ಇದು ಭಾರತದ ಅತ್ಯಂತ ಸುರಕ್ಷಿತ ನಗರ: NCRB ವರದಿ!

Suvarna News   | Asianet News
Published : Jan 10, 2020, 07:06 PM ISTUpdated : Jan 10, 2020, 07:11 PM IST
ಇದು ಭಾರತದ ಅತ್ಯಂತ ಸುರಕ್ಷಿತ ನಗರ: NCRB ವರದಿ!

ಸಾರಾಂಶ

ವಾಸಿಸಲು ಭಾರತದ ಅತ್ಯಂತ ಸುರಕ್ಷಿತ ನಗರ ಯಾವುದು?| 2018ರ NCRB ವರದಿಯಲ್ಲಿ ಕೋಲ್ಕತ್ತಾಗೆ ಪ್ರಥಮ ಸ್ಥಾನ| 'ಭಾರತದ ಅತ್ಯಂತ ಸುರಕ್ಷಿತ ಹಾಗೂ ಅಪರಾಧ ಪ್ರಮಾಣ ಕಡಿಮೆ ಇರುವ ನಗರ'| ರಾಷ್ಟ್ರೀಯ  ಅಪರಾಧ ದಾಖಲೆಗಳ ಬ್ಯುರೋ ವರದಿ | ಮಹಿಳೆಯ ವಿರುದ್ಧದ ಅಪೊರಾಧ ಪ್ರಕರಣಗಳು ಅತ್ಯಂತ ಕಡಿಮೆ| ನಂತರದ ಸ್ಥಾನದಲ್ಲಿ ಹೈದರಾಬಾದ್, ಪುಣೆ, ಮುಂಬೈ ನಗರಗಳು|

ನವದೆಹಲಿ(ಜ.10): ಪ.ಬಂಗಾಳ ರಾಜಧಾನಿ ಕೋಲ್ಕತ್ತಾ ಭಾರತದ ಅತ್ಯಂತ ಸುರಕ್ಷಿತ ಹಾಗೂ ಅಪರಾಧ ಪ್ರಮಾಣ ಕಡಿಮೆ ಇರುವ ನಗರ ಎಂದು ರಾಷ್ಟ್ರೀಯ  ಅಪರಾಧ ದಾಖಲೆಗಳ ಬ್ಯುರೋ ವರದಿ ಹೇಳಿದೆ.

2018ರ ರಾಷ್ಟ್ರೀಯ ಅಪರಾಧ ದಾಖಲೆಗಳ ವರದಿ ಪ್ರಕಟಿಸಿರುವ NCRB, ಕೋಲ್ಕತ್ತಾದಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಅಪರಾಧ ಪ್ರಕರಣ ದಾಖಲಾಗಿದೆ ಎಂದು ಉಲ್ಲೇಖಿಸಿದೆ.

152.2 ಅಂಕಗಳೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಕೋಲ್ಕತ್ತಾ, ವಾಸಿಸಲು ಅತ್ಯಂತ ಸುರಕ್ಷಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2016ರಿಂದಲೇ ಕೋಲ್ಕತ್ತಾ ಪ್ರಥಮ ಸ್ಥಾನದಲ್ಲಿರುವುದು ವಿಶೇಷ.

ಬೆಂಗಳೂರಿನಲ್ಲಿ ಕಾಮುಕರಿಗೆ ಉಳಿಗಾಲವಿಲ್ಲ..ಇವು ಮಾಮೂಲಿ ಸಿಸಿ ಕ್ಯಾಮರಾ ಅಲ್ಲ!

ಇಷ್ಟೇ ಅಲ್ಲದೇ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಕೋಲ್ಕತ್ತಾದಲ್ಲಿ ಶೂನ್ಯ ಎನಿಸುವಷ್ಟು ಕಡಿಮೆ ಎಂದು NCRB ವರದಿ ಸ್ಪಷ್ಟಪಡಿಸಿದೆ.

ಹರಿಯಾಣ, ರಾಜಸ್ಥಾನ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ಹೆಚ್ಚು ಎಂಬುದು NCRB ವರದಿಯಿಂದ ಬಹಿರಂಗವಾಗಿದೆ. 

ಇನ್ನು ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಹೈದರಾಬಾದ್ ಎರಡನೇ, ಪುಣೆ ಮೂರನೇ ಹಾಗೂ ಮುಂಬೈ ನಾಲ್ಕನೇ ಸ್ಥಾನ ಗಿಟ್ಟಿಸಿಕೊಂಡಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ