ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತತ 2ನೇ ಸುತ್ತಿನ ವಿಚಾರಣೆ ಎದುರಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇದೀಗ 3ನೇ ಸುತ್ತಿನ ವಿಚಾರಣೆಗೆ ಹಾಜರಾಗಬೇಕಿದೆ. ಇಂದಿನ ವಿಚಾರಣೆ ಬಳಿಕ ಇಡಿ ಮತ್ತೆ ಸಮನ್ಸ್ ನೀಡಿದೆ.
ನವದೆಹಲಿ(ಜು.26): ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಕಾಂಗ್ರೆಸ್‌ಗೆ ಕಗ್ಗಂಟಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ಬಳಿಕ ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸರದಿ. ಇಂದು(ಜು.26) ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ ಸತತ 6 ಗಂಟೆ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ಮುಗಿಸಿದ ಬೆನ್ನಲ್ಲೇ ಇಡಿ ಅಧಿಕಾರಿಗಳು ನಾಳೆ(ಜು.27) ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ. ಸಂಜೆ 7 ಗಂಟೆಗೆ ಇಡಿ ವಿಚಾರಣೆ ಅಂತ್ಯಗೊಂಡಿದೆ. ಇತ್ತ ಕಾಂಗ್ರೆಸ್ ಭಾರಿ ಪ್ರತಿಭಟನೆ ನಡೆಸಿತ್ತು. ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರವನ್ನು ದುರ್ಬಳೆಕೆ ಮಾಡಿಕೊಳ್ಳುತ್ತಿದೆ. ತನ್ನ ಭ್ರಷ್ಟಾಚಾರ, ಅಸಮರ್ಪಕ ಆಡಳಿತ ಮುಚ್ಚಿಹಾಕು ಕಾಂಗ್ರೆಸ್ ನಾಯಕರ ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಬಾರಿ ಪ್ರತಿಭಟನೆ ನಡೆಸಿದೆ. ಈ ವೇಳೆ ಪಕ್ಷದ ಮುಖಂಡ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 75ಕ್ಕೂ ಹೆಚ್ಚು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ಸಿಗರು ವಿಜಯ ಚೌಕ್‌ನಲ್ಲಿ ನೆರೆದು ರಾಷ್ಟ್ರಪತಿ ಭವನಕ್ಕೆ ಸಾಗುವ ಯೋಜನೆ ಹಾಕಿಕೊಂಡಿದ್ದರು. ಕೇಂದ್ರೀಯ ತನಿಖಾ ಸಂಸ್ಥೆಗಳ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ರಾಷ್ಟ್ರಪತಿಗೆ ದೂರುವ ಉದ್ದೇಶ ಅವರದ್ದಾಗಿತ್ತು. ಆದರೆ ಅವರನ್ನು ಹಾಗೂ ಇತರ ಕಾಂಗ್ರೆಸ್ಸಿಗರನ್ನು ವಶಕ್ಕೆ ಪಡೆದ ಪೊಲೀಸರು ಪೊಲೀಸ್ ಬಸ್ ಹತ್ತಿಸಿಕೊಂಡು ಹೋದರು. ಬಳಿಕ ಅವರನ್ನೆಲ್ಲ ಕಿಂಗ್‌್ಸ$ ವೇ ಕ್ಯಾಂಪ್ ಪ್ರದೇಶದ ‘ಉತ್ಸವ ಸದನ’ದಲ್ಲಿ ಇರಿಸಲಾಗಿತ್ತು.
'ಸೋನಿಯಾ ನಮ್ಮ ತಾಯಿ, ರಾಹುಲ್ ನಮ್ಮ ಸಹೋದರ: ಗಾಂಧಿ ಕುಟುಂಬದ ಗುಲಾಮರು ಹೌದು'
ಜು.25ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸೂಚಿಸಿತ್ತು. ಬಳಿಕ ದಿನಾಂಕವನ್ನು ಜು.26ಕ್ಕೆ ಬದಲಾಯಿಸಿತ್ತು. ಆದರೆ ವಿಚಾರಣೆಯನ್ನು ಯಾವ ಕಾರಣಕ್ಕಾಗಿ ಮುಂದೂಡಲಾಯಿತು ಎಂದು ಇ.ಡಿ. ತಿಳಿಸಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ(ಜುಲೈ21) ಸೋನಿಯಾ ಅವರನ್ನು 2 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸುಮಾರು 50 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.
ಮೋದಿ VS ಸೋನಿಯಾ ವಿಚಾರಣೆ: ವಿಚಾರಣೆಗೆ ಮೋದಿ ಸ್ಪಂದಿಸಿದ್ದು ಹೇಗೆ! ಕೈ ಪಾಳಯದ ಪ್ರತಿರೋಧವೇಕೆ?
ಈ ಹಿಂದೆ ಇದೇ ಪ್ರಕರಣದಲ್ಲಿ ರಾಹುಲ್ ವಿಚಾರಣೆ ಮಾಡಿದ್ದ ಸಹಾಯಕ ನಿರ್ದೇಶಕ ದರ್ಜೆಯ ಅಧಿಕಾರಿಗಳೇ ಸೋನಿಯಾರನ್ನು ವಿಚಾರಣೆಗೆ ಗುರಿಪಡಿಸಿದರು. ಸೋನಿಯಾ ಅವರ ಆರೋಗ್ಯ ಸಮಸ್ಯೆ ಗಮನದಲ್ಲಿಕೊಂಡು ಕೋವಿಡ್ ನೆಗೆಟಿವ್ ವರದಿ ಹೊಂದಿರುವ ಅಧಿಕಾರಿಗಳನ್ನು ಮಾತ್ರವೇ ವಿಚಾರಣಾ ಕೊಠಡಿಗೆ ಬಿಡಲಾಗಿತ್ತು. ಜೊತೆಗೆ ವಿಚಾರಣೆಗೆ ಕಾಂಗ್ರೆಸ್ ನಾಯಕರ ಆಕ್ಷೇಪ ಹಿನ್ನೆಲೆಯಲ್ಲಿ ಇಡಿ ಸುತ್ತಲೂ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಬಿಗಿಬಂದೋಬಸ್‌್ತ ಮಾಡಿ, ಯಾರೂ ಒಳಗೆ ಪ್ರವೇಶ ಮಾಡದಂತೆ ನೋಡಿಕೊಳ್ಳಲಾಯಿತು. ಹೀಗೆ ಭದ್ರತೆ, ಸುರಕ್ಷತಾ ಕ್ರಮಗಳ ನಡುವೆಯೇ ಸೋನಿಯಾರನ್ನು ಅಧಿಕಾರಿಗಳು ವಿಚಾರಣೆ ನಡೆಸಿದರು.