ಆರ್ಎಸ್ಎಸ್ ಪ್ರಧಾನ ಕಚೇರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ವಿಶೇಷ ಅಂದರೆ ಪ್ರಧಾನಿಯೊಬ್ಬರು ಸಂಘದ ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಮುಂಬೈ(ಮಾ.30): ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರೆಸ್ಸೆಸ್) ವಿಜಯದಶಮಿ ದಿನವಾದ ಭಾನುವಾರ 100 ಪ್ರಧಾನಿ ನರೇಂದ್ರ ಮೋದಿ ಭಾನುವಾರ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಮುಖ್ಯ ಕಚೇರಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿಯೊಬ್ಬರು ಸಂಘದ ಕಚೇರಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಈ ವೇಳೆ ಅಲ್ಲಿನ ಸ್ಮೃತಿ ಮಂದಿರದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡಗೇವಾರ್ ಹಾಗೂ 2ನೇ ಸರಸಂಘಚಾಲಕ ಗುರೂಜಿ ಗೋಳವಲಕರ್ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸಲಿದ್ದಾರೆ. ಅಂದೇ ಆರ್‌ಎಸ್‌ಎಸ್‌ನ ಬಹುಮುಖ್ಯವಾದ ಯುಗಾದಿ ಸಂಭ್ರಮ ನಡೆಯಲಿದ್ದು, ಅದರಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ತುಂಬಾ ಸ್ಮಾರ್ಟ್ ವ್ಯಕ್ತಿ, ನನ್ನ ಆತ್ಮೀಯ ಗೆಳೆಯ ಎಂದ ಡೋನಾಲ್ಡ್ ಟ್ರಂಪ್
ಆ ಬಳಿಕ ಪ್ರಧಾನಿ, 1956ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ದೀಕ್ಷೆ ಸ್ವೀಕರಿಸಿದ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ನವೀನ ವಿಸ್ತೃತ ಕಟ್ಟಡವಾದ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಸಂಘಟ ಕಚೇರಿಗೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಿ
ಆರ್‌ಎಸ್ಎಸ್ ಸಂಘ ಕಚೇರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು. 2007ರಲ್ಲಿ ಆರ್‌ಎಸ್ಎಸ್ ಪ್ರಮುಖ ಕಾರ್ಯಕ್ರಮಕ್ಕೆ ಅಟಲ್ ಬಿಹಾರಿ ವಾಜಪೇಯಿ ಭೇಟಿ ನೀಡಿದ್ದರು. ಆದರೆ ಈ ವೇಳೆ ವಾಜಪೇಯಿ ಪ್ರಧಾನಿ ಸ್ಥಾನದಿಂದ ಕೆಳಗಿಳಿದಿದ್ದರು. ಇನ್ನು ಪ್ರಧಾನಿ ನರೇಂದ್ರ ಮೋದಿ ಕೊನೆಯ ಬಾರಿಗೆ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಕೊನೆಯ ಬಾರಿಗೆ 2013ರಲ್ಲಿ ಭೇಟಿ ನೀಡಿದ್ದರು. ಈ ವೇಳೆ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.
ಹಿಂದೂ ಸಮಾಜ ಸಂಘಟನೆ ಗುರಿ; RSS
ಹಿಂದೂ ಸಮಾಜ ಒಂದು ಜವಾಬ್ದಾರಿಯುತ ಸಮುದಾಯ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಸಮಾಜ ಅದು. ಹೀಗಾಗಿಯೇ ಈ ಸಮಾಜವನ್ನು ಸಂಘಟಿಸಲು ಆರೆಸ್ಸೆಸ್ ಬಯಸುತ್ತದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಮೋಹನ ಭಾಗವತ್ ಹೇಳಿದರು. ಆರೆಸ್ಸೆಸ್ ಕೇವಲ ಹಿಂದೂ ಸಮುದಾಯದ ಮೇಲೆ ಏಕೆ ಗಮನ ಕೇಂದ್ರೀಕರಿಸುತ್ತದೆ ಎಂದು ಜನ ಕೇಳುತ್ತಾರೆ. ಅವರಿಗೆ ನನ್ನ ಉತ್ತರ ಒಂದೇ. ಹಿಂದೂ ಸಮಾಜವು ದೇಶದ ಜವಾಬ್ದಾರಿಯುತ ಸಮಾಜ. ಅದಕ್ಕೆಂದೇ ಆ ಅಮುದಾಯಕ್ಕೆ ಸಂಘಟನೆಯ ಅಗತ್ಯವಿದೆ ಎಂದು ನಾವು ಭಾವಿಸುತ್ತೇವೆ ಹಾಗೂ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ’ ಎಂದರು. ‘ಭಾರತ ವರ್ಷ (ಭಾರತ ದೇಶ) ಎಂಬುದು ಕೇವಲ ಭೌಗೋಳಿಕ ಅಂಶವಲ್ಲ. ಅದು ಹಿಗ್ಗಬಹುದು ಅಥವಾ ಕುಗ್ಗಬಹುದು. ಅನೇಕ ದೇಶಗಳು ಇತರರೊಂದಿಗೆ ಬಾಳಲು ಸಾಧ್ಯವಿಲ್ಲ ಎಂದು ತಮ್ಮದೇ ಧರ್ಮಾಧರಿತ ದೇಶ ಸ್ಥಾಪಿಸಿಕೊಂಡಿವೆ. ಆದರೆ ಹಿಂದೂ ಸಮಾಜವು ವಿಶ್ದ ವೈವಿಧ್ಯತೆಯನ್ನೇ ಮೈಗೂಡಿಸಿಕೊಂಡಿದೆ. ನಾವು ‘ವಿವಿಧತೆಯಲ್ಲಿ ಏಕತೆ’ ಎನ್ನುತ್ತೇವೆ. ಆದರೆ ಹಿಂದೂ ಸಮಾಜ ‘ಏಕತೆಯಲ್ಲೇ ವೈವಿಧ್ಯವಿದೆ’ ಎಂದು ಹಿಂದೂ ಸಮಾಜ ಅರ್ಥ ಮಾಡಿಕೊಳ್ಳುತ್ತದೆ’ ಎಂದು ಬಣ್ಣಿಸಿದರು.
ಯುಗಾದಿ ಹಬ್ಬಕ್ಕೆ ಮೋದಿ ಸರ್ಕಾರದ ಬಂಪರ್ ಗಿಫ್ಟ್, ಡಿಎ ಶೇ.2ರಷ್ಟು ಏರಿಕೆ