ನವದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಿಗೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದ್ದು, ರಾಜಕೀಯ ನಾಯಕರ ಆತಂಕಕ್ಕೆ ಕಾರಣವಾಗಿದೆ.
ನವದೆಹಲಿ, (ಜೂನ್, 13): ನವದೆಹಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಲ್ಲಿ ಕೋವಿಡ್ -19 ಸೋಂಕು ಇರುವುದು ಶನಿವಾರ ದೃಢಪಟ್ಟಿದೆ.
ರೂಂ ಬಾಯ್ ಆಗಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ 25 ವರ್ಷದ ಯುವಕನಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ.
undefined
ಜೂನ್ 8ರವರೆಗೆ ಕೆಲಸಕ್ಕೆ ಬಂದಿದ್ದ ಈ ವ್ಯಕ್ತಿ ಜ್ವರದಿಂದ ಬಳಲಿದ್ದರಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಶನಿವಾರ ಸೋಂಕು ಇರುವುದು ದೃಢಪಟ್ಟಿದೆ.
ಬೆಂಗ್ಳೂರು ಡಾಕ್ಟರ್‌ಗೆ, ಬಿಎಸ್‌ಎಫ್ ಯೋಧನಿಗೆ ಕೊರೋನಾ ಪಾಸಿಟಿವ್
ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನ-1ರಲ್ಲಿ ಈ ವ್ಯಕ್ತಿ ರೂಂ ಬಾಯ್ ಕೆಲಸ ಮಾಡುತ್ತಿದ್ದ. ಇವರ ಸಂಪರ್ಕಕ್ಕೆ ಬಂದಿದ್ದ ಇತರ ಸಿಬ್ಬಂದಿ ಯಾರು ಎಂಬ ಕುರಿತು ಪತ್ತೆ ಮಾಡುವ ಕಾರ್ಯ ನಡೆದಿದೆ.
ದೆಹಲಿಯ ನಿವಾಸಿಯಾಗಿರುವ ಈ ವ್ಯಕ್ತಿಗೆ ಭವನದ ಸಿಬ್ಬಂದಿ ಅಲ್ಲದ, ಇತರರ ಸಂಪರ್ಕದಿಂದ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.
#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್