ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಯಾಬ್ ಸೈನಿ

By Mahmad Rafik  |  First Published Oct 17, 2024, 2:11 PM IST

ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಬಿಜೆಪಿ ಮತ್ತು ಎನ್‌ಡಿಎಯ ಹಿರಿಯ ನಾಯಕರು ಉಪಸ್ಥಿತರಿದ್ದರು.


ಚಂಡೀಗಢ: ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಘ್ ಸೈನಿ ಪ್ರಮಾಣ ವಚನ ಸ್ವೀಕರಿಸಿದರು. ಚಂಡೀಗಢ  ನಗರದ ಶಾಲಿಮರ್ ಮೈದಾನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು. ಇವರೆಲ್ಲರ ಸಮ್ಮುಖದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ನಯಾಬ ಸೈನಿ ಪ್ರಮಾಣವಚನ ಸ್ವೀಕರಿಸಿದರು. ಚುನಾವಣೆಯಲ್ಲಿಯೂ ನಯಾಬ್ ಸೈನಿಯೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿತರಾಗಿದ್ದರು. ಶಾಸಕಾಂಗ ಸಭೆಯಲ್ಲಿಯೂ ನಯಾಬ್ ಸೈನಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು 

ಹರಿಯಾಣದ 90  ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 48 ಮತ್ತು ಕಾಂಗ್ರೆಸ್ 37ರಲ್ಲಿ ಗೆದ್ದಿತ್ತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಬಿಜೆಪಿ ಮತ್ತು ಎನ್‌ಡಿಎಯ ಹಿರಿಯ ನಾಯಕರು ಉಪಸ್ಥಿತರಿದ್ದರು. 

| Haryana CM Nayab Singh Saini and all the newly inducted ministers pose for a photograph with PM Narendra Modi, after the conclusion of the swearing-in ceremony in Panchkula. pic.twitter.com/AMFmAOBLXV

— ANI (@ANI)

Tap to resize

Latest Videos

click me!