದಿಗೆ ಪುದುಚೇರಿಯಲ್ಲಿ ಎಐಎನ್‌ಆರ್‌ಸಿ ಸರ್ಕಾರ ರಚಿಸಿದೆ.
ರಾಜನಿವಾಸದಲ್ಲಿ ಶುಕ್ರವಾರ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇಳೆ ರಂಗಸಾಮಿ ಅವರು ಏಕಾಂಗಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲೇ ಎಐಎನ್‌ಆರ್‌ಸಿ ಹಾಗೂ ಬಿಜೆಪಿಯ ಸದಸ್ಯರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ, ಕರ್ನಾಟಕ ಬಳಿಕ ದಕ್ಷಿಣದ 2ನೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಂತಾಗಿದೆ.
ಮೃದು ಭಾಷಿ:
ಸರಳ ಹಾಗೂ ಮೃಧು ಭಾಷೆಯ 71 ವರ್ಷ ವಯಸ್ಸಿನ ರಂಗಸಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆಯೂ ದ್ವಿಚಕ್ರ ವಾಹನದಲ್ಲೇ ಓಡಾಡುವುದಕ್ಕೆ ಹೆಸರಾಗಿದ್ದಾರೆ. 1990ರಲ್ಲಿ ತಟ್ಟಂಚಾವಡಿ ವಿಧಾನಸಭಾ ಕ್ಷೇತ್ರದಿಂದ ರಂಗಸಾಮಿ ಮೊದಲ ಬಾರಿ ವಿಧಾನಸಭೆಗೆ ಆಯ್ಕೆ ಆಗಿದ್ದರು. 2001ರಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಅವರು ಮೊದಲಬಾರಿ ಮುಖ್ಯಮಂತ್ರಿಯಾದರು. 2011ರಲ್ಲಿ ಕಾಂಗ್ರೆಸ್ ಅನ್ನು ತೊರೆದು ಆಲ್ ಇಂಡಿಯಾ ಎನ್‌ಆರ್ ಕಾಂಗ್ರೆಸ್ ಅನ್ನು ಸ್ಥಾಪಿಸಿದರು. ಎಐಎಡಿಎಂಕೆಯ ಜೊತೆಗೂಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಮೂರನೇ ಅವಧಿಗೆ ಮುಖ್ಯಮಂತ್ರಿಯಾದರು. 2016ರಲ್ಲಿ ಎಐಎನ್‌ಆರ್‌ಸಿ ಅಧಿಕಾರಕ್ಕೆ ಏರಲು ವಿಫಲವಾಗಿದ್ದರಿಂದ ವಿಪಕ್ಷನಾಯಕರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ