ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಿಧು ನೇಮಕ!

Published : Jul 19, 2021, 08:37 AM IST
ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಿಧು ನೇಮಕ!

ಸಾರಾಂಶ

* ಪಕ್ಷದಲ್ಲಿ ಉನ್ನತ ಹುದ್ದೆಗಾಗಿ ಬಂಡಾಯ ಬಾವುಟ ಹಾರಿಸಿದ್ದ ಸಿಧು * ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಿಧು ನೇಮಕ * ಜೊತೆಗೆ ಇತರೆ ನಾಲ್ವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ

ನವದೆಹಲಿ(ಜು.19): ಪಕ್ಷದಲ್ಲಿ ಉನ್ನತ ಹುದ್ದೆಗಾಗಿ ಬಂಡಾಯ ಬಾವುಟ ಹಾರಿಸಿದ್ದ ಮಾಜಿ ಕ್ರಿಕೆಟಿಗನ ಒತ್ತಡಕ್ಕೆ ಮಣಿದಿರುವ ಕಾಂಗ್ರೆಸ್‌, ನವಜೋತ್‌ಸಿಂಗ್‌ ಸಿಧು ಅವರನ್ನು ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಘಟಕದ ನೂತನ ಅಧ್ಯಕ್ಷರಾಗಿ ನೇಮಿಸಿದೆ. ಜೊತೆಗೆ ಇತರೆ ನಾಲ್ವರನ್ನು ಕಾರ್ಯಾಧ್ಯಕ್ಷರಾಗಿ ನೇಮಿಸಿ ಭಾನುವಾರ ಆದೇಶ ಹೊರಡಿಸಿದೆ.

ಇದರೊಂದಿಗೆ ಅಧ್ಯಕ್ಷ ಹುದ್ದೆ ಸಿಗದಿದ್ದಲ್ಲಿ ಆಮ್‌ಆದ್ಮಿ ಪಕ್ಷ ಸೇರಲು ಸಜ್ಜಾಗಿದ್ದ ಸಿಧು ಅವರನ್ನ ತನ್ನಲ್ಲೇ ಉಳಿಸಿಕೊಳ್ಳುವ ಯತ್ನವನ್ನು ಕಾಂಗ್ರೆಸ್‌ ಮಾಡಿದೆ. ಸಿಎಂ ಅಮರೀಂದರ್‌ ಜೊತೆ ಬಹಿರಂಗವಾಗಿಯೇ ಸಂಘರ್ಷಕ್ಕೆ ಇಳಿದಿದ್ದ ಡಿಸಿಎಂ ಇಲ್ಲವೇ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಸಿಧುಗೆ ಈ ಹುದ್ದೆಗಳನ್ನೂ ನೀಡಲು ಹಲವು ಹಳೆಯ ಮತ್ತು ಹಿರಿಯ ಕಾಂಗ್ರೆಸ್ಸಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಹೊರತಾಗಿಯೂ ಚತುರ ಮಾತುಕಾರನಿಗೆ ಮಣೆ ಹಾಕುವ ಮೂಲಕ, ಮುಂದಿನ ಚುನಾವಣೆಯಲ್ಲಿ ಅವರನ್ನು ತನ್ನ ಟ್ರಂಪ್‌ ಕಾರ್ಡ್‌ ಆಗಿ ಬಳಸಿಕೊಳ್ಳುವ ಇರಾದೆಯನ್ನು ವ್ಯಕ್ತಪಡಿಸಿದೆ.

2004ರಲ್ಲಿ ಬಿಜೆಪಿ ಸೇರಿದ್ದ ಸಿಧು, ಅಂದಿನಿಂದ 2014ರವರೆಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಬಂದಿದ್ದರು. 2016ರಲ್ಲಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು. ಆದರೆ 2017ರಲ್ಲಿ ಬಿಜೆಪಿ ತೊರೆದಿದ್ದ ಸಿಧು ಕಾಂಗ್ರೆಸ್‌ ಸೇರಿದ್ದರು. ಜೊತೆಗೆ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್