ಎನ್‌ಡಿಎಗೆ ಮತ್ತೆ ಅಧಿಕಾರ: ನಿತೀಶ್‌ 4ನೇ ಬಾರಿ ಸಿಎಂ!

Published : Sep 26, 2020, 10:23 AM ISTUpdated : Sep 26, 2020, 10:46 AM IST
ಎನ್‌ಡಿಎಗೆ ಮತ್ತೆ ಅಧಿಕಾರ: ನಿತೀಶ್‌ 4ನೇ ಬಾರಿ ಸಿಎಂ!

ಸಾರಾಂಶ

ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಪ್ರಕಟ| ಎನ್‌ಡಿಎಗೆ ಮತ್ತೆ ಅಧಿಕಾರಕ್ಕೆ:ನಿತೀಶ್‌ 4ನೇ ಬಾರಿ ಸಿಎಂ!| ಎಬಿಪಿ ನ್ಯೂಸ್‌- ಸಿವೋಟರ್‌ ಸಮೀಕ್ಷೆ

ಪಟನಾ/ನವದೆಹಲಿ(ಸೆ.26): ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದ ಬೆನ್ನಲ್ಲೇ, ತಕ್ಷಣಕ್ಕೆ ಚುನಾವಣೆ ನಡೆದರೆ ಯಾರು ಗೆಲ್ಲಬಹುದು ಎಂಬುದರ ಕುರಿತು ಎಬಿಪಿ ನ್ಯೂಸ್‌- ಸಿ ವೋಟರ್‌ ಸಮೀಕ್ಷೆಯೊಂದನ್ನು ನಡೆಸಿದೆ.

ಅದರನ್ವಯ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ನಿತೀಶ್‌ 4ನೇ ಸಲ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. 243 ಸಂಖ್ಯಾಬಲದ ವಿಧಾನಸಭೆಯಲ್ಲಿ ಎನ್‌ಡಿಎ ಶೇ.45ರಷ್ಟು ಮತ ಗಳಿಕೆಯೊಂದಿಗೆ 141- 161 ಸೀಟು ಗೆಲ್ಲಲಿದೆ.

ಇನ್ನು ಕಾಂಗ್ರೆಸ್‌ ಮತ್ತು ಆರ್‌ಜೆಡಿ ಪಕ್ಷಗಳು 64-84 ಸೀಟುಗಳು ಮತ್ತು ಇತರ ಪಕ್ಷಗಳು 13-23 ಸ್ಥಾನಗಳನ್ನು ಗೆಲ್ಲಬಹುದು ಎಂದು ಈ ಸಮೀಕ್ಷೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live:ಇಂಡಿಗೋ ಏರ್‌ಲೈನ್ಸ್ ಸಮಸ್ಯೆ ತನಿಖೆಗೆ 4 ಸದಸ್ಯರ ತಂಡ ರಚಿಸಿದ ಕೇಂದ್ರ ಸರ್ಕಾರ
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌