ಮಳೆಯ ನಡುವೆ ತರಬೇತಿ ಪಡೆಯುತ್ತಿದ್ದವರ ಮೇಲೆ ಹಿರಿಯ ಎನ್‌ಸಿಸಿ ಕೆಡೆಟ್ ಮನಬಂದಂತೆ ಥಳಿಸಿದ್ದಾರೆ ಎಂದು ತಿಳಿದುಬಂದಿದೆ. ಒಬ್ಬರಾದ ಮೇಲೆ ಒಬ್ಬ ವಿದ್ಯಾರ್ಥಿಗಳ ಮೇಲೆ ಹೊಡೆದಿದ್ದು, ಈ ವಿಡಿಯೋ ವೈರಲ್ ಆಗಿದೆ.
ಥಾಣೆ (ಆಗಸ್ಟ್ 3, 2023): ಮಹಾರಾಷ್ಟ್ರದ ಥಾಣೆಯ ಕಾಲೇಜೊಂದರಲ್ಲಿ ಮಳೆಯ ನಡುವೆ ಕೆಸರು ಗುಂಡಿಯಲ್ಲಿ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಮನಬಂದಂತೆ ಅಮಾನುಷವಾಗಿ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ದೊನ್ಣೆಯಿಂದ ಮನಬಂದಂತೆ ಹಲ್ಲೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಸುಮಾರು ಎಂಟು ಯುವಕರು ಎನ್‌ಸಿಸಿ ಕೆಡೆಟ್‌ಗಳು ಎಂದು ತಿಳಿದುಬಂದಿದ್ದು, ಮಳೆಯ ನಡುವೆ ಕೊಚ್ಚೆ ಗುಂಡಿಯಲ್ಲಿ ಪುಷ್-ಅಪ್ ಪೊಸಿಷನ್‌ನಲ್ಲಿದ್ದವರ ಮೇಲೆ ಹಿರಿಯ ಎನ್‌ಸಿಸಿ ಕೆಡೆಟ್ ಮನಬಂದಂತೆ ಥಳಿಸಿದ್ದಾರೆ ಎಂದು ತಿಳಿದುಬಂದಿದೆ. ಒಬ್ಬರಾದ ಮೇಲೆ ಒಬ್ಬ ವಿದ್ಯಾರ್ಥಿಗಳ ಮೇಲೆ ಹೊಡೆದಿದ್ದು, ಗುರುವಾರ ಈ ವಿಡಿಯೋ ವೈರಲ್ ಆಗಿದೆ. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಸದಸ್ಯರು ತರಬೇತಿಯಲ್ಲಿ ತೊಡಗಿರುವ ಈ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಶೇರ್ ಮಾಡಿಕೊಳ್ಳಲಾಗಿದೆ.
undefined
ಇದನ್ನು ಓದಿ: 2ನೇ ಮದ್ವೆಯಾಗಿದ್ಕೆ ಸತ್ತ ಮೇಲೂ ಸವತಿ ಕಾಡಿದ ಮೊದಲ ಹೆಂಡ್ತಿ: ‘ಆತ್ಮ’ದ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ
This Video is horrific, allegedly from a college in Thane, Maharashtra, where the trainer is mercilessly beating up what looks like NCC cadets!
The entire team should be Jailed pic.twitter.com/b2PtqnvPA9
ಮಹಾರಾಷ್ಟ್ರ ರಾಜಧಾನಿ ಮುಂಬೈಗೆ ಹೊಂದಿಕೊಂಡಿರುವ ಥಾಣೆಯ ಬಂಡೋಡ್ಕರ್ ಕಾಲೇಜಿನಲ್ಲಿ ನಡೆಯುತ್ತಿರುವ ಎನ್‌ಸಿಸಿ ತರಬೇತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ಹೇಳಿದರೆ, ಕಾಲೇಜು ಅಧಿಕಾರಿಗಳು ವಿವರಗಳನ್ನು ಪತ್ತೆಹಚ್ಚಲು ತನಿಖೆಯನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ. ವಿದ್ಯಾ ಪ್ರಸಾರಕ್ ಮಂಡಲ್ ಕ್ಯಾಂಪಸ್‌ನಲ್ಲಿ ಬಂಡೋಡ್ಕರ್ ಹಾಗೂ ಜೋಷಿ - ಬೇಡೇಕರ್ ಕಾಲೇಜುಗಳಿದ್ದು, ಈ ಪೈಕಿ ಬಂಡೋಡ್ಕರ್ ಕಾಲೇಜಲ್ಲಿ ಈ ಘಟನೆ ನಡೆದಿದೆ.
ಈ ವಿಡಿಯೋಗೆ ವಿದ್ಯಾರ್ಥಿ ಸಮುದಾಯ, ಪೋಷಕರು, ನೆಟ್ಟಿಗರು ಮತ್ತು ಸ್ಥಳೀಯ ಮುಖಂಡರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅವರು ಬೋಧಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಈ ವಿಡಿಯೋವನ್ನು ಕಾಲೇಜಿನ ವಿದ್ಯಾರ್ಥಿಯೊಬ್ಬ ಚಿತ್ರೀಕರಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಡಿಯೋದಲ್ಲಿ ಕೋಲು ಹಿಡಿದಿರುವ ವ್ಯಕ್ತಿಯನ್ನು ಹಿರಿಯ ಎನ್‌ಸಿಸಿ ಕೆಡೆಟ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಬಾಲಕಿ ರೇಪ್ ಮಾಡಿ ಸಾಕ್ಷ್ಯ ನಾಶ ಮಾಡಲು ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟು ಕೊಂದ ಪಾಪಿಗಳು!
ಸರಿಯಾಗಿ ತರಬೇತಿ ನಡೆಯದ ನೆಪದಲ್ಲಿ ಹೀನಾಯವಾಗಿ ಥಳಿಸಿದ್ದು, ಕೆಲ ಕೆಡೆಟ್‌ಗಳು ಥಳಿತಕ್ಕೆ ಅಳುತ್ತಿರುವುದು ಕಂಡುಬಂದಿದೆ. ಕಾಲೇಜಿನ ವಿದ್ಯಾರ್ಥಿಯೊಬ್ಬ ಕಿಟಕಿಯ ಹಿಂದಿನಿಂದ ವಿಡಿಯೋ ತೆಗೆದಿದ್ದಾನೆ ಎಂದು ಹೇಳಲಾಗಿದೆ.
ಇನ್ನು, ಈ ಬಗ್ಗೆ ಘಟನೆ ನಡೆದ ಬಂಡೋಡ್ಕರ್ ಕಾಲೇಜಿನ ಪ್ರಾಂಶುಪಾಲೆ ಸುಚಿತ್ರಾ ನಾಯ್ಕ್ ಪ್ರತಿಕ್ರಿಯೆ ನೀಡಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದ್ದಾರೆ. ಅಂತಹ ವರ್ತನೆಯನ್ನು ನಾವು ಸಹಿಸುವುದಿಲ್ಲ. ಹಿರಿಯ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆ ಪುನರಾವರ್ತನೆಯಾಗದಂತೆ ಇರಲು ಸಮಿತಿ ರಚಿಸುತ್ತಿದ್ದೇವೆ ಎಂದೂ ಅವರು ಹೇಳಿದರು. ‘’ಅವನು ಎನ್‌ಸಿಸಿ ವಿದ್ಯಾರ್ಥಿ. ಕ್ರಮ ತೆಗೆದುಕೊಳ್ಳಲಾಗುವುದು. ಆದರೆ ಎನ್‌ಸಿಸಿಯಿಂದ ಇಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಲಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ" ಎಂದು ಅವರು ಹೇಳಿದರು.
ಇದನ್ನೂ ಓದಿ: Bengaluru Crime: ಯುವತಿ ಜತೆ ಲವ್ವಿಡವ್ವಿ: ಫ್ರೆಂಡ್ಸ್ ಜತೆ ಡ್ಯಾನ್ಸ್ ಟೀಚರ್‌ನಿಂದ ಗ್ಯಾಂಗ್‌ರೇಪ್!
‘’ಸುಮಾರು 40 ವರ್ಷಗಳಿಂದ ಇಲ್ಲಿ ಎನ್‌ಸಿಸಿ ತರಬೇತಿ ನಡೆಯುತ್ತಿದೆ. ಶಿಕ್ಷಕರ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಮಾಡಿದ್ದು, ಮಾನಸಿಕ ಅಸ್ವಸ್ಥರು ಮಾತ್ರ ಮಾಡಬಲ್ಲರು ಎಂಬುದು ಕೃತ್ಯದಿಂದ ತಿಳಿದು ಬಂದಿದೆ’’ ಎಂದು ಪ್ರಾಂಶುಪಾಲರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ತಂದೆಯ ಸಹೋದ್ಯೋಗಿಗಳಿಂದ ಅಪ್ರಾಪ್ತ ಸೋದರಿಯರ ಗ್ಯಾಂಗ್ ರೇಪ್: ಗರ್ಭಿಣಿಯಾದ ಬಾಲಕಿಯರು