
ಜೈಪುರ: ಇತ್ತೀಚೆಗೆ ಸ್ತ್ರೀಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುತ್ತಿರುವ ಎಚ್‌ಪಿವಿ (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜಸ್ಥಾನದ ಅಜ್ಮೇರ್‌ನಲ್ಲಿ ಚಾಲನೆ ನೀಡಿದರು.
14 ವರ್ಷ ಹಾಗೂ ಅದಕ್ಕೆ ಮೇಲ್ಪಟ್ಟ ಹಲವು ಮಹಿಳೆಯರು ಈ ಲಸಿಕೆಯನ್ನು ಹಾಕುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಫಲಾನುಭವಿಗಳ ಜತೆ ಪ್ರಧಾನಿ ಮೋದಿ ಕೆಲಕಾಲ ಮಾತುಕತೆಯನ್ನೂ ನಡೆಸಿದರು.
ವಿಶ್ವಾದ್ಯಂತ ಪ್ರಯೋಗಕ್ಕೆ ಒಳಪಟ್ಟು ಉತ್ತಮ ಫಲಿತಾಂಶ ನೀಡಿರುವ ಈ ಲಸಿಕೆಯು, ಟೈಪ್ 16, ಟೈಪ್ 18 ಸೇರಿದಂತೆ 4 ವಿಧದ ಎಚ್‌ಪಿವಿಗಳಿಂದ ಸ್ತ್ರೀಯರಿಗೆ ರಕ್ಷಣೆ ನೀಡುವ ಮೂಲಕ ಗರ್ಭಕಂಠದ ಕ್ಯಾನ್ಸರ್‌ಅನ್ನು ತಡೆಗಟ್ಟುತ್ತದೆ. ಇದರ ಒಂದೇ ಒಂದು ಡೋಸ್ ಪರಿಣಾಮಕಾರಿಯಾಗಿ ಈ ಕೆಲಸ ಮಾಡಲಿದೆ.
ಇನ್ನು ಮುಂದೆ ಎಚ್‌ಪಿವಿ ಲಸಿಕೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರ, ಸಮುದಾಯ ಆರೋಗ್ಯ ಕೇಂದ್ರ, ಸರ್ಕಾರಿ ವೈದ್ಯಕೀಯ ಕಾಲೇಜು, ಉಪ-ಜಿಲ್ಲಾ ಮತ್ತು ಜಿಲ್ಲಾ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಪಡೆಯಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ