
ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಾದ್ಯಂತ ತೈಲ ಹಾಗೂ ಅನಿಲಕ್ಕೆ ತತ್ವಾರ ಎದುರಾಗಿರುವ ನಡುವೆಯೇ, ಭಾರತದಲ್ಲಿ ತೈಲ, ಅನಿಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ನಿರಂತರ ಪೂರೈಕೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹಿರಿಯ ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಈ ವೇಳೆ ತಡೆರಹಿತವಾಗಿ ಎಲ್‌ಪಿಜಿ ಪೂರೈಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯತಂತ್ರವನ್ನು ರೂಪಿಸಲಾಗಿದೆ.ದೇಶದಲ್ಲಿ ಯಾವುದೇ ತಡೆಯಿಲ್ಲದೆ ಇಂಧನ, ಎಲ್‌ಪಿಜಿ ಹಾಗೂ ಇತರ ಸರಕುಗಳನ್ನು ಒದಗಿಸುವುದನ್ನೇ ಕೇಂದ್ರ ವಿಷಯವಾಗಿಟ್ಟುಕೊಂಡು ಸಭೆ ನಡೆಸಲಾಗಿದೆ.
ಕಚ್ಚಾತೈಲ, ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನ, ವಿದ್ಯುತ್ ಹಾಗೂ ಗೊಬ್ಬರ ವಲಯಗಳಲ್ಲಿನ ಸದ್ಯದ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಮಾಹಿತಿ ಪಡೆದಿದ್ದಾರೆ. ಇವುಗಳ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಂಬಂಧಿತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಬಂದರು ಮತ್ತು ಸಾಗಣೆ ಸಚಿವ ಸರ್ಬಾನಂದ ಸೋನೋವಾಲ್, ಇಂಧನ ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು, ಮತ್ತು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪ್ರಧಾನಿಯವರ ಇಬ್ಬರು ಪ್ರಧಾನ ಕಾರ್ಯದರ್ಶಿಗಳಾದ ಪಿ. ಕೆ. ಮಿಶ್ರಾ ಮತ್ತು ಶಕ್ತಿಕಾಂತ ದಾಸ್ ಸಭೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ