
ನವದೆಹಲಿ(ಜ.11): ಭಾರತೀಯ ನೌಕಾಪಡೆಯ ತೇಜಸ್ ಲಘು ಯುದ್ಧ ವಿಮಾನ ಹೊಸ ಇತಿಹಾಸ ನಿರ್ಮಿಸಿದ್ದು, ಇದೇ ಮೊದಲ ಬಾರಿಗೆ ವಿಕ್ರಮಾದಿತ್ಯ ನೌಕೆ ಮೇಲೆ ಯಶಸ್ವಿಯಾಗಿ ಇಳಿದಿದೆ.
ಡೆಕ್ ಆಧಾರಿತ ಫೈಟರ್ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸಾಧನೆ ಮಾಡಲಾಗಿದ್ದು, ಇದು ಭಾರತೀಯ ನೌಕಾಸೇನೆಯ ಇತಿಹಾಸದಲ್ಲಿ ಮಹತ್ವದ ಸಾಧನೆ ಎನ್ನಲಾಗಿದೆ.
ಮುಂದಿನ ದಿನಗಳಲ್ಲಿ ಡೆಕ್ ಆಧಾರಿತ ಅವಳಿ ಎಂಜಿನ್ ಫೈಟರ್‌ಗಳನ್ನು ಅಭಿವೃದ್ಧಿಪಡಿಸಲು ಈ ಸಾಧನೆ ಮುನ್ನುಡಿ ಬರೆದಂತಾಗಿದೆ.
ಈ ಕುರಿತು ಮಾಹಿತಿ ನೀಡಿರುವ ನೌಕಾಪಡೆಯ ವಕ್ತಾರ, ವಿಕ್ರಮಾದಿತ್ಯ ನೌಕೆ ಮೇಲೆ ತೇಜಸ್ ಲಘು ಯುದ್ಧ ವಿಮಾನ ಯಶಸ್ವಿಯಾಗಿ ಇಳಿದಿದೆ ಎಂದು ತಿಳಿಸಿದ್ದಾರೆ.
ಸಂಪೂರ್ಣವಾಗಿ ದೇಶೀಯ ನಿರ್ಮಿತವಾಗಿರುವ ತೇಜಸ್ ಲಘು ಯುದ್ಧ ವಿಮಾನ, ಇತ್ತೀಚಿಗಷ್ಟೇ ಯುದ್ಧ ಹಡಗುಗಳ ಮೇಲೆ ಯಶಶ್ವಿಯಾಗಿ ಇಳಿಯುವ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ಪೂರೈಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ