ಜೂನ್ 8ರ ಬದಲಾಗಿ ಜೂನ್ 9ರಂದು ಪದಗ್ರಹಣ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡುವ ಉದ್ದೇಶದಿಂದ ಸಮಯದಲ್ಲಿ ಬದಲಾವಣೆಯಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ನವದೆಹಲಿ: ನರೇಂದ್ರ ಮೋದಿಯವರ ಪದಗ್ರಹಣ (Narendr Modi Oath Taking Ceremony) ಸಮಯದಲ್ಲಿ ಬದಲಾವಣೆಯಾಗಿದೆ ಎಂದು ತಿಳಿದು ಬಂದಿದೆ. ಮೊದಲು ಜೂನ್ 8ರ ರಾತ್ರಿ 8 ಗಂಟೆಗೆ ಸಮಯ ನಿಗಧಿಯಾಗಿತ್ತು. ಇದೀಗ ಪದಗ್ರಹಣ ಕಾರ್ಯಕ್ರಮ ಒಂದು ದಿನಕ್ಕೆ ಮುಂದೂಡಿಕೆಯಾಗಿದೆ ಎನ್ನಲಾಗಿದೆ. ಜೂನ್ 8ರ ಬದಲಾಗಿ ಜೂನ್ 9ರಂದು ಪದಗ್ರಹಣ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡುವ ಉದ್ದೇಶದಿಂದ ಸಮಯದಲ್ಲಿ ಬದಲಾವಣೆಯಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈಗಾಗಲೇ ನರೇಂದ್ರ ಮೋದಿಯವರೇ ಸ್ವತಃ ಕರೆ ಮಾಡಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸಿನಾ (Bangladesh premier Sheikh Hasina) ಮತ್ತು ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರೆಂ ಸಿಂಘೆ (Sri Lankan President Ranil Wickremesinghe) ಅವರನ್ನು ಆಹ್ವಾನಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ನರೇಂದ್ರ ಮೋದಿಯವರ ಜೊತೆಯಲ್ಲಿ ಕೆಲ ನಾಯಕರು ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಎನ್‌ಡಿಎಗೆ ಬೆಂಬಲ ಘೋಷಿಸಿರುವ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ. ಈ ಬಾರಿ ನರೇಂದ್ರ ಮೋದಿ ಸಂಪುಟದಲ್ಲಿ ಮಿತ್ರಪಕ್ಷಗಳ ಪ್ರಾಬಲ್ಯ ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ.
undefined
2014 ಮತ್ತು 20196ರಲ್ಲಿ ಯಾರೆಲ್ಲಾ ಬಂದಿದ್ರು?
2019ರಲ್ಲಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ BIMSTEC ಪ್ರಧಾನಿಗಳನ್ನು ಆಹ್ವಾನಿಸಿತ್ತು. ಬಾಂಗ್ಲಾದೇಶ, ಭೂತಾನ್, ಭಾರತ, ಮಯನ್ಮಾರ್, ನೇಪಾಳ, ಶ್ರೀಲಾಂಕ ಮತ್ತು ಥೈಲ್ಯಾಂಡ್ ದೇಶಗಳು BIMSTEC ಸದಸ್ಯ ರಾಷ್ಟ್ರಗಳಾಗಿವೆ. ಈ ಎಲ್ಲಾ ನಾಯಕರು ಸೇರಿದಂತೆ 8 ಸಾವಿರ ಅತಿಥಿಗಳನ್ನು ಆಹ್ವಾನಿಸಲಾಗಿತ್ತು. 2014ರಲ್ಲಿ ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಾಗಿತ್ತು. ಅಂದಿನ ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಷರೀಫ್ ಸಹ ಪದಗ್ರಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶುಕ್ರವಾರ ಎನ್‌ಡಿಎ ಮೈತ್ರಿಕೂಟದ 15 ಪಕ್ಷಗಳ ನಾಯಕರ ಜೊತೆ ಸಭೆ ನಡೆದಿತ್ತು. ಸಭೆಯಲ್ಲಿ ನರೇಂದ್ರ ಮೋದಿಯವರನ್ನು ತಮ್ಮ ಸಂಸದೀಯ ನಾಯಕ ಎಂದು ಘೋಷಣೆ ಮಾಡಲಾಗಿತ್ತು. ಇತ್ತ ಐಎನ್‌ಡಿಐಎ ಕೂಟ ಸಭೆ ನಡೆಸಿ, ತಾವು ಸರ್ಕಾರ ರಚನೆಯ ಪ್ರಯತ್ನಕ್ಕೆ ಮುಂದಾಗಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡೋದಾಗಿ ಘೋಷಣೆ ಮಾಡಿಕೊಂಡಿದೆ.