
ಇಂದು ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನ (PM Modis 75th Birthday). ಈ ದಿನದಿಂದ ದೇಶ ಮಾತ್ರವಲ್ಲದೇ ವಿದೇಶಗಳಲ್ಲಿನ ಗಣ್ಯರು ಕೂಡ ಪ್ರಧಾನಿ ನರೇಂದ್ರ ಅವರಿಗೆ ವಿಷ್ ಮಾಡಿದ್ದಾರೆ. ವಿಶ್ವ ಕಂಡ ಅಪರೂಪದ ಪ್ರಧಾನಿ ಎಂದು ಇದಾಗಲೇ ಹಲವಾರು ದೇಶಗಳ ಗಣ್ಯರು ಪ್ರಧಾನಿಯನ್ನು ಹಾಡಿ ಹೊಗಳಿದ್ದಾರೆ. ಭಾರತದ ಆರ್ಥಿಕತೆಯನ್ನು ಕೇವಲ ಹತ್ತು ವರ್ಷಗಳಲ್ಲಿ ಅತ್ಯಂತ ಬಲಶಾಲಿಯನ್ನಾಗಿಸಿದ, ಅರ್ಥ ವ್ಯವಸ್ಥೆಯನ್ನು ನಾಲ್ಕನೆಯ ಸ್ಥಾನಕ್ಕೆ ತಂದು ನಿಲ್ಲಿಸಿದ ಅಗ್ರಮಾನ್ಯ ನಾಯಕ ಎಂದು ಹಲವರು ಹುಟ್ಟುಹಬ್ಬದಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು "ನಿಮ್ಮ ಅಸಾಧಾರಣ ನಾಯಕತ್ವದ ಮೂಲಕ ಕಠಿಣ ಪರಿಶ್ರಮದ ಪರಾಕಾಷ್ಠೆಯನ್ನು ಪ್ರದರ್ಶಿಸುವ ಮೂಲಕ, ನೀವು ದೇಶದಲ್ಲಿ ಉತ್ತಮ ಗುರಿಗಳನ್ನು ಸಾಧಿಸುವ ಸಂಸ್ಕೃತಿಯನ್ನು ಹುಟ್ಟುಹಾಕಿದ್ದೀರಿ. ಇಂದು, ಜಾಗತಿಕ ಸಮುದಾಯವು ನಿಮ್ಮ ಮಾರ್ಗದರ್ಶನದಲ್ಲಿ ತನ್ನ ನಂಬಿಕೆಯನ್ನು ವ್ಯಕ್ತಪಡಿಸುತ್ತಿದೆ. ನೀವು ಎಂದೆಂದಿಗೂ ಆರೋಗ್ಯವಾಗಿ ಮತ್ತು ಸಂತೋಷದಿಂದ ಇರಬೇಕೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ, ಮತ್ತು ನಿಮ್ಮ ಅನನ್ಯ ನಾಯಕತ್ವದಿಂದ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಿರಿ" ಎಂದು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ: PM Modi bday: ಕೊನೆಗೂ ಟ್ರಂಪ್ ಫೋನ್ಗೆ ಸಿಕ್ಕ ಮೋದಿ: 'ಗೆಳೆಯ, ಓ ಗೆಳೆಯ' ಎಂದು ವಿಷ್ ಮಾಡಿದ 'ದೊಡ್ಡಣ್ಣ'!
ಅದೇ ರೀತಿ ಬಿಜೆಪಿ ಗಣ್ಯರು ಸೇರಿದಂತೆ ವಿವಿಧ ಪಕ್ಷಗಳ ಗಣ್ಯರು ಕೂಡ ವಿಶೇಷ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, "ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಮುಂಬರುವ ವರ್ಷವು ಉತ್ತಮ ಆರೋಗ್ಯ, ಸಂತೋಷ ಮತ್ತು ರಾಷ್ಟ್ರ ಸೇವೆಯಲ್ಲಿ ನಿರಂತರ ಯಶಸ್ಸಿನಿಂದ ತುಂಬಿರಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ಮೋದಿ ಅವರು, "ನಿಮಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ದೀರ್ಘಾಯುಷ್ಯ ಸಿಗಲಿ. ನಿಮ್ಮ ಸಮರ್ಥ ಮಾರ್ಗದರ್ಶನದಲ್ಲಿ ನಮ್ಮ ರಾಷ್ಟ್ರದ ನಿರಂತರ ಪ್ರಗತಿಯನ್ನು ನಾನು ಬಯಸುತ್ತೇನೆ ಮತ್ತು ಮುಂಬರುವ ವರ್ಷಗಳಲ್ಲಿ ಅದರ ಹೆಚ್ಚಿನ ಯೋಗಕ್ಷೇಮ ಮತ್ತು ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇನ್ನು ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಷ್ ಮಾಡಿದ್ದಾರೆ ((Rahul Gandhi and Mallikarjun Kharge wish to PM Modi)). "ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ" ಎಂದು ಮಲ್ಲಿಕಾರ್ಜುನ ಖರ್ಗೆ ಅವರು X ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಕೂಡ ಶುಭಾಶಯ ಕೋರಿದ್ದು, X ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಮತ್ತು ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ವಿಷ್ ಮಾಡಿರುವ ಸುದ್ದಿ ಸದ್ಯ ಬಂದಿಲ್ಲ.
ಇದನ್ನೂ ಓದಿ: Narendra Modi ರಾಜಕೀಯ ಸನ್ಯಾಸ ? ಮುಂದಿನ ಪ್ರಧಾನಿ ಯಾರು? ದೇಶಕ್ಕೇನಾಗಲಿದೆ? ಈ ಭವಿಷ್ಯವಾಣಿ ಕೇಳಿ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ