ರಾಮ ಮಂದಿರ ಪ್ರಾಣಪ್ರತಿಷ್ಠೆ ದಿನ ಅರ್ಧ ದಿನ ರಜೆ ಘೋಷಿಸಿದ ನ್ಯಾಧಿಕರಣದ NCDRC!

Published : Jan 18, 2024, 10:24 PM IST
ರಾಮ ಮಂದಿರ ಪ್ರಾಣಪ್ರತಿಷ್ಠೆ ದಿನ ಅರ್ಧ ದಿನ ರಜೆ ಘೋಷಿಸಿದ ನ್ಯಾಧಿಕರಣದ NCDRC!

ಸಾರಾಂಶ

ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕಾತರ ಹೆಚ್ಚಾಗಿದೆ. ದೇಶಾದ್ಯಂತ ದೀವಾವಳಿ ರೀತಿಯ ಸಡಗರ ಮನೆ ಮಾಡಿದೆ. ಇದೀಗ  ರಾಷ್ಟ್ರೀಯ ಗ್ರಾಹಕ ವಿವಾದಗಳ ಪರಿಹಾರ ಆಯೋಗ ಜನವರಿ 22ರಂದು ಅರ್ಧ ದಿನ ರಜೆ ಘೋಷಿಸಿದೆ.  

ನವದೆಹಲಿ(ಜ.18) ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಕೇಂದ್ರ ಸರ್ಕಾರ ಈಗಾಗಲೇ ಸರ್ಕಾರಿ ನೌಕರರು, ಕೇಂದ್ರ ಸರ್ಕಾರ ಅಧೀನದಲ್ಲಿರುವ ಸಂಸ್ಥೆಗಳಿಗೆ ಅರ್ಧ ದಿನ ರಜೆ ಘೋಷಿಸಿದೆ. ಇದೀಗ ರಾಷ್ಟ್ರೀಯ ಗ್ರಾಹಕ ವಿವಾದಗಳ ಪರಿಹಾರ ಆಯೋಗ(NCDRC) ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಅರ್ಧ ದಿನ ರಜೆ ಘೋಷಿಸಿದೆ. ಇದರಿಂದ ಜನವರಿ 22ರಂದು ನ್ಯಾಯಾಧಿಕರಣದ ಆಡಳಿತಾತ್ಮಕ ವಿಭಾಗದ ಕಾರ್ಯಚಟುವಟಿಕೆ ಮಧ್ಯಾಹ್ನ 2.30ರಿಂದ ಆರಂಭಗೊಳ್ಳಲಿದೆ.

ಕೇಂದ್ರ ಸರ್ಕಾರ ಸರ್ಕಾರಿ ನೌಕರರು, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥಗಳಿಗೆ ಅರ್ಧ ದಿನ ರಜೆ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಗ್ರಾಹಕ ವಿವಾದಗಳ ಪರಿಹಾರ ಆಯೋಗ ಕೂಡ ಹಾಫ್ ಡೇ ಲೀವ್ ಘೋಷಿಸಿಸಿದೆ. ಜನವರಿ 22ರ ಸೋಮವಾರ ಬೆಳಗ್ಗೆ 10 ಗಂಟೆಗೆ ಆರಂಭವಾಗಬೇಕಿದ್ದ ನ್ಯಾಯಾಂಗ ವಿಭಾಗದ ಆಡಳಿತಾತ್ಮಕ ಕಾರ್ಯಚಟುವಟಿಕೆಗಳು ಪ್ರಾಣಪ್ರತಿಷ್ಠೆ ಹಿನ್ನಲೆಯಲ್ಲಿ ಮಧ್ಯಾಹ್ನ 2.30ರಿಂದ ಆರಂಭಗೊಳ್ಳಲಿದೆ.

ರಾಮ ಮಂದಿರ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ, ಮೊಬೈಲ್ ಬಳಕೆ ನಿಷೇಧ!

ಆಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರದಲ್ಲಿ ಜನವರಿ 22ರ 12.30ಕ್ಕೆ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ.ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ಇದಕ್ಕಾಗಿ ಪ್ರಧಾನಿ ಮೋದಿ 11 ದಿನಗಳ ಕಠಿಣ ವೃತ ಕೈಗೊಂಡಿದ್ದಾರೆ. ಸದ್ಯ ದಕ್ಷಿಣ ಪ್ರವಾಸದಲ್ಲಿರುವ ಮೋದಿ ಶ್ರೀರಾಮನ ಜೊತೆ ಬೆಸೆದುಕೊಂಡಿರುವ ದಕ್ಷಿಣ ಭಾರತದ ಹಲವು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ಪ್ರಧಾನಿ ಮೋದಿ, ಆಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಮುಖ ಸದಸ್ಯರು ಸೇರಿದಂತೆ ಕೆಲವೇ ಕೆಲವು ಮಂದಿ ಮಾತ್ರ ಗರ್ಭಗುಡಿಯಲ್ಲಿ ಉಪಸ್ಥಿತರಾಗಲಿದ್ದಾರೆ. 12.30ರ ಶುಭಮಹೂರ್ತದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆಯಲಿದೆ.

ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕೇಂದ್ರ ಸರ್ಕಾರದ ಗಿಫ್ಟ್, ಅರ್ಧ ದಿನ ರಜೆ ಘೋಷಣೆ!

ಇಂದು(ಜ.18) ರಾಮ ಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಜನವರಿ 16ರಿಂದಲೇ ರಾಮ ಮಂದಿರದಲ್ಲಿ ಪೂಜೆಗಳು ನಡೆಯುತ್ತಿದೆ. ಜನವರಿ 22ರಂದು ಪ್ರಾಣಪ್ರತಿಷ್ಠೆ ಬಳಿಕ ಅಂದರೆ ಜನವರಿ 23ರಿಂದ ಆಯೋಧ್ಯೆ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!