ಭಾರತ್ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆ, ದೇಶವ್ಯಾಪಿ ಪ್ರತಿಭಟನೆ ಕಿಚ್ಚು!

By Suvarna News  |  First Published Dec 4, 2020, 8:10 PM IST

ಕೃಷಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸರ್ಕಾರದ ಜೊತೆಗಿನ ಮಾತುಕತೆ ವಿಫಲವಾಗಿದೆ. ಪಂಜಾಬ್, ದೆಹಲಿಯಲ್ಲಿನ ಪ್ರತಿಭಟನೆ ಕಿಚ್ಚು ದೇಶವ್ಯಾಪಿ ಹಬ್ಬಿಸಲು ರೈತಸಂಘಟನೆ ಭಾರತ್ ಬಂದ್‌ಗೆ ಕರೆ ನೀಡಿದೆ.


ನವದೆಹಲಿ(ಡಿ.04):  ಪಂಜಾಬ್‌ನಿಂದ ಆರಂಭಗೊಂಡ ನವದೆಹಲಿದಲ್ಲಿ ಭಾರಿ ಸದ್ದು ಮಾಡುತ್ತಿರುವ ರೈತರ ಪ್ರತಿಭಟನೆ ಇದೀಗ ಮುಂದಿನ ಹಂತಕ್ಕೆ ಲಗ್ಗೆ ಇಟ್ಟಿದೆ. ಹೊಸ ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಭಾರಿ ಪ್ರತಿಭಟನೆ ದೇಶದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಇದೀಗ ಪ್ರತಿಭಟನೆಯ ಗಂಭೀರತೆಯನ್ನು ಸರ್ಕಾರಕ್ಕೆ ತಿಳಿಸಲು ರೈತ ಸಂಘಟನೆಗಳು ಡಿಸೆಂಬರ್ 8 ರಂದು ಭಾರತ್ ಬಂದ್‌ಗೆ ಕರೆ ನೀಡಿದೆ.

ಕನಿಷ್ಠ ಬೆಂಬಲ ಬೆಲೆ ತಂಟೆಗೆ ಸರ್ಕಾರ ಹೋಗಲ್ಲ : ಕೇಂದ್ರ ಸರ್ಕಾರ

Latest Videos

undefined

ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಆದರೆ ಸರ್ಕಾರ ಪಟ್ಟು ಸಡಿಲಿಸುತ್ತಿಲ್ಲ. ಸರ್ಕಾರ ಇತ್ತೀಚೆಗೆ ಜಾರಿಗೆ ತಂದ 3 ಕಾಯ್ದೆಗಳನ್ನು ಸರ್ಕಾರ ಹಿಂಪಡೆಯಬೇಕು. ಆದರೆ ಸರ್ಕಾರ ಯಾವುದೇ ರೀತಿ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದೆ.

ರೈತರ ಜತೆ ಕೇಂದ್ರದ ಸಂಧಾನ ವಿಫಲ

ಈಗಾಗಲೇ ರೈತರ ಪ್ರತಿಭಟನೆಗೆ ಹಲವು ಸೆಲೆಬ್ರೆಟಿಗಳು ಬೆಂಬಲ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ.  ಕೃಷಿ ಕಾನೂನು ಹಿಂತೆಗೆದುಕೊಳ್ಳದಿದ್ದರೆ, ಪ್ರತಿಭಟನೆ ಸ್ವರೂಪ ಬದಲಾಗಲಿದೆ ಎಂದು ಭಾರತ್ ಕಿಸಾನ್ ಸಭೆ ಕಾರ್ಯದರ್ಶಿ ಹನ್ನನ್ ಮೊಲ್ಲ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಪ್ರತಿಭಟನಾ ನಿರತ ರೈತರು ಹಾಗೂ ಸಂಘಟನೆಗಳ ಮುಖಂಡರ ಜೊತೆ ಸರ್ಕಾರ ನಡೆಸಿದ 2 ಸುತ್ತಿನ ಮಾತುಕತೆ ವಿಫಲವಾಗಿದೆ. ಮೂರನೇ ಸುತ್ತಿನ ಮಾತುಕತೆಗೆ ಸರ್ಕಾರ ಆಹ್ವಾನ ನೀಡಿದೆ. ಇದರ ಬೆನ್ನಲ್ಲೈ ರೈತ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದೆ.

click me!